ಬೆಂಗಳೂರು: ನಟ ಶಿವರಾಜ್ಕುಮಾರ್ (Shivarajkumar) ಅವರ ಪತ್ನಿ ಗೀತಾ ಶಿವರಾಜ್ಕುಮಾರ್ (Geetha Shivarajkumar) ಅವರು ನಾಳೆ ಕಾಂಗ್ರೆಸ್ಗೆ (Congress) ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇತ್ತ ವರುಣಾದ ಕಾಪು ಸಿದ್ಧಲಿಂಗ ಸ್ವಾಮಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಆಪರೇಷನ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿದ್ದಂತೆ ಬಿಎಸ್ವೈ (BSY) ಎಚ್ಚೆತ್ತುಕೊಂಡಿದ್ದು, ಆಪ್ತರ ಜೊತೆ ಮಾತುಕತೆ ನಡೆಸಿದ್ದಾರೆ. ಇತ್ತ ಶಿವಮೊಗ್ಗದ ಸೊರಬ (Soraba) ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಮಧು ಬಂಗಾರಪ್ಪ (Madhu Bangarappa) ಅವರನ್ನು ಗೆಲ್ಲಿಸಲು ಗೀತಾ ಶಿವಕುಮಾರ್, ಕಾಂಗ್ರೆಸ್ಗೆ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ. ಗೀತಾ ಶಿವಕುಮಾರ್ ಕುಮಾರ್ ಅವರ ಜೆಡಿಎಸ್ (JDS) ಪಕ್ಷದಿಂದ ಈ ಹಿಂದೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದರು.
ಗೀತಾ ಶಿವರಾಜ್ಕುಮಾರ್ ಅವರು ಕಾಂಗ್ರೆಸ್ ಸೇರ್ಪಡೆಯಿಂದ ಕ್ಷೇತ್ರದಲ್ಲಿ ಸ್ಥಳೀಯವಾಗಿ ಸಂದೇಶ ರವಾನೆ ಆಗಲಿದೆ ಹಾಗೂ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಲಿದೆ ಎನ್ನಲಾಗಿದೆ. ನಾಳೆ 11 ಗಂಟೆಗೆ ಕಾಂಗ್ರೆಸ್ ಪಕ್ಷದ ಕ ಕಚೇರಿಯಲ್ಲಿ ಅಧಿಕೃತವಾಗಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: Puttur: ಪ್ರವೀಣ್ ನೆಟ್ಟಾರು ಕನಸಿನ ಮನೆ ಗೃಹ ಪ್ರವೇಶ; ಹಿಂದೂ ಕಾರ್ಯಕರ್ತನ ಪುತ್ಥಳಿ ಅನಾವರಣಗೊಳಿಸಿದ ಕಟೀಲ್
ಸೊರಬದಲ್ಲಿ ಮಧು ಬಂಗಾರಪ್ಪಗೆ ಶಕ್ತಿ ತುಂಬಲು ಕಾಂಗ್ರೆಸ್ ಸೇರ್ಪಡೆ ಆಗಮನ
2014ರ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷದಿಂದ ಗೀತಾ ಶಿವರಾಜ್ಕುಮಾರ್ ಸ್ಪರ್ಧೆ ಮಾಡಿದ್ದರು. ಆ ಬಳಿಕ ಅವರು ಜೆಡಿಎಸ್ ಪಕ್ಷದಿಂದ ಹೊರಬಂದು ತಟಸ್ಥವಾಗಿ ಉಳಿದಿದ್ದರು. ಅಂದು ಕೂಡ ಮಧು ಬಂಗಾರಪ್ಪ ಅವರು ಜೆಡಿಎಸ್ ಪಕ್ಷದಲ್ಲಿದ್ದರೂ ಸಹಜವಾಗಿಯೇ ಗೀತಾ ಅವರು ಜೆಡಿಎಸ್ನಿಂದ ಸ್ಪರ್ಧೆ ಮಾಡಿದ್ದರು. ಆ ಬಳಿಕ ನಡೆದ ಬೆಳವಣಿಗೆಗಳಲ್ಲಿ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಅವರನ್ನು ಹಿಂಬಾಲಿಸಿಕೊಂಡು ಗೀತಾ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಬಲ ಸಮುದಾಯ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸಾಧ್ಯತೆ
ಇದಕ್ಕೆ ಪೂರಕ ಎಂಬಂತೆ ಕಳೆದ ಮೂರ್ನಾಲ್ಕು ತಿಂಗಳ ಹಿಂದಷ್ಟೇ ಗೀತಾ ಶಿವರಾಜ್ಕುಮಾರ್ ಅವರು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಹೋಗಿ ಬಂದಿದ್ದರು. ಆದರೆ ಆ ವೇಳೆ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ. ಅಪ್ಪು ಅವರ ನಿಧನದ ನಂತರ ಔಪಚಾರಿಕವಾಗಿ ಭೇಟಿಯಾಗಿದ್ದೇವೆ ಎಂದಷ್ಟೇ ತಿಳಿಸಿದ್ದರು. ಈ ವೇಳೆ ರಾಜಕೀಯ ಚರ್ಚೆ ಕೂಡ ಆಗಿತ್ತು ಎನ್ನಲಾಗಿದೆ.
2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದಲೂ ಗೀತಾ ಶಿವರಾಜ್ಕುಮಾರ್ ಸೇರ್ಪಡೆ ಕಾಂಗ್ರೆಸ್ಗೆ ಲಾಭ ಆಗಲಿದೆ. ಒಂದು ಪ್ರಬಲ ಸಮುದಾಯವೂ ಕಾಂಗ್ರೆಸ್ಗೆ ಬೆಂಬಲ ನೀಡುವ ನಿರೀಕ್ಷೆ ಇದೆ, ಅಲ್ಲದೆ ಪರೋಕ್ಷವಾಗಿಯೂ ಶಿವರಾಜ್ಕುಮಾರ್ ಅವರು ಕಾಂಗ್ರೆಸ್ ಪರ ಪ್ರಚಾರ ಮಾಡಲು ನೆರವಾಗಬಹುದು ಎಂಬ ಮಾಹಿತಿ ಲಭ್ಯವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ