• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • HD Kumaraswamy: ಚುನಾವಣೆಗೆ ಕೆಲವೇ ದಿನಗಳಿರುವಾಗಲೇ ಎಚ್​​ಡಿಕೆಗೆ ಬಿಗ್​​ಶಾಕ್​​! ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ!

HD Kumaraswamy: ಚುನಾವಣೆಗೆ ಕೆಲವೇ ದಿನಗಳಿರುವಾಗಲೇ ಎಚ್​​ಡಿಕೆಗೆ ಬಿಗ್​​ಶಾಕ್​​! ಕಣದಿಂದ ಹಿಂದೆ ಸರಿದ ಜೆಡಿಎಸ್ ಅಭ್ಯರ್ಥಿ!

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ಎಚ್‌.ಡಿ. ಕುಮಾರಸ್ವಾಮಿ (ಸಂಗ್ರಹ ಚಿತ್ರ)

ವಿಜಯಪುರ ನಗರದ ಜೆಡಿಎಸ್ ಅಭ್ಯರ್ಥಿ ಚುನಾವಣೆ ಸ್ಪರ್ಧೆಯಿಂದ ನಿವೃತ್ತಿ ಪಡೆದುಕೊಳ್ಳುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

 • News18 Kannada
 • 5-MIN READ
 • Last Updated :
 • Bijapur, India
 • Share this:

ವಿಜಯಪುರ: ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Assembly Elections) ಕಣ ದಿನದಿಂದ ದಿನಕ್ಕೆ ರಣಗೇರುತ್ತಿದ್ದು, ವಿಜಯಪುರ (Vijayapura ) ನಗರದ ಚುನಾವಣಾ ಅಖಾಡದಲ್ಲಿ ಅಚ್ಚರಿ ಬೆಳವಣಿಗೆಯಾಗಿದೆ. ವಿಜಯಪುರ ನಗರ ಕ್ಷೇತ್ರದ ಜೆಡಿಎಸ್ (JDS) ಅಭ್ಯರ್ಥಿ ಕಣದಿಂದ ಹಿಂದಕ್ಕೆ ಸರಿಯುವುದಾಗಿ ಹೇಳಿದ್ದಾರೆ. ಹೌದು, ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಬರಿ (Bandenawaz Mahabari) ಕಣದಿಂದ ಹಿಂದಕ್ಕೆ ಸರಿದಿದ್ದು, ನಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಸೈಲೆಂಟ್ ಆಗಿರುವೆ ಎಂದಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಂದೇನವಾಜ್ ಮಾಬರಿ, ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಸಂಘಟನೆ ಇಲ್ಲ, ಕಾರ್ಯಕರ್ತರ ಪಡೆ ಇಲ್ಲ. ಎರಡು ದಿನ ಪ್ರಚಾರ ನಡೆಸಿದರೂ (Election Campaign) ಯಾವುದೇ ಉತ್ತಮ ಪ್ರತಿಕ್ರಿಯೆ ಸಿಕ್ಕಿಲ್ಲ. ನನ್ನ ಮೇಲೆ ಯಾವುದೇ ಒತ್ತಡವಿಲ್ಲ, ಸ್ವಯಂ ಪ್ರೇರಣೆಯಿಂದ ಕಣದಿಂದ ಹಿಂದಕ್ಕೆ ಸರಿದಿದ್ದೇನೆಂದು ಹೇಳಿದ್ದಾರೆ.


ವಿಜಯಪುರ ನಗರದ ಜೆಡಿಎಸ್​ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೇನೆ. ಆದರೆ ನಾನು ಈಗಾಗಲೇ ಕ್ಷೇತ್ರದ ಎಲ್ಲಾ ನಾಯಕರು, ಸಮುದಾಯದ ಜನರು ಸೇರಿದಂತೆ ಸಾಮಾನ್ಯ ಮತದಾರರೊಂದಿಗೆ ಚರ್ಚೆ ನಡೆಸಿ ಅಭಿಪ್ರಾಯ ಪಡೆದುಕೊಂಡಿದ್ದೇನೆ.
ಇದನ್ನೂ ಓದಿ: PM Modi: ಮೈಸೂರಿನಲ್ಲಿ ಮೋದಿ ಭರ್ಜರಿ ರೋಡ್‌ ಶೋ, ಮೆರವಣಿಗೆ ವಾಹನದ ಬಳಿ ತೂರಿ ಬಂತು ಮೊಬೈಲ್!


ಈ ವೇಳೆ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಬಲಹೀನವಾಗಿದ್ದು, ಹಲವು ನಾಯಕರು ಚುನಾವಣೆಯಿಂದ ಹಿಂದೆ ಉಳಿಯುವಂತೆ ಹೇಳಿದ್ದಾರೆ. ನನಗೂ ಕೂಡ ಪಕ್ಷ ಕೊನೆ ಕ್ಷಣದಲ್ಲಿ ಟಿಕೆಟ್​ ಘೋಷಣೆ ಮಾಡಿತ್ತು.


ಇಷ್ಟು ಕಡಿಮೆ ಅವಧಿಯಲ್ಲಿ ಪಕ್ಷದ ಸಂಘಟನೆ ಮಾಡಲು ನನಗೂ ಕಷ್ಟ ಆಯ್ತು, ಆದ್ದರಿಂದ ನಾನು ಚುನಾವಣಾ ಕಣದಿಂದ ನಿವೃತ್ತಿ ಪಡೆದುಕೊಳ್ಳುತ್ತಿದ್ದೇನೆ. ಇದೇ ವೇಳೆ ವಿಜಯಪುರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸುತ್ತಿದ್ದು, ಪಕ್ಷದ ಕಾರ್ಯಕರ್ತರು, ಬೆಂಬಲಿಗರೂ ಕಾಂಗ್ರೆಸ್ ಅಭ್ಯರ್ಥಿಗೆ ಮತನೀಡಬೇಕು ಎಂದು ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.


ಜೆಡಿಎಸ್ ಅಭ್ಯರ್ಥಿ ಬಂದೇನವಾಜ್ ಮಹಬರಿ


ಇದರ ನಡುವೆ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್​ ಯತ್ನಾಳ್ ಅವರನ್ನು ಸೋಲಿಸಲು ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ಒಂದಾಗಿದ್ದಾರೆ ಎಂಬ ಮಾತು ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಇನ್ನು, ಜೆಡಿಎಸ್ ವರಿಷ್ಠರಿಗೆ ಯಾವುದೇ ಮಾಹಿತಿ ನೀಡದೆ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆಸರಿಯುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.

First published: