ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್ (G Parameshwar) ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತುಮಕೂರು (Tumakuru) ಜಿಲ್ಲೆಯ ಬೈರೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರಚಾರ ನಡೆಸುತ್ತಿದ್ದ ವೇಳೆ ಪರಮೇಶ್ವರ್ ಅವರಿಗೆ ಹೂವಿನ ಸುರಿಮಳೆ ಮಾಡಿದ್ದರು. ಈ ವೇಳೆ ಅವರ ಮೇಲೆ ಕಲ್ಲು ತೂರಾಟ (Stone Pelting) ನಡೆಸಲಾಗಿದ್ದು, ಅವರ ತಲೆಗೆ ಗಾಯವಾಗಿದೆ. ಪರಿಣಾಮ ಅವರ ತಲೆಗೆ ಪೆಟ್ಟು ಬಿದ್ದು ರಕ್ತಸ್ರಾವವಾಗಿದೆ. ಕೂಡಲೇ ಅವರನ್ನು ಅಕ್ಕಿರಾಂಪುರ ಸರ್ಕಾರಿ ಆಸ್ಪತ್ರೆಯಲ್ಲಿ (Hospital) ಪ್ರಥಮ ಚಿಕಿತ್ಸೆ ಪಡೆದು, ಸದ್ಯ ತಮ್ಮದೇ ಸಿದ್ದಾರ್ಥ ಆಸ್ಪತ್ರೆಗೆ (Siddhartha Hospital) ತೆರಳುತ್ತಿರುವ ಪರಮೇಶ್ವರ್ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮಾಜಿ ಡಿಸಿಎಂ ಡಾ.ಪರಮೇಶ್ವರ್ ಗಾಯಗೊಂಡ ಸಂದರ್ಭದ ವಿಡಿಯೋ ನ್ಯೂಸ್18ಗೆ ಲಭ್ಯವಾಗಿದ್ದು, ಅಭಿಮಾನಿಗಳು ಪರಮೇಶ್ವರ್ ಅವರನ್ನು ಮೇಲೆ ಎತ್ತಿಕೊಂಡು ಮೆರವಣಿಗೆ ಮಾಡುತ್ತಿದ್ದರು. ಈ ವೇಳೆ ಅವರ ಮೇಲೆ ಅಭಿಮಾನಿಗಳು ಹೂವಿನ ಮಳೆ ಸುರಿಸುತ್ತಿದ್ದರು. ಈ ವೇಳೆ ಏಕಾಏಕಿ ಪರಮೇಶ್ವರ್ ಅವರು ತಲೆ ಭಾಗ ಹಿಡಿದುಕೊಂಡು ಕೆಳಗಿಳಿರುವುದು ಕಂಡು ಬರುತ್ತದೆ. ಕೂಡಲೆ ಅವರನ್ನು ಅಭಿಮಾನಿಗಳು ಸ್ಥಳೀಯ ಆಸ್ಪತ್ರೆಗೆ ಕರೆತಂದಿದ್ದಾರೆ.
ಘಟನೆ ಕುರಿತಂತೆ ನ್ಯೂಸ್ 18 ಕನ್ನಡದೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ರಮೇಶ್ ಬಾಬು, ಮನೆ ಮನೆಗೂ ಪ್ರಚಾರ ನಡೆಸುತ್ತಿದ್ದ ಪರಮೇಶ್ವರ್ ಅವರನ್ನು ಮೆರವಣಿಗೆ ಮಾಡಲಾಗುತ್ತಿತ್ತು. ಈ ವೇಳೆ ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ಘಟನೆಯಲ್ಲಿ ಅವರ ತಲೆಗೆ ಗಾಯವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ನಾವು ಮಾಹಿತಿ ಪಡೆದುಕೊಂಡಿದ್ದು, ವಿರೋಧಿಗಳು ಅವರ ವಿರುದ್ಧ ಕುತಂತ್ರ ನಡೆಸಿ ಈ ರೀತಿ ಮಾಡಿದ್ದಾರೆ. ಈ ಹಿಂದೆ ಪರಮೇಶ್ವರ್ ಅವರು ನಾಮಪತ್ರ ಸಲ್ಲಿಕೆ ತೆರಳುವ ಸಂದರ್ಭದಲ್ಲೂ ಕಲ್ಲು ತೂರಾಟ ಮಾಡಲಾಗಿತ್ತು. ಆ ವೇಳೆ ಪೊಲೀಸ್ ಮಹಿಳಾ ಪೇದೆಯೊಬ್ಬರು ಗಾಯಗೊಂಡಿದ್ದರು. ಇದೊಂದು ವ್ಯವಸ್ಥಿತ ಪಿತೂರಿ. ಕಾಂಗ್ರೆಸ್ ಅಥವಾ ಬಿಜೆಪಿ ನಾಯಕರು ಮಾಡಿದ್ದಾರೋ, ಯಾರು ಮಾಡಿದ್ದಾರೆ ಎಂಬ ಬಗ್ಗೆ ಇನ್ನು ತಿಳಿದು ಬಂದಿಲ್ಲ. ಯಾರೇ ಆದರೂ ಈ ರೀತಿ ಮಾಡುವುದು ತಪ್ಪು ಎಂದು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ