ಮೈಸೂರು (ಸೆ. 10): ಕರ್ನಾಟಕದಲ್ಲಿ ಭಾರೀ ಚರ್ಚೆಯಲ್ಲಿರುವ ಡ್ರಗ್ಸ್ ದಂಧೆ ಕೇವಲ ಸ್ಯಾಂಡಲ್ವುಡ್ಗೆ ಸೀಮಿತವಾಗಿಲ್ಲ. ಶಾಲಾ-ಕಾಲೇಜುಗಳಲ್ಲಿಯೂ ಡ್ರಗ್ಸ್ ದಂಧೆ ನಡೆಯುತ್ತಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದರು. ಇದಕ್ಕೆ ಸಹಮತ ವ್ಯಕ್ತಪಡಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಮೈಸೂರಿನ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಬಳಕೆಯಾಗುತ್ತಿರುವುದು ನಿಜ. ಆದರೆ, ಅದು ಯಾವ ಕಾಲೇಜುಗಳಲ್ಲಿ ಎಂಬುದನ್ನು ನಾನು ಹೇಳುವುದಿಲ್ಲ ಎಂದು ಅಚ್ಚರಿಯ ಮಾಹಿತಿ ಹೊರಹಾಕಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ ಮಾತ್ರವಲ್ಲ, ಮೈಸೂರಿನ ಅನೇಕ ಹೈಸ್ಕೂಲ್, ಕಾಲೇಜುಗಳಲ್ಲಿಯೂ ಡ್ರಗ್ಸ್ ಸೇವನೆ ಹೆಚ್ಚಾಗಿದೆ. ಈ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು. ಮೈಸೂರಿನ ಹಲವು ಕಾಲೇಜಿನಲ್ಲಿ ಡ್ರಗ್ಸ್ ಜಾಲ ಇದೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಜನಾಂದೋಲನ ಶುರು ಮಾಡುತ್ತೇವೆ. ಲವ್ ಜಿಹಾದ್ ಮಾದರಿಯಲ್ಲಿಯೇ ಡ್ರಗ್ಸ್ ಜಿಹಾದ್ ನಡೆಯುತ್ತಿದೆ. ಇದು ದೇಶಾದ್ಯಂತ ವ್ಯಾಪಿಸಿದೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇದರ ಮೂಲ ರೂವಾರಿ ಎಂದು ಪ್ರಮೋದ್ ಮುತಾಲಿಕ್ ಆರೋಪಿಸಿದ್ದರು.
ಶಾಲೆ, ಕಾಲೇಜುಗಳ ಆವರಣದಲ್ಲಿ ಡ್ರಗ್ ಸಿಗುತ್ತದೆ. ಮೈಸೂರಿನ ಮಹಾಜನ ಕಾಲೇಜು, ಜೆಎಸ್‌ಎಸ್ ದಂತ ಕಾಲೇಜು, ಜೆಎಸ್‌ಎಸ್ ವೈದ್ಯಕೀಯ, ಸಂತ ಫಿಲೋಮಿನಾ ಕಾಲೇಜುಗಳಲ್ಲಿ ಡ್ರಗ್ ಸಿಗುತ್ತದೆ. ಇದು ಪೋಷಕರು, ಪಾಲಕರು, ಶಿಕ್ಷಕರಿಗೂ ಗೊತ್ತಿದೆ. ಕಾಲೇಜುಗಳಲ್ಲಿ ಡ್ರಗ್ಸ್ ಸಿಗುವ ವಿಚಾರ ಗೊತ್ತಿದ್ದರೂ ಯಾರೊಬ್ಬರೂ ಈ ಬಗ್ಗೆ ಮಾತನಾಡುತ್ತಿಲ್ಲ. ಹೊರ ದೇಶದ ವಿದ್ಯಾರ್ಥಿಗಳು ಲಕ್ಷಾಂತರ ರೂ. ಖರ್ಚು ಮಾಡಿಕೊಂಡು ಕಾಲೇಜು ಸೇರುತ್ತಾರೆ. ಈಗಲೂ ಹಾಸ್ಟೆಲ್‌ಗಳ ಮೇಲೆ ದಾಳಿ ಮಾಡಿ ನೋಡಿ. ನಾನು ಚಾಲೆಂಜ್ ಮಾಡುತ್ತೇನೆ. ಹಾಸ್ಟೆಲ್‌ಗಳನ್ನು ಚೆಕ್ ಮಾಡಿದರೆ ಡ್ರಗ್ಸ್, ಹೆರಾಯಿನ್ ಎಲ್ಲವೂ ಸಿಗುತ್ತವೆ ಎಂದು ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದರು.
ಇದನ್ನೂ ಓದಿ: Karnataka Drug Mafia: ರಾಜಕಾರಣಿಗಳೇ ಡ್ರಗ್ಸ್ ದಂಧೆ ನಡೆಸುತ್ತಿದ್ದಾರೆ; ಪ್ರಮೋದ್ ಮುತಾಲಿಕ್ ಗಂಭೀರ ಆರೋಪ
ಪ್ರಮೋದ್ ಮುತಾಲಿಕ್ ಅವರ ಈ ಆರೋಪಕ್ಕೆ ಬೆಂಬಲ ಸೂಚಿಸಿರುವ ಸಂಸದ ಪ್ರತಾಪ್ ಸಿಂಹ, ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಮಾರಾಟ ಆಗುತ್ತಿದೆ. ಯಾವ ಕಾಲೇಜು ಅಂತ ನಾನು ಹೆಸರು ಹೇಳುವುದಿಲ್ಲ. ಆದರೆ ಬಹುತೇಕ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಳಸುತ್ತಿದ್ದಾರೆ. ಮದ್ಯಪಾನ, ಧೂಮಪಾನ ಮಾಡಿದರೆ ಪೋಷಕರಿಗೆ ಗೊತ್ತಾಗುತ್ತದೆ. ಆದರೆ ಡ್ರಗ್ಸ್ ಸೇವನೆ ಮಾಡಿದರೆ ಯಾರಿಗೂ ಗೊತ್ತಾಗುವುದಿಲ್ಲ. ಇದು ರಾಜ್ಯಾದ್ಯಂತ ಕಂಡುಬರುತ್ತಿದೆ. ಇದನ್ನು ಒಂದು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ