ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ (Karnataka Election Results 2023) ಕಾಂಗ್ರೆಸ್ ಸರ್ಕಾರ ರಚನೆ ಮಾಡೋದು ಖಚಿತವಾಗಿದೆ. ರಾಜ್ಯದಲ್ಲಿ ಬೃಹತ್ ಸಮಾವೇಶ, ರೋಡ್ ಶೋ ನಡೆಸಿದ ಬಿಜೆಪಿಗೆ ಮತದಾರ ಪ್ರಭು ಶಾಕ್ ನೀಡಿದ್ದಾರೆ. ಫಲಿತಾಂಶದ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಪ್ರತಿಕ್ರಿಯೆ ನೀಡಿದ್ದಾರೆ. ಚುನಾವಣೆ ಫಲಿತಾಂಶ ಅಂತಿಮ ಗಟ್ಟದಲ್ಲಿದೆ. ಜನರ ತೀರ್ಪನ್ನು ಒಪ್ಪಿಕೊಳ್ಳುವೆ. ಇದರ ಸಂಪೂರ್ಣ ಸೋಲನ್ನು ನಾನೇ ಹೊರುತ್ತೇನೆ. ಇದರ ಬಗ್ಗೆ ವಿಶ್ಲೇಷಣೆ ಮಾಡಬೇಕಿದೆ. ಪ್ರತಿ ಕ್ಷೇತ್ರದಲ್ಲಿ ಕೂಲಂಕುಷವಾಗಿ ವಿಚಾರಣೆ ಮಾಡಿ ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತೇವೆ ಎಂದು ಹೇಳಿದರು.
ಜನರಿಗೆ ಮತ್ತೊಮ್ಮೆ ಕೃತಜ್ಞತೆ ಸಲ್ಲಿಸುತ್ತೇನೆ. ಸೋಲಲು ಇಲ್ಲಿ ಹಲವಾರು ಕಾರಣಗಳಿವೆ. ಶಿಗ್ಗಾಂವಿ ಕ್ಷೇತ್ರದ ಜನರು ನನ್ನನ್ನು ನಾಲ್ಕಿ ಬಾರಿ ಗೆಲ್ಲಿಸಿದ್ದಾರೆ ಎಂದರು.
ಬಿಎಸ್ ಯಡಿಯೂರಪ್ಪ ಹೇಳಿದ್ದೇನು?
ಸೋಲು ಗೆಲುವು ಬಿಜೆಪಿಗೆ ಹೊಸದೇನು ಅಲ್ಲ. ಕಡಿಮೆ ಸಂಖ್ಯೆಯಿಂದ ರಾಜ್ಯದಲ್ಲಿ ಎಷ್ಟೋ ಸಾರಿ ಬಹುಮತದ ಸರ್ಕಾರ ಮಾಡಿದ್ದೇವೆ. ಲೋಕಸಭೆ ಚುನಾವಣೆಗೂ ಈ ಚುನಾವಣೆ ಫಲಿತಾಂಶಕ್ಕೆ ಏನು ಸಂಬಂಧ ಇಲ್ಲ ಎಂದು ಮಾಜಿ ಸಿಎಂ
ಈ ಸೋಲಿನಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅವಶ್ಯಕತೆ ಇಲ್ಲ. ಗ್ಯಾರಂಟಿ ಕಾರ್ಡ್ ಕೊಟ್ಟಿದ್ದಾರೆ ಅದನ್ನು ಕಾಂಗ್ರೆಸ್ ನವರು ಆದಷ್ಟು ಬೇಗ ಮಾಡಬೇಕೆಂದು ಎಂದು ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯಿಸಿದರು.
ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ
ಕರ್ನಾಟಕ ಫಲಿತಾಂಶ ಬಂದಿದ್ದು, ಗೆದ್ದಿರುವ ಬಿಜೆಪಿ ಅಭ್ಯರ್ಥಿಗಳು ಮತ್ತು ಕಾಂಗ್ರೆಸ್ಗೂ ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯಕ್ಕೆ ಒಳ್ಳೆಯ ಯೋಜನೆಗಳನ್ನು ಕೊಟ್ಟಿದ್ದೇವೆ. ರಾಜ್ಯದ ಜನತೆ ನೀಡಿರುವ ತೀರ್ಪನ್ನು ಒಪ್ಪಿಕೊಳ್ಳುತ್ತೇವೆ. ಮತದಾರರಿಗೆ ಅಭಿನಂದನೆ ಸಲ್ಲಿಸ್ತೇನೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.
ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ 2023 LIVE: ಗೆದ್ದ 'ಕೈ' ಕಲಿಗಳಿಗೆ ಡಿಕೆಶಿ ಬುಲಾವ್, ಈಗಲೇ ಬೆಂಗಳೂರಿಗೆ ಬರುವಂತೆ ಸೂಚನೆ
ನಮ್ಮ ಕಾರ್ಯಕರ್ತರು ಹಗಲು, ರಾತ್ರಿ ಕೆಲಸ ಮಾಡಿದೆ. ನಮ್ಮ ಸರ್ಕಾರ ಉತ್ತಮ ಕೆಲಸ ಮಾಡಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರು ಉತ್ತಮ ಕೆಲಸ ಮಾಡಿದ್ದಾರೆ. ಬಿಜೆಪಿ ಸೋಲಿನ ಹೊಣೆಯನ್ನು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನೇ ಹೊರುತ್ತೇನೆ ಎಂದು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ