ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಕಳೆದ ಬಾರಿಯಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಾರಾ ಎಂಬ ಚರ್ಚೆ ಕಳೆದ ಎರಡು ದಿನಗಳಿಂದ ಜೋರಾಗಿದೆ. ಹೌದು, ನಾಳೆ ಸಿದ್ದರಾಮಯ್ಯ ಅವರು ಬಾದಾಮಿಗೆ (Badami Constituency ) ಭೇಟಿ ನೀಡುತ್ತಿದ್ದು, ಸುಮಾರು 2 ಕಿಮೀ ರೋಡ್ ಶೋ ನಡೆಸುತ್ತಿದ್ದು, ಈ ವೇಳೆ 30 ಸಾವಿರ ಮಂದಿ ಹಾಜರಾಗುವ ನಿರೀಕ್ಷೆ ಇದೆ. ಕೋಲಾರರಿಂದ (Kolar Constituency) ಸ್ಪರ್ಧೆ ಮಾಡದಂತೆ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ (Rahul Gandhi) ಸಲಹೆ ನೀಡಿದ್ದಾರೆ ಎನ್ನಲಾಗಿತ್ತು. ಇದರ ನಡುವೆ ಸಿದ್ದರಾಮಯ್ಯ ನಡೆ ಕುತೂಹಲ ಮೂಡಿಸಿದ್ದು, ಮಾಜಿ ಸಿಎಂ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಅವಕಾಶ ನೀಡಬೇಕು ಎಂದು ಬೆಂಬಲಿಗರು ಕಾಂಗ್ರೆಸ್ ಹೈಕಮಾಂಡ್ಗೆ (High Command) ಒತ್ತಾಯ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ ಹೈಕಮಾಂಡ್ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಬೇಡ ಎಂಬ ಸಂದೇಶ ನೀಡಿದೆ ಎನ್ನಲಾಗಿದೆ. ಇದರೊಂದಿಗೆ ಅವರಿಗೆ ಹಿನ್ನಡೆ ಆಯ್ತಾ ಎಂಬ ಮಾತು ಕೇಳಿ ಬಂದಿದೆ.
ಬಾದಾಮಿಯಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ
ಸಿದ್ದರಾಮಯ್ಯ ಅವರಿಗೆ ಕೋಲಾರಕ್ಕಿಂತ ವರುಣಾ ಸೇಫ್ ಎನ್ನಲಾಗಿದೆ. ಆದ್ದರಿಂದ ಚುನಾವಣೆಯಲ್ಲಿ ವರುಣಾ ಹಾಗೂ ಬಾದಾಮಿ ಕ್ಷೇತ್ರದಿಂದ ಕಣಕ್ಕಿಳಿಯುವ ಬಗ್ಗೆ ಚರ್ಚೆ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ಹೈಕಮಾಂಡ್ಗೂ ಮಾಹಿತಿ ರವಾನೆ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಸಿದ್ದರಾಮಯ್ಯ ಅವರ ಪ್ರಸ್ತಾಪಕ್ಕೆ ಒಪ್ಪಿಗೆ ಸೂಚಿಸದೆ ಒಬ್ಬರು ಕೇಳಿದರೆ ಎಲ್ಲರೂ ಕೇಳುತ್ತಾರೆ. ಈ ಬಗ್ಗೆ ಮುಂದೇ ನೋಡೋಣಾ ಅಂತ ಹೇಳಿ ಸಿದ್ದರಾಮಯ್ಯ ಅವರ ಆಪ್ತರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಮೂರು ಕ್ಷೇತ್ರ ಬಿಟ್ಟು ಅಭ್ಯರ್ಥಿಗಳ ಪಟ್ಟಿ ರಿಲೀಸ್!
ಬಾದಾಮಿಗೆ ಮಾರ್ಚ್ 24 (ನಾಳೆ) ಭೇಟಿ ನೀಡಲಿರುವ ಸಿದ್ದರಾಮಯ್ಯ ಅವರು ಭರ್ಜರಿ ರೋಡ್ ಶೋ ನಡೆಸಲಿದ್ದಾರೆ. ಈ ವೇಳೆ ಭಾರೀ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರೋಡ್ ಶೋದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ.
ಈ ನಡುವೆ ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಕಾರಣದಿಂದಲೇ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ತಡವಾಗುತ್ತಿದೆ ಎನ್ನಲಾಗಿದೆ. ಈಗಾಗಲೇ ಯುಗಾದಿ ಹಬ್ಬದಂದೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಅಂತಿಮ ಕ್ಷಣದಲ್ಲಿ ಪಟ್ಟಿ ಬಿಡುಗಡೆಯನ್ನು ಮುಂದೂಡಲಾಗಿತ್ತು.
ಆದರೆ ಇದುವರೆಗೂ ಸಿದ್ದರಾಮಯ್ಯ ಅವರು ಯಾವುದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿಲ್ಲವಂತೆ, ಸದ್ಯ ಅವರು ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸಂದೇಶ ರವಾನೆ ಮಾಡಿರುವುದರಿಂದ ಮೂರು ಕ್ಷೇತ್ರಗಳನ್ನು ಬಿಟ್ಟು ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಚುನಾವಣೆಗೆ ಸ್ಪರ್ಧೆ ಮಾಡದಂತೆ ಸಲಹೆ
ಈ ನಡುವೆ ಸಿದ್ದರಾಮಯ್ಯ ಅವರು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದೇ ಬೇಡ. ಅವರು ಚುನಾವಣೆಯಲ್ಲಿ ಒಂದು ಕ್ಷೇತ್ರಕ್ಕೆ ಸೀಮಿತ ಆಗದೆ ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡಲಿ. ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದ ಬಳಿಕ ಅವರನ್ನು ಸಿಎಂ ಮಾಡಿ, ಎಂಎಲ್ಸಿ ಆಗಿ ಆಯ್ಕೆ ಮಾಡಲು ಅವಕಾಶವಿದೆ.
ಇದರಿಂದ ಪಕ್ಷಕ್ಕೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಅವಕಾಶ ಸಿಗಲಿದೆ ಎಂದು ಒತ್ತಾಯ ಹಾಕಿದ್ದರಂತೆ. ಈ ಬಗ್ಗೆ ಕೆಲ ದಿನಗಳ ಹಿಂದೆ ಮಾತನಾಡಿದ್ದ ಮಾಜಿ ಸಚಿವ ಸಂತೋಷ್ ಲಾಡ್, ಸಿದ್ದರಾಮಯ್ಯನವರು ಎಲ್ಲಿ ನಿಂತರೂ ಗೆಲ್ಲುತ್ತಾರೆ. ಅವರು ಈ ಬಾರಿ ಚುನಾವಣೆಗೆ ನಿಲ್ಲದೆ ರಾಜ್ಯದಾದ್ಯಂತ ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಕೆಲಸ ಮಾಡಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ