ಬೆಂಗಳೂರು: ಆದಾಯ ತೆರಿಗೆ ಇಲಾಖೆ (Income Tax Department) ಅಧಿಕಾರಿಗಳು ಇಂದು ಬೆಂಗಳೂರು ಚಿಕ್ಕಪೇಟೆ (Chickpet) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಜಿಎಫ್ ಬಾಬು (KGF Babu) ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 2,000ಕ್ಕೂ ಹೆಚ್ಚು ಡಿಮಾಂಡ್ ಡ್ರಾಫ್ಟ್ (ಡಿ.ಡಿ)5,000 ರೇಷ್ಮೆ ಸೀರೆಗಳು (Saree) ವಶಕ್ಕೆ ಪಡೆದುಕೊಂಡಿದ್ದಾರೆ. ಉಮ್ರಾ ಫೌಂಡೇಷನ್ ಹೆಸರಿನಲ್ಲಿ ತಲಾ ₹1,105 ಮೌಲ್ಯದ ಡಿಡಿಗಳನ್ನು ಸಂಗ್ರಹಿಸಿಡಲಾಗಿತ್ತು, ಚಿಕ್ಕಪೇಟೆ ಮತದಾರರ ಹೆಸರಿನಲ್ಲಿ ಡಿ.ಡಿ ಮಾಡಲಾಗಿದೆ ಎನ್ನಲಾಗಿದೆ. ಸೀರೆ, ಡಿ.ಡಿ ಇದ್ದ ಚುನಾವಣಾ (Election) ಸಾಮಗ್ರಿಗಳ ಮೇಲೆ ಪ್ಯಾಕಿಂಗ್ ಮೇಲೆ ಕೆಜಿಎಫ್ ಬಾಬು ಫೋಟೋ ಇರುವುದು ಕಂಡು ಬಂದಿದೆ. ಎಲ್ಲ ವಸ್ತುಗಳನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಕೆಜಿಎಫ್ ಬಾಬುಗೆ ಸೇರಿದ ರುಕ್ಸಾನಾ ಪ್ಯಾಲೆಸ್ ಮೇಲೆ ಐಟಿ ಅಧಿಕಾರಿಗಲು ದಾಳಿ ಮಾಡಿದ್ದರು. ಸುಮಾರು ಮೂರು ಕಾರುಗಳಲ್ಲಿ ಐ.ಟಿ ಅಧಿಕಾರಿಗಳು ಆಗಮಿಸಿದ್ದು, ಪರಿಶೀಲನೆ ವೇಳೆ ಡಿ.ಡಿ ಸೇರಿದಂತೆ ಲಕ್ಷಾಂತರ ಮೌಲ್ಯದ ಸೀರೆಗಳನ್ನು ಸೀಜ್ ಮಾಡಲಾಗಿದೆ.
ಇನ್ನು, ಕೆಜಿಎಫ್ ಬಾಬು ನಿವಾಸ ಮಾತ್ರವಲ್ಲದೆ ಕಾಂಗ್ರೆಸ್ ಶಾಸಕರು ಸೇರಿದಂತೆ ನಗರದ ಸುಮಾರು 50 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇತ್ತ ಕೆಜಿಎಫ್ ಬಾಬು ಅವರ ಪತ್ನಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಟಿಕೆಟ್ ಆಕಾಂಕ್ಷಿಯಾಗಿದ ಕೆಜಿಎಫ್ ಬಾಬು ಅವರಿಗೆ ಟಿಕೆಟ್ ಮಿಸ್ ಆಗಿದ್ದು, ಆರ್ವಿ ದೇವರಾಜ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.
ಬಿಜೆಪಿ ಟಿಕೆಟ್ ಆಕಾಂಕ್ಷಿ ಮನೆ ಮೇಲೂ ಐಟಿ ದಾಳಿ
ಚಾಮರಾಜನಗರ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ, ಕರಿಕಲ್ಲು ಉದ್ಯಮಿಯಾಗಿರುವ ವೃಷಬೇಂದ್ರಪ್ಪ ಅವರ ಬೈಕ್ ಶೋ ರೂಮ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮರಾಜನಗರದ ಜೋಡಿ ರಸ್ತೆಯಲ್ಲಿರುವ ಶೋ ರೂಮ್ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ವೃಷಬೇಂದ್ರಪ್ಪ ಮರಾಜನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು, ಆಸ್ತಿ ವಿವರದ ಮಾಹಿತಿ ತೆಗೆದುಕೊಂಡು ಕಚೇರಿಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಕಳೆದು ಮೂರು ದಿನಗಳಿಂದ ಹೆಚ್ಚು ಜನರು ಶೋ ರೂಮ್ಗೆ ಭೇಟಿ ನೀಡಿದ್ದ ಬಗ್ಗೆ ದೂರು ಬಂದ ಕಾರಣ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ