SSLC-PUC ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​​: ಕನಿಷ್ಠ ಹಾಜರಾತಿ ಇಲ್ಲದಿದ್ದರೂ ಬರೆಯಬಹುದು ಪರೀಕ್ಷೆ

ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಕನಿಷ್ಠ ಶೇ 75 ರಷ್ಟು ಹಾಜರಾತಿಯ ನಿಯಮ ಕಡ್ಡಾಯಗೊಳಿಸದಿರಲು ಇಲಾಖೆ ತೀರ್ಮಾನಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಮಾ. 8): ಕಳೆದ ಎರಡೂವರೆ ವರ್ಷಗಳಿಂದ ಕೊರೋನಾ (Covid) ಕಾಟದಿಂದ ಶಿಕ್ಷಣ ಇಲಾಖೆ (Education Board) ಸಂಕಷ್ಟ ಎದುರಾಗಿತ್ತು. ಎಸ್​​ಎಸ್​ಎಲ್​ಸಿ (SSLC) ಎರಡು ದಿನ ಪರೀಕ್ಷೆ ನಡೆಸಿದರೆ, ಇತ್ತ  ಪಿಯುಸಿ (PUC) ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಪಾಸ್ ಮಾಡಿತ್ತು.‌ ಆದರೆ, ಈ ಭಾರೀ ಶಿಕ್ಷಣ ಇಲಾಖೆ ಶಿಕ್ಷಣ ಇಲಾಖೆ ಪರೀಕ್ಷೆ ನಡೆಸಲೇ ಬೇಕು ಎಂಬ ತೀರ್ಮಾನಕ್ಕೆ ಬಂದಿದೆ. ಹೀಗಾಗಿ ಕೋವಿಡ್,  ಹಿಜಾಬ್ ಸಂಘರ್ಷಗಳ ಸಮಸ್ಯೆಗಳಿಂದ ಶಾಲಾ ಕಾಲೇಜುಗಳಿಂದ ದೂರ ಉಳಿದಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಶಿಕ್ಷಣ ಇಲಾಖೆ ಗುಡ್‌ ನ್ಯೂಸ್ ನೀಡಿದೆ. 

ಕಡ್ಡಾಯ ಹಾಜರಾತಿ ನಿಯಮ ಸಡಿಲಿಕೆ

ಈ ಬಾರಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಕೊರೋನಾ ಕಾರಣದಿಂದ ಶಿಕ್ಷಣ ಕ್ಷೇತ್ರ ಬಾರಿ ಹೊಡೆತ ಬಿದ್ದಿದೆ. ಸರಿಯಾದ ಸಮಯಕ್ಕೆ ಪಾಠ ಇಲ್ಲ. ಸರಿಯಾದ ಸಮಯಕ್ಕೆ ಪರೀಕ್ಷೆಗಳು ನಡೆದಿಲ್ಲ. ಇದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಕೊರೋನಾ ಕಂಟಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಅಂತಿಮ‌ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ, ಕಡ್ಡಾಯ ಹಾಜರಾತಿ‌ ನಿಯಮವನ್ನು ಸಡಿಲಿಸಲು ಸರ್ಕಾರ ನಿರ್ಧರಿಸಿದೆ.

ದಾಖಲಾತಿ ಆದವರಿಗೆ ಪರೀಕ್ಷೆ ಬರೆಯಲು ಅವಕಾಶ

ಭೌತಿಕ ತರಗತಿಗಳ ಆರಂಭದ ವಿಳಂಬ, ಆನ್‌ಲೈನ್ ತರಗತಿಗಳ ಸಮಯದಲ್ಲಿ ನೆಟ್‌ವರ್ಕ್ ಸಮಸ್ಯೆಗಳನ್ನು ಪರಿಗಣಿಸಿ, ಈ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಕನಿಷ್ಠ ಶೇ 75 ರಷ್ಟು ಹಾಜರಾತಿಯ ನಿಯಮ ಕಡ್ಡಾಯಗೊಳಿಸದಿರಲು ಇಲಾಖೆ ತೀರ್ಮಾನಿಸಿದೆ. ದಾಖಲಾತಿ ಆಗಿದ್ದರೆ ಮಕ್ಕಳು ಪರೀಕ್ಷೆ ಬರೆಯಲು ಅವಕಾಶ ನೀಡಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸಚಿವ ಬಿ ಸಿ ನಾಗೇಶ್ ತಿಳಿಸಿದರು.

ಇದನ್ನು ಓದಿ: ವರ್ಷಾಂತ್ಯದಲ್ಲಿ ಮೇಕೆದಾಟು ಯೋಜನೆ ಆರಂಭ.. ಸಿಎಂ ಬೊಮ್ಮಾಯಿ EXCLUSIVE ಸಂದರ್ಶನ ಇಲ್ಲಿದೆ..

ವಿದ್ಯಾರ್ಥಿಗಳ ಭವಿಷ್ಯದಿಂದ ಈ ವಿಶೇಷ ಅವಕಾಶ 

ಇನ್ನು ಹಾಜರಾತಿ ಕೊರತೆಯಿಂದ ಪ್ರತಿ ವರ್ಷ ಕನಿಷ್ಠ 3000 ರಿಂದ 4,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವುದಿಲ್ಲ. ಕರ್ನಾಟಕ ಶಿಕ್ಷಣ ಕಾಯಿದೆ, 2006 ರ ನಿಯಮ 21ರ ಪ್ರಕಾರ ವಿದ್ಯಾರ್ಥಿಗಳು 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಲು ಕನಿಷ್ಠ ಶೇ 75 ರಷ್ಟು ಹಾಜರಾತಿಯನ್ನು ಕಡ್ಡಾಯವಿದೆ.

ಇದನ್ನು ಓದಿ: ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಘೋಷಣೆ, ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿ ಬಿಡುಗಡೆ

ಆದರೆ, ಈ ವರ್ಷ ಕೊರೋನಾ ಸೇರಿ ನಾನಾ ಸಮಸ್ಯೆ ಇರುದರಿಂದ ಶಿಕ್ಷಣ ಇಲಾಖೆ ವಿಶೇಷ ಅವಕಾಶ ಮಾಡಿಕೊಡಲು ಮುಂದಾಗಿದೆ. ಈ ವಿಚಾರವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕ ರಾಮಚಂದ್ರನ್ ಸ್ಪಷ್ಟಪಡಿಸಿದ್ದಾರೆ.  ಒಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಎಲ್ಲ ವಿದ್ಯಾರ್ಥಿಗಳಿಗೆ ಎಕ್ಸಾಂ ಬರೆಯಲು ವಿಶೇಷ ಅವಕಾಶ ಮಾಡಿದೆ. ಆದರೆ, ಇದರ ಪ್ರಯೋಜನ ಎಷ್ಟು ವಿದ್ಯಾರ್ಥಿಗಳು ಲಾಭ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಎಸ್​ಎಸ್​ಎಲ್​ಸಿ- ಪಿಯುಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22ನೇ ಸಾಲಿನ ದ್ವಿತೀಯ ಪಿಯುಸಿ  ಪರೀಕ್ಷೆ ದಿನಾಂಕ ಘೋಷಣೆ ಮಾಡಿದೆ. ಏಪ್ರಿಲ್ 22 ರಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಎಸ್​ಎಸ್​ಎಲ್​​ಸಿ ಪರೀಕ್ಷೆ ಮಾರ್ಚ್​ 28ರಿಂದ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್​ 11ರವರೆಗೆ ನಡೆಯಲಿದೆ. ಅಂತಿಮ ವೇಳಾಪಟ್ಟಿ ಅನುಸಾರ ಮಾರ್ಚ್ 28 - ಕನ್ನಡ, ಮಾರ್ಚ್ 30 - ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ, ಏಪ್ರಿಲ್ 1 - ಅರ್ಥಶಾಸ್ತ್ರ, ಏಪ್ರಿಲ್‌ 4 - ಗಣಿತ, ಸಮಾಜ ಶಾಸ್ತ್ರ, ಏಪ್ರಿಲ್ 6 - ಸಮಾಜ‌ ವಿಜ್ಞಾನ, ಏಪ್ರಿಲ್ 8 - ತೃತೀಯ ಭಾಷೆ ಹಿಂದಿ, ಏಪ್ರಿಲ್ 11 - ವಿಜ್ಞಾನ ಪರೀಕ್ಷೆಗಳು ನಡೆಯಲಿದೆ.
Published by:Seema R
First published: