ಸಾರಿಗೆ ನೌಕರರ ಜೊತೆ ಡಿಸಿಎಂ ಲಕ್ಷಣ ಸವದಿ ಸಂಧಾನ ಸಕ್ಸಸ್: ಕೆಲವು ಬೇಡಿಕೆಗಳಿಗೆ ಸರ್ಕಾರದ ಒಪ್ಪಿಗೆ

ಸಾರಿಗೆ ಸಂಸ್ಥೆಗಳ ನೌಕರರ ಹತ್ತು ಬೇಡಿಕೆಗಳ ಪೈಕಿ ಹಣಕಾಸಿನ ಇತಿಮಿತಿಯಲ್ಲಿ ಸಾಧ್ಯವಿರುವ ಬೇಡಿಕೆಗಳನ್ನು ಈಡೇರಿಸುವುದಾಗಿ ಸರಕಾರ ಭರವಸೆ ನೀಡಿದ ಮೇಲೆ ಮುಷ್ಕರ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬರಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು(ಡಿಸೆಂಬರ್​​. 13): ಸಾರಿಗೆ ನೌಕರರ ಜೊತೆಗಿನ ರಾಜ್ಯ ಸರ್ಕಾರದ ಸಂಧಾನ ಸಭೆ ಸಫಲವಾಗಿದೆ. ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ಮುಷ್ಕರ ವಿಚಾರವಾಗಿ ವಿಕಾಸ ಸೌಧದಲ್ಲಿ ಸಾರಿಗೆ ಸಚಿವರು ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಭೆ ಯಶಸ್ವಿಯಾಗಿದೆ. ತಮ್ಮನ್ನು ಸರಕಾರಿ ನೌಕರರೆಂದು ಪರಿಗಣಿಸಬೇಕು ಎಂಬುದೂ ಸೇರಿದಂತೆ ಪ್ರತಿಭಟನಾಕಾರರು 10-12 ಬೇಡಿಕೆಗಳನ್ನು ಮುಂದಿಟ್ಟಿದ್ದರು. ಇದರಲ್ಲಿ ಕೆಲವು ಬೇಡಿಕೆಗಳಿಗೆ ಸರಕಾರ ಅಸ್ತು ಎಂದ ಹಿನ್ನೆಲೆಯಲ್ಲಿ ನೌಕರರ ಮುಷ್ಕರ ಅಂತ್ಯಗೊಂಡಿದೆ.

ಸಾರಿಗೆ ಸಂಸ್ಥೆಗಳ ನೌಕರರ ಹತ್ತು ಬೇಡಿಕೆಗಳ ಪೈಕಿ ಹಣಕಾಸಿನ ಇತಿಮಿತಿಯಲ್ಲಿ ಸಾಧ್ಯವಿರುವ ಬೇಡಿಕೆಗಳನ್ನು ಈಡೇರಿಸುವುದಾಗಿ ಸರಕಾರ ಭರವಸೆ ನೀಡಿದ ಮೇಲೆ ಮುಷ್ಕರ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬರಲಾಗಿದೆ.ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸಮಿತಿಯೊಂದನ್ನು ರಚಿಸಲು ನಿರ್ಧರಿಸಲಾಗಿದೆ. 2020 ಜನವರಿಯಿಂದ ವೇತನ ಪರಿಷ್ಕರಣೆ, ನೌಕರರಿಗೆ ಕಿರುಕುಳ ತಡೆಯುವುದು, ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 30 ಲಕ್ಷ ಪರಿಹಾರ ಸೇರಿದಂತೆ ಸಮಿತಿ ವರದಿ, ಆರ್ಥಿಕ ಪರಿಸ್ಥಿತಿ ನೋಡಿಕೊಂಡು ಸರ್ಕಾರ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಆದರೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬುದನ್ನು ಸಭೆಯಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಪೈಪೋಟಿ ನಡೆಯೋದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ; ಜೆಡಿಎಸ್ ಆಟಕ್ಕುಂಟು, ಲೆಕ್ಕಕ್ಕಿಲ್ಲ ; ಸಿದ್ಧರಾಮಯ್ಯ

ಓಟಿ, ಭತ್ಯೆ ಮತ್ತೆ ಜನವರಿ ನಂತರ ಪ್ರಾರಂಭಿಸುತ್ತೇವೆ. ಜೊತೆಗೆ, ನೌಕರರಿಗೆ ಕಿರುಕುಳ ತಡೆಯಲು ಸಮಿತಿ ರಚಿಸುತ್ತೇವೆ. 2020ರ ಜನವರಿಯಿಂದ ವೇತನ ಪರಿಷ್ಕರಣೆ ಆಗದ ಹಿನ್ನೆಲೆಯಲ್ಲಿ 6ನೇ ವೇತನ ಆಯೋಗ ಜಾರಿ ಬಗ್ಗೆಯೂ ಮನವಿ ಮಾಡಿದ್ದಾರೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ಸುಧಾರಣೆಯಾದ ಬಳಿಕ ಪರಿಷ್ಕರಣೆ ಮಾಡುತ್ತೇವೆ ಎಂದು ಸಾರಿಗೆ ಸಚಿವ ಸವದಿ ಹೇಳಿದರು.

ಸಾರಿಗೆ ನೌಕರರು 10 ರಿಂದ 12 ಬೇಡಿಕೆ ಮುಂದಿಟ್ಟಿದ್ದರು. ಆದರೆ, ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವೇ ಇಲ್ಲ. ರಾಜ್ಯದಲ್ಲಿ 50 ನಿಗಮಗಳಿವೆ ಹಾಗಾಗಿ ಇದು ಸಾಧ್ಯವೇ ಇಲ್ಲ. ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವೇ ಇಲ್ಲ ಎಂದು ಸವದಿ ಹೇಳಿದರು. ತರಬೇತಿ ನೌಕರರ ತರಬೇತಿ ಅವಧಿ 2 ರಿಂದ 1 ವರ್ಷಕ್ಕೆ ಇಳಿಕೆ ಮಾಡುತ್ತೇವೆ. ಜೊತೆಗೆ, ನಿಗಮದಲ್ಲಿ ಮಾನವ ಸಂಪನ್ಮೂಲ ವ್ಯವಸ್ಥೆ ಜಾರಿಗೊಳಿಸುತ್ತೇವೆ ಎಂದು ಸವದಿ ತಿಳಿಸಿದರು
Published by:G Hareeshkumar
First published: