ಬೆಂಗಳೂರು: ಗೃಹ ಸಚಿವ (Home Minister) ಅಮಿತ್ ಶಾ (Amit Shah) ಏಪ್ರಿಲ್ 21ರ ಶುಕ್ರವಾರ ಬೆಂಗಳೂರಿಗೆ (Bengaluru) ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಅಮಿತ್ ಶಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (International Airport Road ) ಆಗಮಿಸಲಿದ್ದು, ಕಾರಿನ (Car) ಮೂಲಕ ದೇವನಹಳ್ಳಿಯಲ್ಲಿ ರೋಡ್ ಶೋ (Road Show) ನಡೆಸಲಿದ್ದಾರೆ. ಗೃಹ ಸಚಿವರ ಆಗಮಿಸುವ ಹಿನ್ನೆಲೆಯಲ್ಲಿ ರಸ್ತೆ ಉದ್ದಕ್ಕೂ ಪೋಲಿಸರು ಭಾರೀ ಭದ್ರತೆಯನ್ನು ಏರ್ಪಡಿಸಲಿದ್ದಾರೆ.
ಸಂಚಾರ ಬದಲಾವಣೆ ಮಾಡಲು ಪೊಲೀಸರ ಸಿದ್ಧತೆ
ಅಮಿತ್ ಶಾ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಯಿಂದ ಮಧ್ಯಾಹ್ನ 3 ಗಂಟೆ ರವರೆಗೆ ಏರ್ಪೋರ್ಟ್ ಹಾಗೂ ಹೆಬ್ಬಾಳ ನಡುವಿನ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.
ಅಮಿತ್ ಶಾ ಅವರ ಆಗಮನದ ಹಿನ್ನೆಲೆಯಲ್ಲಿ ಸುಮಾರು 2000 ಸಾವಿರ ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 4 ಡಿ.ಸಿ.ಪಿ ಗಳು, 7 KSRP ತುಕಡಿಗಳು, ಮೂರು QRT ಟೀಂ ನಿಯೋಜನೆ ಮಾಡಲಾಗಿದೆ. ಕೆಲವು ಮಾರ್ಗಗಳ ಸಂಚಾರ ಬದಲಾವಣೆ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಧಾರವಾಡದಲ್ಲೂ ಅಮಿತ್ ಶಾ ಪ್ರಚಾರ
ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಆಗಮನಕ್ಕೂ ಮುನ್ನವೇ ಅಮಿತ್ ಶಾ ರಾಜ್ಯದಲ್ಲಿ ಕಮಾಲ್ ಮಾಡಲು ಆಗಮಿಸುತ್ತಿದ್ದಾರೆ. ದೇವನಹಳ್ಳಿ ಮಾತ್ರವಲ್ಲದೇ ಧಾರವಾಡದಲ್ಲಿ ಅಮಿತ್ ಶಾ ಪ್ರಚಾರ ನಡೆಸಲಿದ್ದಾರೆ.
ಚುನಾವಣೆ ಪ್ರಚಾರದಲ್ಲಿ ಭಾಗಿಯಾಗುವುದರೊಂದಿಗೆ ಕೆಲ ಪ್ರಮುಖ ಮಠಾಧೀಶರನ್ನು ಅಮನಿತ್ ಶಾ ಭೇಟಿಯಾಗಲಿದ್ದಾರೆ. ಪ್ರಧಾನಿ ಮೋದಿ ಏಪ್ರಿಲ್ ವಾರಾಂತ್ಯದ ವೇಳೆಗೆ ಕರ್ನಾಟಕ ಚುನಾವಣಾ ಪ್ರಚಾರಕ್ಕೆ ಆಗಮಿಸುವ ನಿರೀಕ್ಷೆ ಇದ್ದು, ಬಂಡಾಯ ಕ್ಷೇತ್ರಗಳನ್ನೇ ಟಾರ್ಗೆಟ್ ಮಾಡಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ