ಬೆಂಗಳೂರು: ರಾಜ್ಯ ಚುನಾವಣೆಗೆ (Karnataka Election Date) ಮುಹೂರ್ತ ನಿಗದಿಯಾಗಿದ್ದು, ರಾಜಕೀಯ ಪಕ್ಷಗಳು (political Party) ಅಗ್ನಿಪರೀಕ್ಷೆ ಎದುರಿಸಲು ಸಜ್ಜಾಗಿವೆ. ಈ ನಡುವೆ ಚುನಾವಣಾ ಪೂರ್ವ ಸಮೀಕ್ಷೆಗಳು (Pre Poll Survey) ಹೊರ ಬಂದಿದ್ದು, ರಾಜ್ಯ ರಾಜಕೀಯ ಅಂಗಳದಲ್ಲಿ ಹೊಸ ಹೊಸ ಚರ್ಚೆಗಳು ಶುರುವಾಗಿದೆ. ಇತ್ತ ರಾಜ್ಯದಲ್ಲಿ ನೀತಿ ಸಂಹಿತೆ (Election Code Of Conduct) ಜಾರಿಗೆ ಬಂದಿದ್ದು, ರಾಜ್ಯದ ಜಿಲ್ಲಾಗಡಿ, ಅಂತರರಾಜ್ಯ ಗಡಿಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಹಣ, ವಸ್ತುಗಳು ಹಾಗೂ ಮದ್ಯವನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹೀಗಿರುವಾಗ ಚುನಾವಣಾ ಸಂದರ್ಭದಲ್ಲಿ ನಡೆಯುತ್ತಿರುವ ರಾಜ್ಯ ರಾಜಕೀಯದ ಬೆಳವಣಿಗೆಗಳ ಕ್ಷಣ ಕ್ಷಣದ ಅಪ್ಡೇಟ್ಸ್ ನಿಮ್ಮ ನ್ಯೂಸ್ 18 ಕನ್ನಡದ ಲೈವ್ ಬ್ಲಾಗ್ನಲ್ಲಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ