SSLC, PUC ಪರೀಕ್ಷೆ ಇದ್ಯಾ, ಇಲ್ವಾ? ಇವತ್ತು ಗೊತ್ತಾಗುತ್ತೆ; ನಿರ್ಧಾರ ಪ್ರಕಟಿಸಲಿದ್ದಾರೆ ಶಿಕ್ಷಣ ಸಚಿವರು

2020-2021 ನೇ ಸಾಲಿನಲ್ಲಿ 6.72 ಲಕ್ಷ ವಿದ್ಯಾರ್ಥಿಗಳು ಪಿಯು ಪರೀಕ್ಷೆ ಬರೆಯಬೇಕಾಗಿದೆ. ಜೊತೆಗೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತಯಾರಿ ನಡೆಸಿದ್ದಾರೆ.  ಒಟ್ಟು 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಎಕ್ಸಾಂ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು(ಜೂ. 04): ಕೊರೋನಾ ಬಿಕ್ಕಟ್ಟಿನ ನಡುವೆ  ವಿದ್ಯಾರ್ಥಿಗಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆ ನಡೆಸುವುದು ಒಂದು ಸವಾಲೇ ಸರಿ. ಭಾರತದಲ್ಲಿ ಮೂರಲೇ ಅಲೆ ಶುರುವಾಗುವ ಆತಂಕದಿಂದ ಹಾಗೂ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈಗಾಗಲೇ ಸಿಬಿಎಸ್​ಇ ಹಾಗೂ ಐಸಿಎಸ್​ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಹೀಗಾಗಿ ರಾಜ್ಯದಲ್ಲೂ ಎಸ್​ಎಸ್​ಎಲ್​ಸಿ  ಹಾಗೂ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ಎಂಬ ಮನವಿಗಳು ಕೇಳಿ ಬರುತ್ತಿವೆ. ಹೀಗಾಗಿ ಇಂದು ಶಿಕ್ಷಣ ಇಲಾಖೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಇಂದೇ ನಿರ್ಧಾರ ತಿಳಿಸಲಿದೆ. ಹೀಗಾಗಿ ಇಂದೇ 10ನೇ ತರಗತಿ ಹಾಗೂ ಪಿಯು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

  ಇಂದು ಬೆಳಗ್ಗೆ 10 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸಚಿವರಾದ ಎಸ್​. ಸುರೇಶ್​ಕುಮಾರ್​ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುಮಾರು 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಇಂದೇ ನಿರ್ಧಾರವಾಗಲಿದೆ. ಶಿಕ್ಷಣ ಸಚಿವರು ಪರೀಕ್ಷೆ ನಡೆಸಬೇಕಾ? ಬೇಡವಾ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಇವರು ತೆಗೆದುಕೊಳ್ಳುವ ನಿರ್ಧಾರ ಲಕ್ಷಾಂತರ ಪೋಷಕರ ಟೆನ್ಶನ್​ಗೆ ಪರಿಹಾರ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.

  ಇದನ್ನೂ ಓದಿ:Karnataka Monsoon 2021: ಕರ್ನಾಟಕದಲ್ಲಿ ಮುಂಗಾರು ಮಳೆ ಯಾವಾಗ ಶುರು? ಎಲ್ಲೆಲ್ಲಿ ಯಾವಾಗ ಮಳೆಯಾಗುತ್ತೆ?

  2020-2021 ನೇ ಸಾಲಿನಲ್ಲಿ 6.72 ಲಕ್ಷ ವಿದ್ಯಾರ್ಥಿಗಳು ಪಿಯು ಪರೀಕ್ಷೆ ಬರೆಯಬೇಕಾಗಿದೆ. ಜೊತೆಗೆ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ತಯಾರಿ ನಡೆಸಿದ್ದಾರೆ.  ಒಟ್ಟು 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಎಕ್ಸಾಂ ಭವಿಷ್ಯ ಇಂದು ನಿರ್ಧಾರವಾಗಲಿದೆ.

  SSLC, PUC ಪರೀಕ್ಷೆ ಕುರಿತು ಇಂದು ಶಿಕ್ಷಣ ಸಚಿವರು ಮಹತ್ವದ ಸುದ್ದಿಗೋಷ್ಟಿ ನಡೆಸಲಿದ್ದು, ಪರೀಕ್ಷೆ ನಡೆಸಬೇಕೇ? ಬೇಡವೇ ಎಂಬ ಬಗ್ಗೆ ಘೋಷಣೆ ಮಾಡಲಿದ್ದಾರೆ.
  ಕೆ ಆರ್ ಸರ್ಕಲ್‌ ಬಳಿ ಇರುವ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ‌ ಸುದ್ದಿಗೋಷ್ಟಿ ನಡೆಯಲಿದೆ.

  ಆದರೆ ಈ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವಂತೆ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ ಒತ್ತಾಯಿಸುತ್ತಿದೆ. ಕಾಲೇಜು ಹಂತದಲ್ಲಿ ಪರೀಕ್ಷೆ ನಡೆಸುವಂತೆ ಸಲಹೆ ನೀಡುತ್ತಿದೆ.  ಆಯಾ ಕಾಲೇಜುಗಳಲ್ಲೇ ಪರೀಕ್ಷೆ ನಡೆಸಿ ಫಲಿತಾಂಶ ನೀಡುವಂತೆ ಮನವಿ ಮಾಡುತ್ತಿದೆ. ಶಿಕ್ಷಣ ಇಲಾಖೆ ಕಳೆದ ವರ್ಷ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತ್ತು. ಹೀಗಾಗಿ ಈ ವರ್ಷ ಮತ್ತಷ್ಟು ಸೂಕ್ತ ಕ್ರಮಗಳೊಂದಿಗೆ ಪರೀಕ್ಷೆ ನಡೆಸಬೇಕು ಎಂದು ಒತ್ತಾಯ ಮಾಡುತ್ತಿದೆ.

  ಇದನ್ನೂ ಓದಿ:ಮಂಡ್ಯದಲ್ಲಿ ಕೈ ನಾಯಕರ ಎಡವಟ್ಟು; ಫುಡ್ ಕಿಟ್ ವಿತರಣೆ ವೇದಿಕೆಯಲ್ಲಿ ಕೊರೋನಾತಂಕ!

  ಆದರೆ ಪೋಷಕ ವರ್ಗ ಪರೀಕ್ಷೆ ನಡೆಸುವುದು ಬೇಡ ಎಂಬ ಅಭಿಪ್ರಾಯವನ್ನು ಹೊರಹಾಕಿದೆ. ಪೋಷಕರ ಸಮನ್ವಯ ಸಮಿತಿ ಸದಸ್ಯ ಯೋಗಾನಂದ್ ಮಾತನಾಡಿ, ಸಿಬಿಎಸ್​ಇ ಮತ್ತು ಐಸಿಎಸ್​ಇ ಹಾಗೂ ರಾಜ್ಯ ಪಠ್ಯಕ್ರಮ ವಿದ್ಯಾರ್ಥಿಗಳ ನಡುವೆ ತಾರತಮ್ಯ ಉಂಟು ಮಾಡಬಾರದು. ಮಕ್ಕಳ ಆರೋಗ್ಯ ಮುಖ್ಯ. ಸದ್ಯದ ಮಟ್ಟಿಗೆ ಪರೀಕ್ಷೆ ನಡೆಸದೇ ಇರುವುದು ಒಳ್ಳೆಯದು ಎಂದು ಹೇಳಿದ್ದರು.

  ಈ ಬಗ್ಗೆ ನಿನ್ನೆ ಪ್ರತಿಕ್ರಿಯೆ ನೀಡಿದ್ದ ಕಂದಾಯ ಸಚಿವ ಆರ್​.ಅಶೋಕ್, ಪರೀಕ್ಷೆ ನಡೆಸಬೇಕೆಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆದರೆ ನಾವು ಮಕ್ಕಳ ಭವಿಷ್ಯ ನೋಡಬೇಕು. ಒಂದೇ ಗಂಟೆಯಲ್ಲಿ ಪರೀಕ್ಷೆ ನಡೆಸಲು ಸಲಹೆ ನೀಡಲಾಗಿದೆ. ಆಪ್ಷನಲ್ ವಿಷಯಗಳೆಲ್ಲಾ ಸೇರಿ ಒಂದು ಹಾಗೂ ಮುಖ್ಯ ವಿಷಯ ಒಂದು ಮಾಡಿ ಎರಡೇ ಪರೀಕ್ಷೆ ಮಾಡಲು ಸಲಹೆ ನೀಡಲಾಗಿದೆ.  ತಕ್ಷಣಕ್ಕೆ ಪರೀಕ್ಷೆ ಇಲ್ಲ, ಆದರೆ ಅಂತಿಮವಾಗಿ ಸುರೇಶ್ ಕುಮಾರ್ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದ್ದರು.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
  Published by:Latha CG
  First published: