ಬೆಂಗಳೂರಿನ ನಾಲ್ಕು ದಿಕ್ಕಿನಲ್ಲೂ ರಂಗಮಂದಿರ ನಿರ್ಮಾಣ; ದೇವನಹಳ್ಳಿಗೆ ಕೊನೆಗೂ ಬಂತು ಕಲಾಕ್ಷೇತ್ರ

60 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು. ದೇವನಹಳ್ಳಿ - ಚಿಕ್ಕಬಳ್ಳಾಪುರ ಜಿಲ್ಲೆ ಮುಖ್ಯರಸ್ತೆಯ ನಂದಿಕ್ರಾಸ್ ಬಳಿ ಇರುವ ಪಾರಿವಾಳ ಗುಡ್ಡದ ಸ್ಥಳದಲ್ಲಿ 4 ಎಕರೆ ಭೂ ಪ್ರದೇಶವನ್ನು ಇಂದು ಪರಿಶೀಲಿಸಲಾಗಿದೆ.

news18-kannada
Updated:October 1, 2020, 2:02 PM IST
ಬೆಂಗಳೂರಿನ ನಾಲ್ಕು ದಿಕ್ಕಿನಲ್ಲೂ ರಂಗಮಂದಿರ ನಿರ್ಮಾಣ; ದೇವನಹಳ್ಳಿಗೆ ಕೊನೆಗೂ ಬಂತು ಕಲಾಕ್ಷೇತ್ರ
ರಂಗಮಂದಿರ ನಿರ್ಮಾಣಕ್ಕೆ ದೇವನಹಳ್ಳಿಯಲ್ಲಿ ಸ್ಥಳ ಪರಿಶೀಲನೆ ಮಾಡಿದ ಟಿ.ಎಸ್. ನಾಗಾಭರಣ
  • Share this:
ಬೆಂಗಳೂರು ಗ್ರಾಮಾಂತರ (ಅ. 1): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ಜಿಲ್ಲಾ ರಂಗಮಂದಿರಗಳನ್ನು ನಿರ್ಮಾಣ ಮಾಡಲು ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಎಸ್. ರಂಗಪ್ಪ ಹಾಗೂ ಅಧಿಕಾರಿಗಳ ತಂಡದೊಂದಿಗೆ ದೇವನಹಳ್ಳಿಯ ನಂದಿಕ್ರಾಸ್ ಬಳಿ ಇರುವ ಪಾರಿವಾಳ ಗುಟ್ಟ ಸ್ಥಳ ಪರಿಶೀಲನೆ ನಡೆಸಿದರು.  ರಾಜ್ಯ ಸರ್ಕಾರವು 2020-21ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ, 60 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರಿನ ನಾಲ್ಕು ದಿಕ್ಕುಗಳಲ್ಲಿ ರವೀಂದ್ರ ಕಲಾಕ್ಷೇತ್ರ ಮಾದರಿಯಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು.

ಅದರಂತೆ ಬೆಂಗಳೂರು ಉತ್ತರ ಭಾಗದಲ್ಲಿ ದೇವನಹಳ್ಳಿ ತಾಲೂಕು ಇರುವುದರಿಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾ ರಂಗಮಂದಿರ ಇಲ್ಲದಿರುವುದರಿಂದ 2020ರ ಸೆಪ್ಟೆಂಬರ್ 9ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5 ಎಕರೆ ಭೂ ಪ್ರದೇಶದಲ್ಲಿ, ರೂ. 15 ಕೋಟಿ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು.  ದೇವನಹಳ್ಳಿ - ಚಿಕ್ಕಬಳ್ಳಾಪುರ ಜಿಲ್ಲೆ ಮುಖ್ಯರಸ್ತೆಯ ನಂದಿಕ್ರಾಸ್ ಬಳಿ ಇರುವ ಪಾರಿವಾಳ ಗುಡ್ಡದ ಸ್ಥಳದಲ್ಲಿ 4 ಎಕರೆ ಭೂ ಪ್ರದೇಶವನ್ನು ಇಂದು ಪರಿಶೀಲಿಸಲಾಗಿದ್ದು, ಈ ಸ್ಥಳವು ರಂಗಮಂದಿರ ನಿರ್ಮಾಣಕ್ಕೆ ಉತ್ತಮ ಹಾಗೂ ಪೂರಕ ವಾತಾವರಣವನ್ನು ಹೊಂದಿದೆ ಮತ್ತು ಕಲಾವಿದರಿಗೆ ಅನುಕೂಲವಾದ ಸ್ಥಳವಾಗಿದೆ ಎಂದು ತಿಳಿಸಿದ ಅಧ್ಯಕ್ಷರು, ಸ್ಥಳ ಪರಿಶೀಲನೆ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.


ಇದರಿಂದ ಕಲಾವಿದರು, ಜಲಾಭಿಮುಖಿಗಳಿಗೆ ಅನುಕೂಲ ಆಗುವುದರೊಂದಿಗೆ ಕಲಾ ಆರಾಧಕರಿಗೂ ಸಂತಸ ನೀಡುತ್ತದೆ. ಎರಡೂ ಜಿಲ್ಲೆಯ ಜನರಿಗೂ ಅನುಕೂಲ ಆಗಲಿದ್ದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ನಮ್ಮ ಸಂಸ್ಕೃತಿಯ ಬಗ್ಗೆ ಬೆಳಕು ಚೆಲ್ಲುತ್ತದೆ ಎಂದು ಟಿ.ಎಸ್, ನಾಗಾಭರಣ ಹೇಳಿದರು. ಈ ಸ್ಥಳದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಮಂಜುನಾಥ್ ಪಿ. ಆರಾಧ್ಯ, ನಿರ್ಮಿತಿ ಕೇಂದ್ರದ ಜಿಲ್ಲಾ ಯೋಜನಾ ನಿರ್ದೇಶಕ ವಾಸುದೇವ್, ದೇವನಹಳ್ಳಿ ತಾಲೂಕು ತಹಶೀಲ್ದಾರ್ ಅಜಿತ್‌ಕುಮಾರ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Published by: Sushma Chakre
First published: October 1, 2020, 2:02 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading