• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah-Lingayat: ‘ವಿಘ್ನ ಸಂತೋಷಿ’ಗಳೇ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ್ದು; ಬಿಜೆಪಿ ಲಿಂಗಾಯಸ್ತ್ರದ ವಿರುದ್ಧ ಸಿದ್ದು ‘ಬ್ರಹ್ಮಾಸ್ತ್ರ’!

Siddaramaiah-Lingayat: ‘ವಿಘ್ನ ಸಂತೋಷಿ’ಗಳೇ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ್ದು; ಬಿಜೆಪಿ ಲಿಂಗಾಯಸ್ತ್ರದ ವಿರುದ್ಧ ಸಿದ್ದು ‘ಬ್ರಹ್ಮಾಸ್ತ್ರ’!

ಸಿದ್ದರಾಮಯ್ಯ, ಮಾಜಿ ಸಿಎಂ

ಸಿದ್ದರಾಮಯ್ಯ, ಮಾಜಿ ಸಿಎಂ

ಬಿಜೆಪಿ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ RSSನ ‘ವಿಘ್ನ ಸಂತೋಷಿ’ಗಳ ಹುನ್ನಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

  • News18 Kannada
  • 5-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಲಿಂಗಾಯತ (Lingayat) ವಿರೋಧಿ ಎಂಬ ಬಿಜೆಪಿ (BJP) ಅಸ್ತ್ರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಪ್ರತ್ಯಾಸ್ತ್ರ ಬಿಟ್ಟಿದ್ದು, ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನ‌ (Leaders) ಮುಗಿಸಲು ವಿಘ್ನ ಸಂತೋಷಿಗಳ ಸಂಚು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಅವರು, ರಾಜ್ಯ ಕರ್ನಾಟಕ (Karnataka) ಪಕ್ಷದಲ್ಲಿರುವ ಲಿಂಗಾಯತ ಸಮುದಾಯದ ನಾಯಕರು ಕಾಂಗ್ರೆಸ್ (Congress) ಪಕ್ಷದ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ನೋಡಿದಾಗ ‘ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ’ ಎಂಬ ಬಸವಣ್ಣನವರ ವಚನ (Basavanna Vachanagalu) ನೆನಪಾಗುತ್ತಿದೆ.


ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್.ಎಸ್.ಎಸ್ ‘ವಿಘ್ನಸಂತೋಷಿ’ಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿ ಪಕ್ಷದ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದು ಹೇಳಿದ್ದಾರೆ.


ಇದನ್ನೂ ಓದಿ: Karnataka Election 2023: ಅಭಿವೃದ್ಧಿ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಯುವಕನಿಗೆ ಎಂಬಿ ಪಾಟೀಲ್​​​ರಿಂದ ಕಪಾಳಮೋಕ್ಷ!


ಶೆಟ್ಟರ್​​​ರನ್ನು ಸೋಲಿಸೋ ಹೊಣೆ ಬಿಎಸ್​​​ವೈ ಮೇಲೆ ಹೊರಿಸಲಾಗಿದೆ


ಅಲ್ಲದೆ, ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿ ಪಕ್ಷವನ್ನು ಅಧಿಕಾರದ ಪೀಠದಲ್ಲಿ ತಂದು ಕುಳ್ಳಿರಿಸಿದ ಲಿಂಗಾಯತ ನಾಯಕ ಬಿ.ಎಸ್.ಯಡಿಯೂರಪ್ಪನವರನ್ನು ಜೈಲಿಗೆ ಕಳಿಸಿದ್ದು, ಜಗದೀಶ್ ಶೆಟ್ಟರ್ ಅವರ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ‘ವಿಘ್ನ ಸಂತೋಷಿ’ಗಳು ಕಾಂಗ್ರೆಸ್ ಅಲ್ಲ.


ಒಲ್ಲೆನೆಂದರೂ ಬಲತ್ಕಾರವಾಗಿ ವರುಣಾ ಕ್ಷೇತ್ರದಲ್ಲಿ ವಿ.ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಮತ್ತು ಲಕ್ಷ್ಮಣ ಸವದಿ, ಸೊಗಡು ಶಿವಣ್ಣ, ಸಂಜಯ್ ಪಾಟೀಲ್ ಮೊದಲಾದ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಆರ್.ಎಸ್.ಎಸ್ ನ ‘ವಿಘ್ನ ಸಂತೋಷಿ’ಗಳು.


ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಈಗ ಬಿ.ಎಸ್.ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಈ ದಾಯಾದಿಗಳ ಕಾದಾಟದಲ್ಲಿ ಯಾರು ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ ಎಂದು ಪ್ರಶ್ನಿಸಿದ್ದಾರೆ.




ರಾಜ್ಯ ಬಿಜೆಪಿ ಪಕ್ಷದಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್.ಎಸ್.ಎಸ್ ನ ‘ವಿಘ್ನ ಸಂತೋಷಿ’ಗಳ ಹುನ್ನಾರವೇ ಆಗಿದೆ.


ಬದಲಾವಣೆಯ ಹೆಸರಲ್ಲಿ ಬಿಜೆಪಿ ಪಕ್ಷದೊಳಗಿನ ಆರ್.ಎಸ್.ಎಸ್ ‘ವಿಘ್ನ ಸಂತೋಷಿ’ಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ.

top videos


    ಈಗಲೂ ಕಾಲ ಮಿಂಚಿಲ್ಲ, ಬಿಜೆಪಿ ಪಕ್ಷದೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ, ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ. ಇದನ್ನು ಲಿಂಗಾಯತ-ವೀರಶೈವ ಸಮುದಾಯ ಕೂಡಾ ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

    First published:

    ಸುದ್ದಿ 18ಕನ್ನಡ ಟ್ರೆಂಡಿಂಗ್

    ಮತ್ತಷ್ಟು ಓದು