ಮೈಸೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ (BL Santhosh) ಅವರು ಸಿಎಂ (Chief Minister) ಹುದ್ದೆಯ ಆಕಾಂಕ್ಷಿ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಈ ಸುದ್ದಿಗಳಿಗೆ ಸಂತೋಷ್ ಅವರು ಮಾರ್ಮಿಕವಾಗಿ ಉತ್ತರ ನೀಡಿದ್ದಾರೆ. ಚುನಾವಣೆಯ ಹೊಸ್ತಿಲಲ್ಲಿ ಲಿಂಗಾಯತ (Lingayat ) ಸಿಎಂ ವಿಚಾರ ಮತ್ತೊಮ್ಮೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ನಾಯಕರ ನಡುವಿನ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಇದರ ನಡುವೆಯೇ ಮೈಸೂರಿನಲ್ಲಿ (Mysuru) ಇಂದು ಈ ಬಗ್ಗೆ ಪರೋಕ್ಷವಾಗಿ ಸ್ಪಷ್ಟನೆ ನೀಡಿರುವ ಸಂತೋಷ್ ಅವರು ಬಿಜೆಪಿ ಯಲ್ಲಿ ನಾನು ಯಾರಿಗೂ ಪ್ರತಿಸ್ಪರ್ಧಿಯಲ್ಲ ಎಂದು ಹೇಳಿದ್ದಾರೆ. ಮಾಧ್ಯಮಗಳು ಸಂತೋಷ್ ಅವರ ಪ್ರತಿಕ್ರಿಯೆ ಪಡೆದುಕೊಳ್ಳಲು ತೆರಳಿದ ಸಂದರ್ಭದಲ್ಲಿ ಘಟನೆ ನಡೆದಿದ್ದು, ಮಾಧ್ಯಮಗಳಿಗೆ (Media) ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಇದೇ ವೇಳೆ ಬಿಜೆಪಿಯಲ್ಲಿ ನಾನು ಯಾರಿಗೂ ಪ್ರತಿಸ್ಪರ್ಧಿಯಲ್ಲ ಎಂದು ಹೇಳಿದ್ದಾರೆ. ಆದ್ದರಿಂದ ನಾಯಕರಿಂದಲೇ ಪ್ರತಿಕ್ರಿಯೆ ಪಡೆದುಕೊಳ್ಳಿ ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಸಂತೋಷ್ ಹೇಳಿದ್ದಾರೆ.
ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ
ತಮ್ಮ ಕುರಿತು ಎದ್ದಿರುವ ಸುದ್ದಿಗಳಿಗೆ ಮಾಧ್ಯಮಗಳಿಗೆ ಸ್ಪಷ್ಟೀಕರಣ ಕೊಡಲು ನಿರಾಕರಿಸಿದ ಬಿ.ಎಲ್. ಸಂತೋಷ್ ಅವರು, ಈಗಾಗಲೇ ನಾನು ನಿಮಗೆ ಮೂರು ಬಾರಿ ಸಿಕ್ಕಿದ್ದೇನೆ. ಆದರೆ ನೀವು ಮತ್ತೆ ನನ್ನನ್ನು ಮಾತನಾಡಿಸಲು ಬಂದಿದ್ದೀನಿ. ಸಿಕ್ಕಪಟ್ಟೆ ಲೀಡರ್ ಗಳಾಗಿದ್ದಾರೆ ನಾನು ಯಾರಿಗೂ ಪ್ರತಿಸ್ಪರ್ಧಿ ಆಗಲು ಬಯಸುವುದಿಲ್ಲ.
ಮಾಧ್ಯಮದವರು ನನ್ನನ್ನು 100 ಬಾರಿ ಮಾತಾಡಿಸಲು ಯತ್ನಿಸಿದ್ದಾರೆ, ನಾನು ಮಾತಾಡಿಲ್ಲ. ನಮ್ಮಲ್ಲಿ ಮಾತಾಡಲು ಪ್ರತಾಪ್ ಸಿಂಹ ಥರದವರು ಇದ್ದಾರೆ ಅವರೇ ಮಾತಾಡಲಿ. ನಾನು ಮಾತಾಡಿ ಯಾರಿಗೆ ಯಾಕೆ ಪ್ರತಿ ಸ್ಪರ್ಧಿಯಾಗಲಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಇದನ್ನೂ ಓದಿ: Karnataka Election 2023: 'ನನಗೆ ಇಬ್ಬರು ಪತ್ನಿಯರು ಇದ್ದಾರೆ'! ವೈರಲ್ ಆಯ್ತು ಎಎಪಿ ಅಭ್ಯರ್ಥಿಯ ನಾಮಿನೇಷನ್ ಅಫಿಡವಿಟ್
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ನನಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಕೈ ತಪ್ಪಲು ಕಾರಣ ಬಿ.ಎಲ್. ಸಂತೋಷ್ ಅವರೇ ಕಾರಣ. ನನ್ನ ವಿರುದ್ಧ ತಂತ್ರಗಾರಿಕೆ ಮಾಡಿದರು. ಅವರಿಂದಲೇ ನನಗೆ ಟಿಕೆಟ್ ತಪ್ಪಿದೆ.
ನಾನು ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಮಹೇಶ್ ತೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದರು. ಇದಾದ ಬಳಿಕ ಕಾಂಗ್ರೆಸ್ ನಾಯಕರ ಗಂಭೀರ ಆರೋಪ ಮಾಡಿದ್ದರು. ಸಂತೋಷ್ ಅವರು ಸಿಎಂ ಆಗಲು ಟಿಕೆಟ್ ಹಂಚಿಕೆ ವಿಚಾರದಲ್ಲಿ ಕೈ ಹಾಕಿದ್ದಾರೆ ಎಂದು ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ