ಬಳ್ಳಾರಿ: ಹಾಸನ (Hassan) ಟಿಕೆಟ್ ಗೊಂದಲ ಜೆಡಿಎಸ್ಗೆ (JDS) ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಸಾಮಾನ್ಯ ಕಾರ್ಯಕರ್ತನಿಗೆ (Activist) ಜೆಡಿಎಸ್ ಟಿಕೆಟ್ ಎಂಬ ಹೇಳಿಕೆಯನ್ನು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಪುನರುಚ್ಚಾರಿಸಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಅವರು, ಮನೆ ಹಾಳು ಮಾಡುವ ಶಕುನಿಗಳು (Shakuni) ಹಾಸನದಲ್ಲಿ ಇದ್ದಾರೆ. ಕುರುಕ್ಷೇತ್ರದ (Kurukshetra) ಯುದ್ದ ಶಕುನಿಯಿಂದಲೇ ಆಗಿದೆ, ಇಲ್ಲಿಯೂ ಶಕುನಿಗಳು ತಲೆ ಕೆಡಿಸುತ್ತಿದ್ದಾರೆ. ಶಕುನಿಗಳು ನನ್ನ ಕುಟುಂಬದಲ್ಲಿ ಇಲ್ಲ, ಹಾಸನದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.
ದೇವೇಗೌಡರಿಗೆ ಸಹ ರೇವಣ್ಣ ಅವರನ್ನು ಮನವೊಲಿಸುವ ಶಕ್ತಿ ಇಲ್ಲ
ಹಾಸನ ಟಿಕೆಟ್ ವಿಚಾರವಾಗಿ ಸ್ಪಷ್ಟನೆ ನೀಡಿದ ಕುಮಾರಸ್ವಾಮಿ ಅವರು, ಶಕುನಿಗಳು ಬೆಳಗಿನಿಂದ ಸಂಜೆಯವರೆಗೆ ಮೈಂಡ್ ವಾಶ್ ಮಾಡುತ್ತಿದ್ದಾರೆ. ಬೇರೆ ಪಕ್ಷದವರು, ಬುದ್ಧಿ ಜೀವಿಗಳು ಮತ್ತು ಹಿತಶತ್ರುಗಳು ತಲೆ ಕೆಡೆಸಿದ್ದಾರೆ. ಹಾಸನದಲ್ಲಿ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕೆಂದು ಹೇಳಿದ್ದೇನೆ, ಇದರಲ್ಲಿ ರಾಜಿ ಪ್ರಶ್ನೆಯೇ ಇಲ್ಲ.
ದೇವೇಗೌಡರಿಗೆ ಸಹ ರೇವಣ್ಣ ಅವರನ್ನು ಮನವೊಲಿಸುವ ಶಕ್ತಿ ಇಲ್ಲ. ಕಳೆದ 15 ವರ್ಷದಿಂದ ಹಲವು ವಿಷಯ ನುಂಗಿಕೊಂಡಿದ್ದೇನೆ, ಕೆಲವು ವಿಷಯಗಳನ್ನು ಹೇಳಿ ಕೊಳ್ಳಲು ಆಗೋದಿಲ್ಲ. ನನಗೆ ಆಗುತ್ತಿರುವ ಅನಾಹುತ ಗೊತ್ತಿದ್ದರೂ ಸಹ, ತಪ್ಪುಗಳು ಮಾಡದಿದ್ದರೂ ತಲೆ ಮೇಲೆ ಹೊತ್ತು ಕೊಳ್ಳಬೇಕಾಯಿತು. ಈಗಲೂ ಅದೇ ರೀತಿ ವಾತಾವರಣ ಸೃಷ್ಟಯಾಗಿದೆ ಎಂದು ಭಾವುಕರಾದರು.
ನಾನು ಜೆಡಿಎಸ್ ಅಧ್ಯಕ್ಷನಾಗಿದ್ದ ವೇಳೆ 59 ಸೀಟ್ ಬಂದಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ಕೊಟ್ಟ ಎಚ್‌ಡಿಕೆ, 59 ಸೀಟ್ ಪಡೆಯಲು ಯಾರ ಕೊಡುಗೆ ಎಷ್ಟು ಎಂಬುದು ಗೊತ್ತು. ಈ ಬಾರಿ ಚುನಾವಣೆಯಲ್ಲಿ 59 ಸೀಟ್ ಕ್ರಾಸ್ ಮಾಡುತ್ತೇನೆ. ಒಬ್ಬನೇ ಹೋರಾಟ ಮಾಡಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕಿಂತ ಹೆಚ್ಚು ಗೆಲ್ಲುತ್ತೇನೆ ಎಂದು ಸವಾಲು ಹಾಕಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ