Karnataka Assembly Election 2023: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗ್ತಿರೋ ಬೆನ್ನಲ್ಲೇ RSS ಪ್ರಮುಖ ನಾಯಕ ಸಿ.ಆರ್.ಮುಕುಂದ್ (CR Mukund) ಶುಕ್ರವಾರ (ಡಿಸೆಂಬರ್ 09, 2022) ಮುಖ್ಯಮಂತ್ರಿ ಹಾಗೂ ಸಚಿವರುಗಳ ಜೊತೆ ಗೌಪ್ಯ ಮಾತುಕತೆ ನಡೆಸಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಅವರ ಆರ್.ಟಿ.ನಗರದ ನಿವಾಸಕ್ಕೆ ಬಂದಿದ್ದ ಮುಕುಂದ್ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವರಾದ ವಿ.ಸೋಮಣ್ಣ (V Somanna), ಶಿವರಾಮ್ ಹೆಬ್ಬಾರ್ (Shivaram Hebbar) ಸೇರಿ ಹಲವು ಶಾಸಕರು ಹಾಜರಿದ್ದರು. ಮೂಲಗಳ ಪ್ರಕಾರ ಪಕ್ಷ ಸಂಘಟನೆ, ಜನಸಂಕಲ್ಪ ಯಾತ್ರೆ (Jana Sankalpa Yatre), ಸಚಿವರ ಕಾರ್ಯ ವೈಖರಿ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಅಂತಾ ಹೇಳಲಾಗ್ತಿದೆ. ಜೊತೆಗೆ ಭಿನ್ನಾಭಿಪ್ರಾಯ ಬಿಟ್ಟು ಒಗ್ಗಟ್ಟಿನಿಂದ ಕೆಲಸ ಮಾಡಲು ಹೈಕಮಾಂಡ್ ಕೊಟ್ಟಿರೋ ಸಂದೇಶವನ್ನೂ ಕೊಟ್ಟಿದ್ದಾರೆ ಎಂಬ ಮಾಹಿತಿ ನ್ಯೂಸ್ 18 ಕನ್ನಡಕ್ಕೆ ಲಭ್ಯವಾಗಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯ ಮತದಾನ ಮುಗಿಯುತ್ತಿದ್ದಂತೆ ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕರು ಕರ್ನಾಟಕದತ್ತ ಮುಖ ಮಾಡುತ್ತಿದ್ದಾರೆ. 2023ರ ಚುನಾವಣೆ ಹಿನ್ನೆಲೆ ಸಿಎಂ ಬೊಮ್ಮಾಯಿ ಎರಡು ದಿನಗಳ ಹಿಂದೆ ದತ್ತಾತ್ರೇಯ ಹೊಸಬಾಳೆ ಮತ್ತು ನಿನ್ನೆ ಸಿ.ಆರ್.ಮುಕುಂದ್ ಜೊತೆ ಸಭೆ ನಡೆಸಿದ್ದಾರೆ.
ಈ ಚುನಾವಣೆಯಲ್ಲಿ ಮೂಲ ಬಿಜೆಪಿಗರಿಗೆ ಮಣೆ ಹಾಕುವ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ. ಇದರ ಜೊತೆಗೆ ಗುಜರಾತ್ನಲ್ಲಿ ಯಶಸ್ವಿಯಾಗಿರುವ ಹೊಸಬರಿಗೆ ಟಿಕೆಟ್ ನೀಡುವ ಕುರಿತು ಮಾತುಕತೆ ನಡೆದಿದೆಯಂತೆ. ಹೊಸಬರಿಗೆ ಅವಕಾಶ ನೀಡಿದ್ರೆ ಯಾರಿಗೆ ಟಿಕೆಟ್ ತಪ್ಪಲಿದೆ ಎಂಬುದರ ಬಗ್ಗೆಯೂ ಸಿಎಂ ಬೊಮ್ಮಾಯಿ ಜೊತೆ ಆರ್ಎಸ್ಎಸ್ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಸಂಪುಟ ವಿಸ್ತರಣೆನಾ? ಪುನಾರಚನೆನಾ?
ಇನ್ನು ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು, ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಮಾಡಬೇಕಾ? ಇದರಿಂದ ಪಕ್ಷಕ್ಕೆ ಆಗುವ ಲಾಭಗಳೇನು ಎಂಬುದರ ಬಗ್ಗೆ ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ. ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವರು ಸಂಪುಟ ಸೇರಲು ಸಿದ್ಧರಾಗಿದ್ದಾರೆ. ಆದರೆ ಈ ಬಾರಿ ಸಂಪುಟ ಪುನಾರಚನೆ ಮಾಡಿ ಯುವ ಶಾಸಕರಿಗೆ ಅವಕಾಶ ನೀಡಬೇಕು ಎಂಬುದರ ಬಗ್ಗೆ ಗಹನವಾದ ಮಾತುಕತೆಗಳು ನಡೆದಿದೆಯಂತೆ.
ಅಲರ್ಟ್ ಆದ ಕಾಂಗ್ರೆಸ್!
ಚುನಾವಣೆ ತಯಾರಿಗೆ ಬಿಜೆಪಿ ಆ್ಯಕ್ಟಿವ್ ಆಗುತ್ತಲೇ ಕಾಂಗ್ರೆಸ್ ಕೂಡ ಅಲರ್ಟ್ ಆಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲಾ ಅವರು ಸಂದೇಶ ರವಾನಿಸಿದ್ದು, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸಲಹೆ ನೀಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Karnataka Election: ಬಿಜೆಪಿಗೆ ಗುಜರಾತ್, ಕಾಂಗ್ರೆಸ್ಗೆ ಹಿಮಾಚಲ ಮಾಡೆಲ್; ಕರ್ನಾಟಕ ಕದನ ಕಣದಲ್ಲಿ ಹತ್ತಾರು ಲೆಕ್ಕಾಚಾರ!
ಇದೇ ಸಂದೇಶದಲ್ಲಿ ಬಿಜೆಪಿ ತಂತ್ರಗಳಿಗೆ ಪ್ರತಿತಂತ್ರಗಳ ಹೆಣೆಯಲು ಸೂಚನೆ ನೀಡಲಾಗಿದೆ. ಹಿಮಾಚಲ ಪ್ರದೇಶದ ಗೆಲುವಿನ ಸೂತ್ರಗಳನ್ನು ರವಾನಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಪಕ್ಷ ಸಂಘಟನೆ, ಚುನಾವಣೆ ಪ್ರಚಾರ, ಸೋಶಿಯಲ್ ಮೀಡಿಯಾವನ್ನು ಹೆಚ್ಚು ಬಳಸುವಂತೆ ಹೇಳಿದ್ದಾರಂತೆ.
ಕುಡಿಯೋ ನೀರಿಗೆ ಭಿಕ್ಷೆ ಬೇಡೋ ಪರಿಸ್ಥಿತಿ ಬಂದಿದೆ. ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿದ್ದು, ನ್ಯಾಯ ಕೊಡಿಸಿ ಅಂತ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗುಡುಗಿದ್ದಾರೆ.
ಇದನ್ನೂ ಓದಿ: Siddaramaiah: ಬಿಜೆಪಿ ಕೇಳ್ತಿರೋ ‘ಆ’ ಒಂದು ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ನೀಡೋದು ಯಾವಾಗ?
ಮೇಕೆದಾಟು, ಮಹದಾಯಿ, ತುಂಗಾಭದ್ರಾ ಯೋಜನೆಗಳಿಗೆ ಅಡ್ಡಿ ಉಂಟಾಗ್ತಿದೆ. ನಮ್ಮ ಜಾಗದಲ್ಲಿ ನಮ್ಮ ಖರ್ಚಲ್ಲಿ ಯೋಜನೆಗೂ ಅವಕಾಶ ಕೊಡ್ತಿಲ್ಲ. ನಮ್ಮ ಜಾಗದಲ್ಲಿ ಕಟ್ಟೋದಕ್ಕೂ ತಗಾದೆಗಳಾಗುತ್ತಿದೆ. ದಯವಿಟ್ಟು ನೀರಾವರಿ ಸಮಸ್ಯೆಗಳನ್ನ ಬಗೆಹರಿಸಬೇಕು ಅಂತ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ