ಬೆಂಗಳೂರು: ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನಿನ್ನೆ ಪೊಲೀಸರಿಗೆ (Police) ಧಮ್ಕಿ ಹಾಕಿದ್ದಾರೆ. ಪೊಲೀಸ್ ಎಲ್ಲಾ ನಾಯಕರು ಹೋದರೂ ರಕ್ಷಣೆ ನೀಡುತ್ತಾರೆ. ಯಾವುದೇ ಪಕ್ಷ ಬೇದ ಇಲ್ಲದೆ ರಕ್ಷಣೆ ನೀಡುತ್ತಾರೆ. ಆದರೆ ಡಿಕೆ ಶಿವಕುಮಾರ್ ಪೊಲೀಸರಿಗೆ ಧಮ್ಕಿ ಹಾಕಿದ್ದಾರೆ. ಖಾಕಿ ಬಿಚ್ಚಿಟ್ಟು ಕೆಲಸ ಮಾಡಿ, ನಮ್ಮ ಸರ್ಕಾರ (Govt) ಬಂದಾಗ ನೋಡಿಕೊಳ್ಳುತ್ತೇವೆ ಎಂದು ಧಮ್ಕಿ ಹಾಕಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಆರೋಪ ಮಾಡಿದ್ದಾರೆ. ಅಲ್ಲದೆ ಇಂದು ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ ಡಿಕೆ ಶಿವಕುಮಾರ್ ವಿರುದ್ಧ ಕ್ರಮಕೈಗೊಳ್ಳಲು ದೂರು ನೀಡಿದ್ದಾರೆ.
ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು, ಡಿಕೆ ಶಿವಕುಮಾರ್ ಅವರು ಪೊಲೀಸರಿಗೆ ಧಮ್ಕಿ ಹಾಕಿರುವುದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಪೊಲೀಸ್ ಅಧಿಕಾರಿಗಳನ್ನು ಹೆದರಿಸುವುದು ನೀತಿ ಸಂಹಿತೆ ಉಲ್ಲಂಘನೆ ಕೇಸ್ ಹಾಕುವಂತೆ ಆಯೋಗಕ್ಕೆ ದೂರು ನೀಡಿದ್ದೇವೆ ಎಂದರು.
ಇದನ್ನೂ ಓದಿ: Jagadish Shettar: ‘ಇದು ನನ್ನ ಕೊನೆ ಚುನಾವಣೆ’ -ಮಾಜಿ ಸಿಎಂ ಶೆಟ್ಟರ್ ಘೋಷಣೆ
ಕಾಂಗ್ರೆಸ್ ಶಾಸಕ ಜಮೀರ್ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಕಾಂಗ್ರೆಸ್ ಗೆ ರಾಷ್ಟ್ರ ಧ್ವಜಕ್ಕೆ ಗೌರವ ಇಲ್ಲ. ರಾಷ್ಟ್ರದ ನಾಯಕರ ಬಗ್ಗೆ ಗೌರವ ಇಲ್ಲ, ರಾಷ್ಟ್ರ ಧ್ವಜವನ್ನು ಪೋಡಿಯಂಗೆ ಸುತ್ತಿದ್ದಾರೆ. ಆದ್ದರಿಂದ ನೀತಿ ಸಂಹಿತೆ ಅಡಿ ಕೇಸ್ ಹಾಕುವಂತೆ ಚುನವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಡಿಕೆ ಶಿವಕುಮಾರ್ ಏನು ಹೇಳಿದ್ದರು?
ಬೆಂಗಳೂರಿನ ಯಲಹಂಕದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೇಶವ ಬಿ. ರಾಜಣ್ಣ ಪರ ಡಿಕೆ ಶಿವಕುಮಾರ್ ಪ್ರಚಾರಕ್ಕೆ ನಡೆಸಿದ್ದರು. ಈ ವೇಳೆ ಡಿಕೆಶಿ ಪೊಲೀಸರಿಗೆ ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ