• Home
  • »
  • News
  • »
  • state
  • »
  • Tumakuru ಘಟನೆಯಿಂದ ಎಚ್ಚೆತ್ತ ಸರ್ಕಾರ; ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ನಿರಾಕರಿಸಿದ್ರೆ ಕ್ರಿಮಿನಲ್ ಕೇಸ್

Tumakuru ಘಟನೆಯಿಂದ ಎಚ್ಚೆತ್ತ ಸರ್ಕಾರ; ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆ ನಿರಾಕರಿಸಿದ್ರೆ ಕ್ರಿಮಿನಲ್ ಕೇಸ್

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಇನ್ನು ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ  ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿರುವ ಆರೋಗ್ಯ ಸಚಿವ ಡಾ.ಸುಧಾಕರ್ (Minister K Sudhakar) ಸುತ್ತೋಲೆಯನ್ನು ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿರುವ ಪ್ರಮುಖ ಅಂಶಗಳು ಹೀಗಿವೆ.

  • Share this:

ನವೆಂಬರ್ 3ರಂದು ತುಮಕೂರಿನಲ್ಲಿ (Tumakuru) ಹೃದಯ ವಿದ್ರಾವಕ ಘಟನೆ ನಡೆದಿತ್ತು. ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗಲಾರದೇ ಗರ್ಭಿಣಿ ಮತ್ತು ಅವಳಿ ಮಕ್ಕಳು (Twin Baby) ಸಾವನ್ನಪ್ಪಿದ್ದರು. ಈ ಘಟನೆಯಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ (Karnataka Government) ಸುತ್ತೋಲೆಯನ್ನು (Circular) ಹೊರಡಿಸಿದೆ. ಇನ್ನು ಮುಂದೆ ಇಂತಹ ಘಟನೆಗಳು ನಡೆದ್ರೆ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ವಜಾಗೊಳಿಸಲಾಗುವುದು ಎಂದು ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಭಾರತಿ ನಗರದ ಅಭಯ ಆಂಜನೇಯನ ಸ್ವಾಮಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ 30 ವರ್ಷದ ಕಸ್ತೂರಿ ಮೃತಪಟ್ಟಿದ್ದರು. ತುಂಬು ಗರ್ಭಿಣಿಯಾಗಿದ್ದ ಕಸ್ತೂರಿ ಅವರು ಹೆರಿಗೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ (District Hospital, Tumakuru) ತೆರಳಿದ್ದರು. ಆದ್ರೆ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ತಾಯಿ ಕಾರ್ಡ್​ ಬೇಕೆಂದು ಕೇಳಿದ್ದರು.


ತಾಯಿ ಕಾರ್ಡ್​ ಇರದ ಹಿನ್ನೆಲೆ ಸಿಬ್ಬಂದಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರು ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈಗಾಗಲೇ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿದೆ.


ರಾಜ್ಯ ಸರ್ಕಾರದಿಂದ ಸುತ್ತೋಲೆ


ಇನ್ನು ಈ ಘಟನೆಗೆ ಸಾರ್ವಜನಿಕ ವಲಯದಲ್ಲಿ  ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ತುರ್ತು ಸುದ್ದಿಗೋಷ್ಠಿ ನಡೆಸಿರುವ ಆರೋಗ್ಯ ಸಚಿವ ಡಾ.ಸುಧಾಕರ್ (Minister K Sudhakar) ಸುತ್ತೋಲೆಯನ್ನು ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿರುವ ಪ್ರಮುಖ ಅಂಶಗಳು ಹೀಗಿವೆ.


1.ತುರ್ತು ಪರಿಸ್ಥಿತಿಯಲ್ಲಿರುವ ಬರುವ  ರೋಗಿಗಳ ಬಳಿ ಯಾವುದೇ ದಾಖಲೆಗಳು ಇಲ್ಲದಿದ್ದರೂ ಚಿಕಿತ್ಸೆ ನೀಡಬೇಕು.


2.ರೋಗಿಯ ಬಳಿ ಆಧಾರ್ ಕಾರ್ಡ್​, ಪಡಿತರ ಚೀಟಿ, ತಾಯಿ ಕಾರ್ಡ್​ ನಂತಹ ದಾಖಲೆಗಳು ಇಲ್ಲದಿದ್ದರೂ ಚಿಕಿತ್ಸೆ ನೀಡಬೇಕು.


3.ಆರೋಗ್ಯ ಸೇವೆ ರಾಷ್ಟ್ರೀಯತೆ, ಜಾತಿ , ಧರ್ಮ ಮತ್ತು ರೋಗಿಯ ಆರ್ಥಿಕ ಸ್ಥಿತಿಯ ಮೇಲೆ ನಿರ್ಧರಿತವಾಗಬಾರದು.


4.ರೋಗಿಗೆ ತುರ್ತು ಚಿಕಿತ್ಸೆಯ ಅಗತ್ಯವಿದ್ರೆ ವೈದ್ಯರು, ಶೂಶ್ರೂಶಕರು ಸಹಾಯ ಮಾಡಬೇಕು.


ಜಿಲ್ಲಾ ಸರ್ಜನ್​ಗೆ ಕಾರಣ ಕೇಳಿ ನೋಟಿಸ್​


ಈ ಘಟನೆಯಲ್ಲಿ ಅಮಾನವೀಯವಾಗಿ ನಡೆದುಕೊಂಡ ವೈದ್ಯರು, ಸಿಬ್ಬಂದಿಗೆ ಹಾಗೂ ಜಿಲ್ಲಾ ಸರ್ಜನ್​ಗೆ, ಆಡಳಿತ ವೈಫಲ್ಯ ಎಂದು ಪರಿಗಣಿಸಿ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ. ಕರ್ತವ್ಯದಲ್ಲಿರುವ ವೈದ್ಯರಿಗೆ ಕೂಡ ಪ್ರಕರಣದ ಗಂಭೀರತೆ ಬಗ್ಗೆಯೂ ತಿಳಿಸಲಾಗಿದೆ. ಹಾಗೆಯೇ ಅವರಿಗೂ ಶೋಕಾಸ್‌ ನೋಟಿಸ್‌ ನೀಡಿ 24 ಗಂಟೆಯೊಳಗೆ ಉತ್ತರ ನೀಡಲು ಸೂಚಿಸಲಾಗಿದೆ.


ಇದನ್ನೂ ಓದಿ:  Murugha Swamy Case: ಚಾರ್ಜ್​​ಶೀಟ್​ ಸಲ್ಲಿಕೆ, ಔಷಧಿ ಬೆರೆಸಿದ ಸೇಬು ನೀಡಿ ದೌರ್ಜನ್ಯ; ಮಕ್ಕಳಿಗೆ ಕೊಲೆ ಬೆದರಿಕೆ


ತುರ್ತು ಪರಿಸ್ಥಿತಿಯಲ್ಲಿ ಯಾವ ದಾಖಲೆಗಳೂ ಮುಖ್ಯವಲ್ಲ


ಈ ರೀತಿಯ ಘಟನೆ ಎಂದೂ ಮರುಕಳಿಸಬಾರದು. ಅದಕ್ಕಾಗಿ ಎಲ್ಲಾ ಕ್ರಮಗಳನ್ನು ವಹಿಸಲಾಗಿದೆ. ಯಾವುದೇ ರೋಗಿ ತುರ್ತು ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ಬಂದಾಗ ಯಾವ ದಾಖಲೆಗಳೂ ಮುಖ್ಯವಲ್ಲ. ತಾಯಿ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನು ಚಿಕಿತ್ಸೆ ನೀಡಿದ ಬಳಿಕವೂ ಕೇಳಬಹುದು. ಈ ಬಗ್ಗೆ ಹಿಂದಿನಿಂದಲೂ ಸೂಚನೆ ಇದೆ.


76 ತುರ್ತು ಸೇವೆಗಳು


ಖಾಸಗಿ ಆಸ್ಪತ್ರೆಗಳಲ್ಲಿ 76 ತುರ್ತು ಸೇವೆಗಳನ್ನು ಜೋಡಿಸಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಈ ಸೇವೆಗಳು ಇಲ್ಲವಾದರೆ, ಖಾಸಗಿ ಆಸ್ಪತ್ರೆಯಲ್ಲಿ ಆ ಸೇವೆ ಪಡೆಯಬಹುದು. ಆಗ ಸರ್ಕಾರವೇ ವೆಚ್ಚ ಭರಿಸುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ.


ಇದನ್ನೂ ಓದಿ:  Murugha Swamy: ಬಿಳಿ ಪೌಡರ್​ಗಾಗಿ ಗೋಡೆ ಮುಂದೆ ಅಳ್ತಿದ್ದ ಬಾಲಕಿ; ಡ್ರಗ್ಸ್​ ದಾಸರನ್ನಾಗಿಸಿ ವಿಕೃತವಾಗಿ ಬಳಕೆ


ಅಧಿಕಾರಿಗಳ ವರ್ತನೆಗೆ ಬೇಸರ


ಗರ್ಭಿಣಿ ಯಾವುದೇ ರಾಜ್ಯದವರಾಗಿದ್ದರೂ, ದಾಖಲೆ ಇಲ್ಲದಿದ್ದರೂ ಆಸ್ಪತ್ರೆಗೆ ಬಂದಾಗ ಚಿಕಿತ್ಸೆ ನೀಡಿ ಹೆರಿಗೆ ಮಾಡಿಸಬೇಕಿತ್ತು. ಮಾನವೀಯತೆಯಿಂದ ಅವರೊಂದಿಗೆ ನಡೆದುಕೊಳ್ಳಬೇಕಿತ್ತು. ಇಲ್ಲಿ ದಾಖಲೆ ಮುಖ್ಯವಲ್ಲ, ಜೀವ ಮುಖ್ಯ. ಕೆಲವರಿಂದ ಆದ ಈ ಘಟನೆಯಿಂದ ಇಡೀ ವ್ಯವಸ್ಥೆಗೆ ಕೆಟ್ಟ ಹೆಸರು ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದರು.

Published by:Mahmadrafik K
First published: