ಮೈಸೂರು(ಮಾ.29): ಕರ್ನಾಟಕ ರಾಜ್ಯ ಚುನಾವಣೆಗೆ (Karnataka Assembly Elections) ಮುಹೂರ್ತ ಫಿಕ್ಸ್ ಆಗಿದೆ. ಮೇ 10ರಂದು ರಾಜ್ಯ ಎಲೆಕ್ಷನ್ ನಡೆಯಲಿದ್ದು, 13ರಂದು ಮತ ಎಣಿಕೆ ನಡೆಯಲಿದೆ. ಈಗಾಗಲೇ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ. ಹೀಗಿರುವಾಗ ರಾಜಕೀಯ ನಾಯಕರು ಸರ್ಕಾರಿ ಕಾರಿಗಳನ್ನು ತೊರೆದು, ಖಾಸಗಿ ಕಾರುಗಳಲ್ಲಿ ಪ್ರಯಾಣ ಆರಂಭಿಸಿದ್ದಾರೆ. ಈ ಪಟ್ಟಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಕೂಡಾ ಸೇರಿದ್ದು, ಮೈಸೂರಿನ ರಾಮಕೃಷ್ಣನಗರದಲ್ಲಿ ಖಾಸಗಿ ಕಾರ್ಯಕ್ರದಲ್ಲಿ ಭಾಗಿಯಾಗಿ ಹಿಂತಿರುಗುತ್ತಿದ್ದ ವೇಳೆ ದಾರಿ ಮಧ್ಯೆ ಸರ್ಕಾರಿ ಕಾರು ತೊರೆದು ಖಾಸಗಿ ಕಾರಿನಲ್ಲಿ ಪ್ರಯಾಣ ಮುಂದುವರೆಸಿದ್ದಾರೆ.
ಕಾರ್ಯಕ್ರಮಕ್ಕೆ ಬರುವಾಗ ಅಧಿಕಾರವಿತ್ತು, ಕಾರ್ಯಕ್ರಮ ಮುಗಿಯುವುದರೊಳಗೆ ಹೋಯ್ತು
ಹೌದು ಕಾಂಗ್ರೆಸ್ ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದು, ಈಗಾಗಲೇ ಟಿಕೆಟ್ ಘೋಷಣೆಯಾಗಿದೆ. ಹೀಗಿರುವಾಗ ಸಿದ್ದರಾಮಯ್ಯ ವರುಣಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಅವರು ಮೈಸೂರಿನ ರಾಮಕೃಷ್ಣನಗರದಲ್ಲಿ ಖಾಸಗಿ ಕಾರ್ಯಕ್ರದಲ್ಲಿ ಭಾಗಿಯಾಗಿದ್ದಾರೆ.
ಹೀಗಿರುವಾಗ ಇತ್ತ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಎಲೆಕ್ಷನ್ ದಿನಾಂಕ ಘೋಷಿಸಿದೆ. ನಿಯಮಗಳ ಅನ್ವಯ ಎಲೆಕ್ಷನ್ ದಿನಾಂಕ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದೆ. ಹೀಗಗಿ ಕಾರ್ಯಕ್ರಮ ಮುಗಿಸಿ ಹಿಂತಿರುಗುವಾಗ ದಾರಿ ಮಧ್ಯೆ ಸರ್ಕಾರಿ ಕಾರನ್ನು ಹಿಂಪಡೆಯಲಾಗಿದೆ. ಸರ್ಕಾರಿ ವಾಹನ ತೊರೆದ ಸಿದ್ದರಾಮಯ್ಯ ಖಾಸಗಿ ವಾಹನದಲ್ಲಿ ಪ್ರಯಾಣ ಮುಂದುವರೆಸಿದ್ದಾರೆ.
ಇದನ್ನೂ ಓದಿ: Karnataka Election Dates 2023 LIVE: ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ, ಮೇ 13ಕ್ಕೆ ಫಲಿತಾಂಶ
ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದಿಂದ ನೀಡಲಾಗಿದ್ದ KA-01 GA-7002 ಫಾರ್ಚೂನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ನೀತಿ ಸಂಹಿತೆ ಜಾರಿ ಬೆನ್ನಲ್ಲೇ ಸರ್ಕಾರಿ ಅಧಿಕಾರಿಗಳು ಕಾರು ಹಿಂಪಡೆಯಲು ಮುಂದಾಗಿದ್ದಾರೆ. ಹೀಗಾಗಿ ಮಾಜಿ ಸಿಎಂ ಆಪ್ತರು ಕಾರಿನಲ್ಲಿದ್ದ ಸೂಟ್ಕೇಸ್ ಸೇರಿ ಅದರಲ್ಲಿದ್ದ ವಸ್ತುಗಳನ್ನು ಖಾಸಗಿ ಕಾರಿಗೆ ಶಿಫ್ಟ್ ಮಾಡಿದ್ದಾರೆ. ಸರ್ಕಾರಿ ಕಾರನ್ನು ಅಧಿಕಾರಿಗಳು ಹಿಂಪಡೆದಿದ್ದಾರೆ.
ಕಾರು ಮರಳಿಸಿದ ಸಚಿವ ಸೋಮಣ್ಣ
ಇತ್ತ ಸಚಿವ ಸೋಮಣ್ಣ ಹಾಗೂ ಮುನಿರತ್ನ ಕೂಡಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಸರ್ಕಾರಿ ವಾಹನವನ್ನು ತೊರೆದಿದ್ದಾರೆ. ಸಿಎಂ ನಿವಾಸಕ್ಕೆ ಇಬ್ಬರೂ ಖಾಸಗಿ ವಾಹನದಲ್ಲೇ ಆಗಮಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ