ಬೆಂಗಳೂರು: ಮತದಾರರರಿಗೆ (Voters) ಆಮಿಷ ಒಡ್ಡಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ರಾಜರಾಜೇಶ್ವರಿನಗರ ಕ್ಷೇತ್ರದ (Rajarajeshwarinagar Assembly Constituency) ಕಾಂಗ್ರೆಸ್ ಅಭ್ಯರ್ಥಿ ಕುಸುಮಾ (Kusuma) ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ. ಕೈ ಅಭ್ಯರ್ಥಿ ಕುಸುಮಾ ಮಾತ್ರವಲ್ಲದೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿಕೆ ಸುರೇಶ್ (DK Suresh) ಹಾಗೂ ಜಗದೀಶ್ ಎಂಬುವವರ ಮೇಲೆ ಎಫ್ಐಆರ್ (FIR) ದಾಖಲಾಗಿದೆ. ಮತದಾರರಿಗೆ ತವಾ ಹಂಚಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ದಾಳಿ ನಡೆಸಿದ್ದರು. ಈ ವೇಳೆ ಚುನಾವಣಾ ಅಧಿಕಾರಿಗಳನ್ನು ಕಂಡು ತವಾ ಹಂಚುತ್ತಿದ್ದವರು ವ್ಯಕ್ತಿಗಳು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚುನಾವಣಾ ಅಧಿಕಾರಿಗಳ ದೂರು ಆಧರಿಸಿ ಎಫ್ಐಆರ್ ದಾಖಲಿಸಿದ ಪೊಲೀಸರು
ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಕುಸುಮಾ ಹಾಗೂ ಡಿ.ಕೆ.ಸುರೇಶ್ ಭಾವ ಚಿತ್ರ ಇದ್ದ ಬಾಕ್ಸ್ ಗಳು ಹಂಚಿಕೆ ಮಾಡುತ್ತಿದ್ದದ್ದು ಪತ್ತೆಯಾಗಿದ್ದು, ಸ್ಥಳದಲ್ಲಿದ್ದ ಓರ್ವನನ್ನ ವಶಕ್ಕೆ ಪಡೆದು ಚುನಾವಣಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: Success Story: ಗರ್ಭಿಣಿಯಾಗಿದ್ರೂ ಕೆಲಸ ಮಾಡಿಕೊಂಡೇ UPSCಗೆ ತಯಾರಿ! ಇದು IAS ಅಧಿಕಾರಿ ಪದ್ಮಿನಿ ನಾರಾಯಣ್ ಸ್ಫೂರ್ತಿದಾಯಕ ಕಥೆ
ಅಲ್ಲದೆ 3 ಕರ್ಟನ್ ಬಾಕ್ಸ್ ಹಾಗೂ 3 ತವಾ ಬಾಕ್ಸ್ ಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಚುನಾವಣಾ ಅಧಿಕಾರಿಗಳ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಸಚಿವ ಮುನಿರತ್ನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಬೆಂಗಳೂರಿನ ಆರ್ಆರ್ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು. ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರು ನೀಡಿದ ದೂರಿನ ಮೇರೆಗೆ ಆರ್.ಆರ್ ನಗರ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಗಲಭೆಗೆ ಪ್ರಚೋದನೆ ನೀಡಿದ್ದ ಆರೋಪದ ಅಡಿ ದೂರು ದಾಖಲಿಸಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ