• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Anitha Kumaraswamy: ಬರೀ ಮಕ್ಕಳ ತರ ಹಠ ಮಾಡ್ತಾರೆ, ಹೇಳಿದ್ದು ಕೇಳೋಲ್ಲ; ಕುಮಾರಸ್ವಾಮಿ ವಿರುದ್ಧ ಅನಿತಾ ದೂರು!

Anitha Kumaraswamy: ಬರೀ ಮಕ್ಕಳ ತರ ಹಠ ಮಾಡ್ತಾರೆ, ಹೇಳಿದ್ದು ಕೇಳೋಲ್ಲ; ಕುಮಾರಸ್ವಾಮಿ ವಿರುದ್ಧ ಅನಿತಾ ದೂರು!

ಅನಿತಾ ಕುಮಾರಸ್ವಾಮಿ, ಎಚ್​ಡಿ ಕುಮಾರಸ್ವಾಮಿ

ಅನಿತಾ ಕುಮಾರಸ್ವಾಮಿ, ಎಚ್​ಡಿ ಕುಮಾರಸ್ವಾಮಿ

ಕುಮಾರಸ್ವಾಮಿ ಅವರು ಹೆಚ್ಚಿಗೆ ನೀರು ಕುಡಿಯುವುದಿಲ್ಲ. ಊಟದ ವಿಚಾರದಲ್ಲಿ ಮಕ್ಕಳ ರೀತಿ ಹಠ ಮಾಡುತ್ತಾರೆ. ಬರೀ ಮೊಸರನ್ನ ತಿಂತಾರೆ, ಸರಿಯಾಗಿ ಊಟ ಮಾಡಲ್ಲ ಎಂದು ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

 • Share this:

ರಾಮನಗರ: ಮಾಜಿ ಸಿಎಂ ಎಚ್​​ಡಿ ಕುಮಾರಸ್ವಾಮಿ (HD Kumaraswamy) ಅವರು ಅನಾರೋಗ್ಯದಿಂದ ಆಸ್ಪತ್ರೆಗೆ (Hospital) ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್​ ಆಗಿದ್ದು, ಮತ್ತೆ ಚುನಾವಣಾ (Election) ಕಣದಲ್ಲಿ ನಿನ್ನೆಯಿಂದ ಓಡಾಟ ಆರಂಭ ಮಾಡಿದ್ದಾರೆ. ಈ ನಡುವೆ ಪತಿ ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ (Anitha Kumaraswamy) ಅವರು, ಎಚ್​ಡಿಕೆ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುತ್ತದೆ. ಆದರೆ ಅವರು ಊಟದ ವಿಚಾರದಲ್ಲಿ ಮಕ್ಕಳ (Children) ತರಾ ಹಠ ಮಾಡ್ತಾರೆ ಎಂದು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ (Channapatna) ಮಾಧ್ಯಮಗಳೊಂದಿಗೆ ಮಾತನಾಡಿದ ಅನಿತಾ ಕುಮಾರಸ್ವಾಮಿ ಅವರು, ಕುಮಾರಸ್ವಾಮಿ ರಾಜ್ಯದ ಹಲವೆಡೆ ಪ್ರಚಾರ ಮಾಡಿದರು. ಹಾಗಾಗಿ ಚನ್ನಪಟ್ಟಣದಲ್ಲಿ ಅವರ ಪರವಾಗಿ ನಾನು ಪ್ರಚಾರ ಮಾಡುತ್ತಿದ್ದೇನೆ. ಅವರಿಗೆ ಸ್ವಲ್ಪ ಆಯಾಸ ಆಗಿತ್ತು. ಹಾಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.


ಚನ್ನಪಟ್ಟಣದಾದ್ಯಂತ ಎಚ್​ಡಿಕೆ ಪರ ಪ್ರಚಾರ ಮಾಡುತ್ತಿದ್ದೇನೆ


ಕುಮಾರಸ್ವಾಮಿ ಅವರು ಹೆಚ್ಚಿಗೆ ನೀರು ಕುಡಿಯುವುದಿಲ್ಲ. ಊಟದ ವಿಚಾರದಲ್ಲಿ ಮಕ್ಕಳ ರೀತಿ ಹಠ ಮಾಡುತ್ತಾರೆ. ಬರೀ ಮೊಸರನ್ನ ತಿಂತಾರೆ, ಸರಿಯಾಗಿ ಊಟ ಮಾಡಲ್ಲ. ಹಾಗಾಗಿ ಅನಾರೋಗ್ಯ ಆಗಿತ್ತು ಈಗ ಚೇತರಿಸಿಕೊಂಡಿದ್ದಾರೆ. ನಾನು ಚನ್ನಪಟ್ಟಣದಾದ್ಯಂತ ಪ್ರಚಾರ ಮಾಡುತ್ತಿದ್ದೇನೆ. ಕ್ಷೇತ್ರದ ಜನರು ಉತ್ತಮ ರೀತಿಯಲ್ಲಿ ಸ್ಪಂಧಿಸುತ್ತಿದ್ದಾರೆ.
ಇದನ್ನೂ ಓದಿ: Karnataka Election 2023: ಜೆಡಿಎಸ್‌ ಅಧಿಕಾರಕ್ಕೆ ಬಂದ್ರೆ ವರ್ಷಕ್ಕೆ 5 ಗ್ಯಾಸ್‌ ಸಿಲಿಂಡರ್‌ ಉಚಿತ; ಎಚ್​​ಡಿ ಕುಮಾರಸ್ವಾಮಿ ಘೋಷಣೆ


ಜನ ಕೂಡಾ ಬುದ್ಧಿವಂತರಿದ್ದಾರೆ. ಅವರು ಕುಮಾರಸ್ವಾಮಿ ಅವರನ್ನ ಅರ್ಥ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಕ್ಯಾಂಡೇಟ್, ಹಾಗಾಗಿ ಅವರು ಗೆದ್ದರೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಸಿಗುತ್ತೆ. ಹಾಗಾಗಿ ನಮಗೆ ಮತ್ತೊಮ್ಮೆ ಅವಕಾಶ ಕೊಡುತ್ತಾರೆ ಎಂದು ಹೇಳಿದರು.


top videos  ಇದೇ ವೇಳೆ ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಆಗಮನ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಅವರು ದೇಶದ ಪ್ರಧಾನಿ, ಅವರ ಮೇಲೆ ಗೌರವ ಇದೆ. ಅವರು ಪ್ರಚಾರ ಮಾಡಿದರೂ ಜನತೆಗೆ ಎಲ್ಲಾ ಗೊತ್ತಿದೆ. ಅವರು ಯಾರನ್ನು ಆಯ್ಕೆ ಮಾಡಬೇಕೆಂಬುದನ್ನ ಅರ್ಥ ಮಾಡಿಕೊಂಡಿದ್ದಾರೆ. ಚನ್ನಪಟ್ಟಣಕ್ಕೆ ಪ್ರಧಾನಿ ಮೋದಿ ಬರುತ್ತಿರುವುದಕ್ಕೆ ನಾವು ಸ್ವಾಗತ ಮಾಡುತ್ತೇವೆ ಎಂದರು.

  First published: