• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah-Lingayat: ಭ್ರಷ್ಟರು ಅಂತ ಹೇಳಿದ್ದು ಲಿಂಗಾಯತರ ಬಗ್ಗೆ ಅಲ್ಲ, ಬೊಮ್ಮಾಯಿ ಬಗ್ಗೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ

Siddaramaiah-Lingayat: ಭ್ರಷ್ಟರು ಅಂತ ಹೇಳಿದ್ದು ಲಿಂಗಾಯತರ ಬಗ್ಗೆ ಅಲ್ಲ, ಬೊಮ್ಮಾಯಿ ಬಗ್ಗೆ; ವಿವಾದ ಬಳಿಕ ಸಿದ್ದರಾಮಯ್ಯ ಸ್ಪಷ್ಟನೆ

ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

ನನ್ನ ಬಿಜೆಪಿಯವರು ಏನು ಮಾಡೋಕೆ ಸಾಧ್ಯ ಇಲ್ಲ, ವರುಣಾದ ಜನರು‌ ನನ್ನ ಕೈ ಬಿಡುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • News18 Kannada
  • 2-MIN READ
  • Last Updated :
  • Mysore, India
  • Share this:

ಮೈಸೂರು: ನಾನು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಒಬ್ಬ ಅಪ್ರಾಮಾಣಿಕ ಎಂದು ಟೀಕೆ ಮಾಡಿದ್ದೇನೆ. ಲಿಂಗಾಯತ (Lingayat) ಸಮಾಜದ ಬಗ್ಗೆ ನಾನು ಏನೂ ಮಾತಾಡಿಲ್ಲ. ಲಿಂಗಾಯತ ಸಮಾಜದ ಮೇಲೆ ನನಗೆ ತುಂಬಾ ಗೌರವವಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ನ್ಯೂಸ್​18 ಕನ್ನಡಕ್ಕೆ ಸ್ಪಷ್ಟನೆ ನೀಡಿದ್ದಾರೆ. ವರುಣಾ (Varuna) ಕ್ಷೇತ್ರದಲ್ಲಿ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ ಅವರು ಲಿಂಗಾಯತ ಸಮುದಾಯದ ಬಗ್ಗೆ ದ್ವೇಷಪೂರಿತ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ (BJP) ಆರೋಪ ಮಾಡಿತ್ತು. ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು ನಾನು ಲಿಂಗಾಯತ ಸಮಾಜದ ಬಗ್ಗೆ ಮಾತನಾಡಿಲ್ಲ, ಸಿಎಂ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.


ಬಿಎಲ್ ಸಂತೋಷ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕಿತ್ತು


ವರುಣಾ ಕ್ಷೇತ್ರದ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ನಾನು ಬಸವರಾಜ್ ಬೊಮ್ಮಾಯಿ ಬಗ್ಗೆ ಟೀಕೆ ಮಾಡಿದ್ದೇನೆ. ಲಿಂಗಾಯತ ಸಮಾಜದ ಬಗ್ಗೆ ನಾನು ಏನು ಮಾತಾಡಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಬಿ ಎಲ್ ಸಂತೋಷ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕಿತ್ತು.


ಇದನ್ನೂ ಓದಿ: Karnataka Election 2023: 'ಕನಕಪುರದಲ್ಲಿ ನಾನು ಅಭ್ಯರ್ಥಿಯೇ ಅಲ್ಲ'! ಹಿಂಗ್ಯಾಕೆ ಹೇಳಿದರು ಡಿಕೆ ಶಿವಕುಮಾರ್?


ಬಿಜೆಪಿಯವರು ಭ್ರಮೆಯಲ್ಲೇ ತೇಲುತ್ತಿದ್ದಾರೆ. ನನ್ನನ್ನು ಏನೋ ಸೋಲಿಸಬಹುದು, ವರುಣಾ ಬಿಟ್ಟು ಎಲ್ಲಿಯೂ ಹೋಗದಂತೆ ವರುಣಾದಲ್ಲಿ ಕಟ್ಟಿ ಹಾಕಬಹುದೆಂಬ ಭ್ರಮೆಯಲ್ಲಿದ್ದಾರೆ. ಆದರೆ ಅವರಿಗೆ ಚುನಾವಣೆ ಫಲಿತಾಂಶದ ಮೂಲಕ ತಕ್ಕ ಉತ್ತರ ಕೊಡ್ತೀನಿ. ನನ್ನ ವಿರುದ್ಧ ಬಿಜೆಪಿಯವರು ಏನು ಬೇಕಾದರೂ ಮಾಡಿಕೊಳ್ಳಲಿ, ನಾನು ವರುಣಾ ಅಲ್ಲ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಹೇಳಿದ್ದಾರೆ.


ನನ್ನ ಬಿಜೆಪಿಯವರು ಏನು ಮಾಡೋಕೆ ಸಾಧ್ಯ ಇಲ್ಲ, ವರುಣಾದ ಜನರು‌ ನನ್ನ ಕೈ ಬಿಡುವುದಿಲ್ಲ. ನಾನು ಎಲ್ಲೇ ಹೋದರೂ ಜನರು ನಿರೀಕ್ಷೆಗೂ ಮೀರಿ ಬೆಂಬಲ ಕೊಡುತ್ತಿದ್ದಾರೆ. ಈ ಬಾರಿ ವರುಣಾದಲ್ಲಿ ಗೆಲ್ಲುವುದರ ಜೊತೆಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಬಿಜೆಪಿ ಆರೋಪ ಏನು?


ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ ಅವರು, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ.




ರಾಜ್ಯದ ಅತಿ ದೊಡ್ಡ ಸಮುದಾಯ ವೀರಶೈವ-ಲಿಂಗಾಯತ ನಾಯಕರನ್ನು ಹೀನಾಯವಾಗಿ ನಡೆಸಿಕೊಂಡು, ಸಮುದಾಯಕ್ಕೆ ದ್ರೋಹ ಬಗೆಯುತ್ತಾ ಬಂದಿದೆ ಕಾಂಗ್ರೆಸ್.‌ ನಾಡಿನ ಅಭಿವೃದ್ಧಿಗೆ ಶ್ರಮಿಸಿದ ಮಹನೀಯರನ್ನೂ ಕಡೆಗಣಿಸಿ ಅವಮಾನಿಸಿದ ಕಾಂಗ್ರೆಸ್​​ಗೆ ವೀರಶೈವ-ಲಿಂಗಾಯತ ಸಮುದಾಯದವರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ಆರೋಪ ಮಾಡಿತ್ತು.


ಸಿದ್ದರಾಮಯ್ಯ ಹೇಳಿದ್ದೇನು?


ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿಯಿಂದ ಲಿಂಗಾಯತ ಸಿಎಂ ಅಸ್ತ್ರ ಪ್ರಯೋಗ ಮಾಡಿರುವ ಬಗ್ಗೆ ತಿರುಗೇಟು ನೀಡಿದ್ದರು. ಈಗಾಗಲೇ ಲಿಂಗಾಯತರೇ ಚೀಫ್ ಮಿನಿಸ್ಟರ್ ಇದ್ದಾರೆ ಅಲ್ವಾ ಅವರೇ ಎಲ್ಲಾ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಆಳು ಮಾಡಿದ್ದಾರೆ ಎಂದು ಸಿದ್ದು ಹೇಳಿದ್ದರು.

First published: