Karnataka Government: ಸರ್ಕಾರಿ ಆಫೀಸ್​ಗಳಲ್ಲಿ ಫೋಟೋ-ವಿಡಿಯೋ ತೆಗೆಯೋದು ಬ್ಯಾನ್!

ಅಲ್ಲದೇ ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಉಲ್ಲೇಖಿಸಿ ಕರ್ನಾಟಕ ಸರ್ಕಾರ ಈ ಆದೇಶ ಪ್ರಕಟಿಸಿದೆ. 

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

  • Share this:
    ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಫೋಟೋ -ವೀಡಿಯೋ ತೆಗೆಯುವುದಕ್ಕೆ ನಿಷೇಧ ಹೇರಿ ಕರ್ನಾಟಕ ಸರ್ಕಾರ ಆದೇಶ ಪ್ರಕಟಿಸಿದೆ. ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಥವಾ ವೀಡಿಯೋ ಮಾಡದಂತೆ ಕರ್ನಾಟಕ ಸರ್ಕಾರ (Karnataka Government) ಆದೇಶ ಹೊರಡಿಸಿದೆ. ಸರ್ಕಾರಿ ಕಚೇರಿಗಳ ಫೋಟೋ ಅಥವಾ ವಿಡಿಯೋ (Photo Video Capturing Banned) ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಕಾರಣ ನೀಡಿ ಕರ್ನಾಟಕ ಸರ್ಕಾರ ಈ ಆದೇಶ ನೀಡಿದೆ.  ಅಲ್ಲದೇ ವಿಶೇಷವಾಗಿ ಮಹಿಳಾ ನೌಕರರಿಗೆ (Women Employees) ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಉಲ್ಲೇಖಿಸಿ ಕರ್ನಾಟಕ ಸರ್ಕಾರ ಈ ಆದೇಶ ಪ್ರಕಟಿಸಿದೆ. 



    ಸಾಮಾಜಿಕ ಜಾಲತಾಣಗಳಲ್ಲಿ ದುರ್ಬಳಕೆಯ ಆರೋಪ
    ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ವಿವಿಧ ಕಾರ್ಯಗಳ ನಿಮಿತ್ತ ಆಗಮಿಸುತ್ತಾರೆ. ಆದರೆ ಹೀಗೆ ಸರ್ಕಾರಿ ಕಚೇರಿಗಳಿಗೆ ಆಗಮಿಸಿದ ಸಂದರ್ಭಗಳಲ್ಲಿ ಖಾಸಗಿ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಫೋಟೋ ಅಥವಾ ವಿಡಿಯೋಗಳನ್ನು ತೆಗೆದುಕೊಂಡು ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ಮನವಿ ಸಲ್ಲಿಸಲಾಗಿತ್ತು.

    ಇದನ್ನೂ ಓದಿ: Kurup ಸಿನಿಮಾ ಶೈಲಿಯಲ್ಲಿ ಹತ್ಯೆ; ತನ್ನನ್ನೇ ಹೋಲುವ ವ್ಯಕ್ತಿಯನ್ನ ಬೆಂಕಿ ಹಚ್ಚಿ ಕೊಲೆಗೈದ

    ಸರ್ಕಾರಿ ಕಚೇರಿಗಳ, ಸರ್ಕಾರದ ಘನತೆಗೆ ಕುಂದು
    ಈ ನಡೆಯಿಂದ ಸರ್ಕಾರಿ ಕಚೇರಿಗಳ, ಸರ್ಕಾರದ ಘನತೆಗೆ ಕುಂದು ಉಂಟಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆ ಉಂಟಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯ ನೌಕರರ ಸಂಘ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೋಟೋ ವಿಡಿಯೋ ತೆಗೆಯುದಕ್ಕೆ ನಿಷೇಧ ಹೇರಬೇಕು ಎಂದು ಮನವಿ ಮಾಡಿತ್ತು.

    ಇದನ್ನೂ ಓದಿ: Vijayapura Mangaluru Trains: ವಿಜಯಪುರ-ಮಂಗಳೂರು ರೈಲು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ!

    ಮನವಿ ಪುರಸ್ಕರಿಸಿದ ಸರ್ಕಾರ
    ಈ ಮನವಿಯನ್ನು ಪುರಸ್ಕರಿಸಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟಓ ಅಥವಾ ವಿಡಿಯೋ ತೆಗೆಯುವುದಕ್ಕೆ ನಿರ್ಬಂಧ ಹೇರಲಾಗಿದ ಎಂದು ಕರ್ನಾಟಕ ಸರ್ಕಾರ ಆದೇಶದಲ್ಲಿ ಉಲ್ಲೇಖಿಸಿದೆ.

    ಬೆಂಗಳೂರಲ್ಲಿ ವಾರ್ಡ್​ಗಳ ಸಂಖ್ಯೆ 243ಕ್ಕೆ ಏರಿಕೆ
    ಬಿಬಿಎಂಪಿ (BBMP) ಎಲೆಕ್ಷನ್​ ನಡೆಸಲು ಕೋರ್ಟ್​ ಆದೇಶ ನೀಡುತ್ತಿದ್ದಂತೆ ಸರ್ಕಾರ ಫುಲ್​ ಆ್ಯಕ್ಟಿವ್ ಆಗಿದೆ. ಇದೀಗ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಮಾಡಿ ಸರ್ಕಾರ ಅಂತಿಮ ಆದೇಶ ಪ್ರಕಟಿಸಿದೆ. 198 ಇದ್ದ ವಾರ್ಡ್ ಗಳನ್ನು (Ward) ಡಿ ಲಿಮಿಟೇಷನ್ (Delimitation) ಮಾಡಿ‌ 243 ವಾರ್ಡ್​ಗಳಾಗಿ ವಿಂಗಡಿಸಿದೆ. ಸಾರ್ವಜನಿಕ ವಲಯದಿಂದ ಬಂದಿದ್ದ 2,500ಕ್ಕೂ ಅಧಿಕ ಆಕ್ಷೇಪಣಾ ಅರ್ಜಿ ವಿಲೇವಾರಿ ಮುಕ್ತಾಯಗೊಂಡಿದೆ. ಸಾರ್ವಜನಿಕರಿಂದ ಸಲಹೆ, ಸೂಚನೆಗಳನ್ನು ಅಳವಡಿಸಿ ಸಣ್ಣ ಪುಟ್ಟ ಬದಲಾವಣೆ ಮಾಡಿ ಡಿ ಲಿಮಿಟೇಷನ್ ಮಾಡಿ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ನಟ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್​ (Puneeth Rajkumar) ಅವರಿಗೆ ಮತ್ತೊಮ್ಮೆ ಸರ್ಕಾರ ಗೌರವ ಸಲ್ಲಿಸಿದೆ. ಬಿಬಿಎಂಪಿ ವಾರ್ಡ್​ಗಳ ಮರು ವಿಂಗಡಣೆ ಮಾಡಿ, ವಾರ್ಡ್​ ನಂಬರ್​ 55ಕ್ಕೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ಹೆಸರು ನಾಮಕರಣ ಮಾಡಿದೆ

    ಬೆಂಗಳೂರು ವಾರ್ಡ್​ಗಳ ಸಂಖ್ಯೆ 243ಕ್ಕೆ ಏರಿಕೆ
    ಸರ್ಕಾರ 29 ಜನವರಿ 2021ರಲ್ಲಿ ಡಿ ಲಿಮಿಟೇಷನ್ ಕಮಿಟಿ ರಚಿಸಿತ್ತು ಈ ಸಮಿತಿಯಿಂದ 09 ಜೂನ್​ 2022 ರಂದು ಸರ್ಕಾರಕ್ಕೆ ವಾರ್ಡ್ ಮರುವಿಂಗಡಣಾ ಪಟ್ಟಿ ಸಲ್ಲಿಕೆ ಮಾಡಿತ್ತು. ಬಳಿಕ‌ ಸಾರ್ವಜನಿಕರ ಸಲಹೆ ಸೂಚನೆ ಮೇರೆಗೆ 15 ದಿನಗಳ ಕಾಲವಕಾಶ ನೀಡಿದ್ದ ಸರ್ಕಾರ ಇದೀಗ ಅಂತಿಮವಾಗಿ ಬೆಂಗಳೂರು ವಾರ್ಡ್ ಗಳ ಸಂಖ್ಯೆ 243ಕ್ಕೆ ಏರಿಕೆ ಮಾಡಿದೆ ಆದೇಶ ಹೊರಡಿಸಿದೆ. ರಾಜ್ಯ ಪತ್ರದಲ್ಲಿ 2011ರ ಜನಗಣತಿ ಪ್ರಕಾರ ಡಿ ಲಿಮಿಟೇಷನ್ ಮಾಡಿರುವುದಾಗಿ ಸರ್ಕಾರ ಹೇಳಿತ್ತು. ಬಿಬಿಎಂಪಿ ಅಧಿನಿಯಮ‌ 2020ರ ಕಲಂ 7ರ ಅಡಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ವಿಂಗಡಣೆ
    Published by:guruganesh bhat
    First published: