ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections ) ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್ (Congress) ಪಕ್ಷದ ನಾಯಕರಾಗಿ ಸಿದ್ದರಾಮಯ್ಯ (Siddaramaiah) ಅವರು ಆಯ್ಕೆಯಾಗಿದ್ದಾರೆ. ಹೈಕಮಾಂಡ್ ಘೋಷಣೆ ಬೆನ್ನಲ್ಲೇ ಬೆಂಗಳೂರಿಗೆ (Bengaluru) ಆಗಮಿಸಿದ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪಕ್ಷದ ಕಾರ್ಯಕರ್ತರು ಹೂಮಳೆ ಸುರಿಸಿಯಾಗಿ ಅದ್ಧೂರಿಯಾಗಿ ಸ್ವಾಗತ ಕೋರಿದರು. ವಿಮಾನ ನಿಲ್ದಾಣದಿಂದ (Airport) ನೇರ ಸರ್ಕಾರ ನಿವಾಸಕ್ಕೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಹೂಮಳೆ ಸ್ವಾಗತ ಕೋರಿದರು.
ಇತ್ತ, ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆಗೆ ಎಲ್ಲಾ ಸಿದ್ಧತೆ ಪೂರ್ಣಗೊಂಡಿದ್ದು, ಭಾರತ್ ಜೋಡೋ ಸಭಾಂಗಣದಲ್ಲಿ ಹಿರಿಯ ಶಾಸಕರು ಆಗಮಿಸಿದ್ದಾರೆ. ಕೆಲ ಕ್ಷಣಗಳಲ್ಲೇ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಚಾಮರಾಜನಗರ ಶಾಸಕ ಪುಟ್ಟರಂಗ ಶೆಟ್ಟಿ ಆಗಮನ, ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಶಾಸಕ ಬಸವರಾಜು, ಎಸ್ ಎಸ್ ಮಲ್ಲಿಕಾರ್ಜುನ, ಯು ಬಿ ಬಣಕರ್, ಆರ್ ವಿ ದೇಶಾಪಂಡೆ, ಶಿವಾನಂದ ಪಾಟೀಲ್ ಶಾಸಕಾಂಗ ಸಭೆಗೆ ಆಗಮಿಸಿದ್ದಾರೆ.
ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಈಶ್ವರ್ ಖಂಡ್ರೆ, ಸುಮಾರು ಜನ ಹಿರಿಯ ಮುಖಂಡರು ಡಿಸಿಎಂ ರೇಸ್ ನಲ್ಲಿ ಇದ್ದಾರೆ. ಲಿಂಗಾಯತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕು. ಗೆದ್ದಿರುವ ಸಂಖ್ಯೆಯ ಆಧಾರದ ಮೇಲೆ ಸಚಿವ ಸ್ಥಾನ ಹಂಚಿಕೆ ಮಾಡಬೇಕು ಎಂದು ಒತ್ತಾಯ ಮಾಡಿದರು.
ಇದನ್ನೂ ಓದಿ: BJP Rebels: ಬಿಜೆಪಿ ಸೋಲಿನ ಬೆನ್ನಲ್ಲೇ ಅರುಣ್ ಕುಮಾರ್ ಪುತ್ತಿಲಗೆ ಅಣ್ಣಾಮಲೈ ಕರೆ; ಬಂಡಾಯ ಅಭ್ಯರ್ಥಿ ಹೇಳಿದ್ದೇನು?
ನಾನು ಕೂಡ ಡಿಸಿಎಂ ಕೊಡಿ ಎಂದು ಕೇಳುತ್ತೇನೆ
ಡಿಸಿಎಂ ಹುದ್ದೆ ವಿಚಾರವಾಗಿ ಹಿರಿಯ ನಾಯಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಬಹಳಷ್ಟು ಆಕಾಂಕ್ಷಿಗಳು ಪಕ್ಷದಲ್ಲಿದ್ದಾರೆ. ಆದರೆ ಹೈಕಮಾಂಡ್ ನಿರ್ಧಾರವೇ ಅಂತಿಮ. ಒಂದೇ ಡಿಸಿಎಂ ಕೊಟ್ಟರೆ ನಾವು ಏನು ಕೇಳುವುದಿಲ್ಲ. ಹೆಚ್ಚಿಗೆ ಮಾಡಿದರೆ ನಾನು ಕೂಡ ಡಿಸಿಎಂ ಕೊಡಿ ಎಂದು ಕೇಳುತ್ತೇನೆ ಎಂದು ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ