HOME » NEWS » State » KARNATAKA GOVERNMENT DECIDED 1000 RUPEES PENALTY FOR NOT WEARING MASK SCT

ಇನ್ನುಮುಂದೆ ಮಾಸ್ಕ್‌ ಧರಿಸದವರಿಗೆ 1000 ರೂ. ದಂಡ; ಸಚಿವ ಡಾ.ಕೆ. ಸುಧಾಕರ್ ಮಾಹಿತಿ

ಮಾಸ್ಕ್ ಹಾಕದವರಿಗೆ ನಗರ ಪ್ರದೇಶದಲ್ಲಿ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. 

news18-kannada
Updated:October 1, 2020, 1:12 PM IST
ಇನ್ನುಮುಂದೆ ಮಾಸ್ಕ್‌ ಧರಿಸದವರಿಗೆ 1000 ರೂ. ದಂಡ; ಸಚಿವ ಡಾ.ಕೆ. ಸುಧಾಕರ್ ಮಾಹಿತಿ
ಸಚಿವ ಡಾ. ಕೆ. ಸುಧಾಕರ್
  • Share this:
ಬೆಂಗಳೂರು (ಅ. 1): ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದವರಿಗೆ ದಂಡ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಮಾಸ್ಕ್ ಹಾಕದವರಿಗೆ ನಗರ ಪ್ರದೇಶದಲ್ಲಿ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು  ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳ ಶಿಫಾರಸಿನ‌ ಮೇರೆಗೆ ಈ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು  ಅಧಿಕಾರಿಗಳ ಉನ್ನತ ಮಟ್ಟದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಪೂರ್ತಿಯಾಗಿ ಮಾಸ್ಕ್ ಧರಿಸದರಿಗೂ ಸಹ ದಂಡ ಅನ್ವಯವಾಗಲಿದೆ.  ಇತ್ತೀಚಿನ‌ ದಿನಗಳಲ್ಲಿ ಮಾಸ್ಕ್‌ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ 200 ರೂ. ದಂಡವನ್ನು ಹೆಚ್ಚಿಸುವುದು ಅನಿವಾರ್ಯವಾಗಿದೆ. ಆಯಾ ಪೊಲೀಸ್‌ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲಿ ಮಾಡುವಂತೆ ಸೂಚನೆ ನೀಡಲಾಗುವುದು ಎಂದು ಹೇಳಿದರು. ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಮದುವೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗರಿಷ್ಠ 50 ಜನರು ಸೇರಲು ಮಾತ್ರ ಅವಕಾಶವಿರಲಿದೆ. ಹೆಚ್ಚು ಜನ‌ ಸೇರಿದರೆ ಆಯೋಜಕರು ಅಥವಾ ಆ ಸಂಸ್ಥೆ ಮಾಲೀಕರ ವಿರುದ್ದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಮಾರುಕಟ್ಟೆ, ಮಾಲ್, ಪಾರ್ಕ್‌ ಇತರೆ ಸಾರ್ವಜನಿಕ ಸ್ಥಳದಲ್ಲಿ 5ಕ್ಕೂ ಹೆಚ್ಚು ಜನ ಗುಂಪುಗೂಡಿ‌ ನಿಲ್ಲುವಂತಿಲ್ಲ. ಇವರ ನಡುವೆ ಸಹ ಕನಿಷ್ಠ 6 ಅಡಿ ಅಂತರವಿರಬೇಕು. ಇಲ್ಲವಾದರೆ ಆ ಸಂಸ್ಥೆ ಮಾಲೀಕರ ಮೇಲೆ ದಂಡ ಪ್ರಯೋಗ ಮಾಡಲಾಗುವುದು.
ಕೋರೋನಾ ಜಾಗೃತಿ ಸಂಬಂಧ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯ ಯೋಜನೆ ರಚಿಸಲಾಗಿದೆ. ರಾಜಕಾರಣಿಗಳು, ಕ್ರೀಡೆ, ಸಿನಿ ತಾರೆಯರು, ಧಾರ್ಮಿಕ ಗುರುಗಳ ಮೂಲಕ ಮಾಸ್ಕ್‌ ಧರಿಸುವುದು, ಕೋರೋನಾ ಮಾರ್ಗಸೂಚಿ ಅನುಸರಿಸುವಂತೆ  ವಿಡಿಯೋ ಮೂಲಕ ಜಾಗೃತಿ ಮೂಡಿಸಲು ಕ್ರಮ ವಹಿಸಲಾಗುವುದು. ಜೊತೆಗೆ ಸ್ವಯಂ ಸೇವಕರು, ಲಯನ್ಸ್‌ ಕ್ಲಬ್‌ ರೋಟರಿ‌ ಕ್ಲಬ್‌, ವೆಲ್‌ಫೇರ್ ಅಸೋಸಿಯೇಷನ್​ನಂತಹ ಸಂಘ ಸಂಸ್ಥೆಗಳು ಸರಕಾರದೊಂದಿಗೆ ಕೈ ಜೋಡಿಸಲು ಕರೆ ನೀಡಿದ್ದಾರೆ.

ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಮೈತ್ರಿಯ ಪ್ರಶ್ನೆಯೇ ಇಲ್ಲ; ಹೆಚ್​.ಡಿ. ಕುಮಾರಸ್ವಾಮಿ ಸ್ಪಷ್ಟನೆ

ರಾಜ್ಯದ 15 ಜಿಲ್ಲೆಗಳಲ್ಲಿ ಶೇ. 10ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುತ್ತಿದೆ. ಈ ಪೈಕಿ ಇಂದು ಮೈಸೂರು, ಹಾಸನ, ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ ಮತ್ತು ಕೊಪ್ಪಳ ಏಳು ಜಿಲ್ಲೆಗಳ ಡಿಸಿ, ಡಿಎಚ್‌ಒ ಇತರೆ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಪಾಸಿಟಿವ್ ಪ್ರಮಾಣವನ್ನು ಕಡಿಮೆ‌ ಮಾಡಲು ತೆಗೆದುಕೊಳ್ಳಬೇಕಾದ ಮಾರ್ಗಸೂಚಿಗಳನ್ನು ನೀಡಿದ್ದೇವೆ.  ಉಳಿದ‌ ಜಿಲ್ಲೆಗಳ ಜೊತೆ‌ ಕೂಡ ಸಭೆ ನಡೆಸಲಾಗುವುದು.  ಶೇ. 17ರಷ್ಟು ಪಾಸಿಟಿವ್ ಪ್ರಮಾಣ ಹೊಂದುವ ಮೂಲಕ ಮೈಸೂರು ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ. ಸಾರಿಗೆ ವ್ಯವಸ್ಥೆಯಾದ ಬಸ್‌ಗಳಲ್ಲಿ ಶೇ. 50ರಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶವಿರಲಿದೆ. ಮಾಸ್ಕ್‌ ಇಲ್ಲದವರನ್ನು ಬಸ್‌ ಒಳಗೆ ಪ್ರವೇಶ ನೀಡದಂತೆ ಕಂಡಕ್ಟರ್‌ಗಳಿಗೆ ಸೂಚಿಸಲಾಗುವುದುಎಂದಿದ್ದಾರೆ.

ಎಲ್ಲಾ ಸರ್ಕಾರಿ ಕಚೇರಿಗಳ ಕೆಲಸಗಾರರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು, ಇಲ್ಲವಾದರೆ ಕಚೇರಿ ಪ್ರವೇಶ ವಿರುವುದಿಲ್ಲ.‌ ಇದನ್ನು ಅತ್ಯಂತ ಕಠಿಣ ಹಾಗೂ ಶಿಸ್ತಾಗಿ ಪಾಲನೆ ಮಾಡಲಾಗುತ್ತದೆ. ಕೇರಳದಲ್ಲಿ ಕೊರೋನಾ ನಿಯಂತ್ರಣಕ್ಕೆ ಬಾರದೇ ಇದ್ದರೆ ಲಾಕ್‌ಡೌನ್‌ ಮಾಡುವುದು ಅನಿವಾರ್ಯ ಎಂದು ಅಲ್ಲಿನ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.‌ ಈ ಪರಿಸ್ಥಿತಿ ನಮ್ಮಲ್ಲಿ ಬರಬಾರದು ಎಂದರೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಕೊರೋನಾ ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಕೊರೋನಾ ಟೆಸ್ಟಿಂಗ್ ಪ್ರಮಾಣವನ್ನು 1.5 ಲಕ್ಷಕ್ಕೆ  ಹೆಚ್ಚಿಸಲು ತೀರ್ಮಾನಿಸಿದ್ದೇವೆ. ಬುಧವಾರ 94,8 86 ಟೆಸ್ಟ್‌ ಮಾಡಲಾಗಿದೆ. ಆರ್‌ಟಿಪಿಸಿಆರ್‌ ಟೆಸ್ಟ್‌ ಪ್ರಮಾಣ ಹೆಚ್ಚಿಸಲಾಗುವುದು. ರಾಜ್ಯದಲ್ಲಿ 73,599 ಹಾಸಿಗೆ ಲಭ್ಯತೆ ಇದೆ. ಆಕ್ಸಿಜನ್‌ ಸಹಿತ 11,892 ಹಾಸಿಗೆ, ವೆಂಟಿಲೇಟರ್‌ ಸಹಿತ ಹಾಸಿಗೆ 2717 ಲಭ್ಯ ಎಂದು ಡಾ. ಕೆ. ಸುಧಾಕರ್ ಮಾಹಿತಿ ನೀಡಿದರು.
Published by: Sushma Chakre
First published: October 1, 2020, 1:12 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories