Land Survey: ವಿರೋಧದ ಬಳಿಕ ಭೂಮಾಪನ ಶುಲ್ಕ ಇಳಿಸಿದ ಸರ್ಕಾರ

Government Order: ಈ ಹಿಂದೆ ಆಡಳಿತಾತ್ಮಕ ವೆಚ್ಚ, ನಿರ್ವಹಣಾ ವೆಚ್ಚ ಮತ್ತು ಖಾಸಗಿ ಭೂಮಾಪಕರ ಸೇವಾ ಶುಲ್ಕದ ಹೆಚ್ಚಳದ ಹೊರೆಯನ್ನು ಜಮೀನುಗಳ ಮಾಲೀ ಕರಿಗೆ ವರ್ಗಾಯಿಸಿರುವ ಕಂದಾಯ ಇಲಾಖೆ, ಭೂಮಾಪನ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿತ್ತು

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
    ಭೂಮಾಪನ, 11-ಇ ನಕ್ಷೆ, ಭೂ ಪರಿವರ್ತನೆ ಮತ್ತು ತತ್ಕಾಲ್ ಪೋಡಿಗೆ ಶುಲ್ಕ ಹೆಚ್ಚಳ ಮಾಡಿದ್ದ ಕಂದಾಯ ಇಲಾಖೆ(Revenue  Department), ಮತ್ತೊಮ್ಮೆ ಪರಿಷ್ಕರಿಸಿ ಶುಲ್ಕ(Price) ಕಡಿಮೆ ಮಾಡುವಂತೆ ಸರ್ಕಾರ ಆದೇಶ(Government Order) ಹೊರಡಿಸಿದೆ. ಈ ಹಿಂದೆ ಆಡಳಿತಾತ್ಮಕ ವೆಚ್ಚ(Administrative costs), ನಿರ್ವಹಣಾ ವೆಚ್ಚ ಮತ್ತು ಖಾಸಗಿ ಭೂಮಾಪಕರ ಸೇವಾ ಶುಲ್ಕದ ಹೆಚ್ಚಳದ ಹೊರೆಯನ್ನು ಜಮೀನುಗಳ(Land) ಮಾಲೀ ಕರಿಗೆ(Owner) ವರ್ಗಾಯಿಸಿರುವ ಕಂದಾಯ ಇಲಾಖೆ, ಭೂಮಾಪನ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿತ್ತು. ಫೆಬ್ರುವರಿ 1ರಿಂದಲೇ ಪರಿಷ್ಕೃತ ದರ ಜಾರಿಯಾಗಿತ್ತು, ಶುಲ್ಕದಲ್ಲಿ ಹತ್ತು ಪಟ್ಟಿನಿಂದ ನೂರು ಪಟ್ಟಿನಷ್ಟು ಏರಿಕೆ ಮಾಡಲಾಗಿತ್ತು. ಆದರೆ  ಭಾರೀ ವಿರೋಧ ಕೇಳಿ ಬಂದ ಹಿನ್ನೆಲೆ ಶುಲ್ಕ ಏರಿಕೆಯಲ್ಲಿ ಕೊಂಚ ಇಳಿಕೆ ಮಾಡಿದೆ.

    ಎಷ್ಟು ಕಡಿಮೆ ಮಾಡಲಾಗಿದೆ..?

    ಎರಡು ಎಕರೆಗೆ ₹1,500 ಹಾಗೂ ಪ್ರತಿ ಎಕರೆಗೆ ₹400 ರಂತೆ ನಿಗದಿ ಮಾಡಿದೆ. ಆದರೆ, ಗರಿಷ್ಠ ಮಿತಿಯನ್ನು ನಿಗದಿ ಮಾಡಿಲ್ಲ.ನಗರ ಪ್ರದೇಶದಲ್ಲಿ ಎರಡು ಎಕರೆವರೆಗೂ ₹2,500 ಮತ್ತು ನಂತರದ ಪ್ರತಿ ಎಕರೆಗೆ ₹1,000 ದಂತೆ ಗರಿಷ್ಠ ₹5,000ದವರೆಗೆ ಶುಲ್ಕ ವಿಧಿಸಲು ಅನುಮತಿ ನೀಡಲಾಗಿತ್ತು. ಪರಿಷ್ಕರಣೆ ಆದೇಶದಲ್ಲಿ ನಗರ ಪ್ರದೇಶದ ಶುಲ್ಕದಲ್ಲಿ ಬದಲಾವಣೆ ಆಗಿಲ್ಲ. ಆದರೆ, ಗರಿಷ್ಠ ಮಿತಿ ಕೈಬಿಡಲಾಗಿದೆ.

    ಇದನ್ನೂ ಓದಿ: Tata group ಎಷ್ಟು ಕಂಪನಿಗಳ ಒಡೆಯ ಗೊತ್ತಾ? ನಿಮಗೆ ಗೊತ್ತಿರದ ಸಂಗತಿಗಳ ಬಗ್ಗೆ ಮಾಹಿತಿ ಇಲ್ಲಿದೆ

    ಹದ್ದುಬಸ್ತು ಎಂದರೇನು..?

    ಪೋಡಿಯಾದ ಜಮೀನು ಅಥವಾ ಜಾಗ ಬೇರೆಯವರಿಂದ ಒತ್ತುವರಿಯಾಗಿದ್ದರೆ ಅಳತೆ ಮಾಡಿ ನಿಖರ ಗಡಿ ಗುರುತಿಸಿ ಬಂದೋಬಸ್ತ್ ಮಾಡಿಕೊಳ್ಳುವುದೇ ಹದ್ದುಬಸ್ತು. ಮಾಲೀಕರಿಗೆ ತಮ್ಮ ಜಮೀನು ಮತ್ತು ಜಾಗದ ವಿಸ್ತೀರ್ಣ ಬಗ್ಗೆ ಸಮರ್ಪಕವಾಗಿ ಗೊತ್ತಿರುವುದಿಲ್ಲ. ಹಾಗಾಗಿ, ಹದ್ದುಬಸ್ತು ಮಾಡಿಕೊಂಡರೆ ಜಮೀನು ಎಲ್ಲಿ ಒತ್ತುವರಿಯಾಗಿದೆ, ಯಾರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಒತ್ತುವರಿ ಜಾಗ ತೆರವುಗೊಳಿಸಿ ನಿಖರ ಗಡಿ ಗುರುತಿಸಬಹುದು.

    ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಕಲಂ 131(ಬಿ)ರಡಿ ಸಾರ್ವಜನಿಕರಿಂದ ಅಳತೆಗಾಗಿ ಮೋಜಿಣಿ ವ್ಯವಸ್ಥೆಯಡಿ ಸಲ್ಲಿಕೆಯಾಗುವ ಹದ್ದುಬಸ್ತು ಅರ್ಜಿಗಳಿಗೆ ಪ್ರತಿ ಸರ್ವೆ ನಂಬರ್​ಗೆ 35 ರೂ.ಇತ್ತು. ಅಲ್ಲದೆ, ಗ್ರಾಮದ 4 ಸರ್ವೆ ಅಥವಾ ಹಿಸ್ಸಾ ನಂಬರ್​ಗೆ 35 ರೂ.ಇತ್ತು. ಹೆಚ್ಚುವರಿ ಸರ್ವೆ ಅಥವಾ ಹಿಸ್ಸಾ ನಂಬರ್​ಗಳಿಗೆ 10 ರೂ.ಇತ್ತು. ಅಂದಾಜು 45 ವರ್ಷಗಳ ಹಿಂದೆ ಈ ಶುಲ್ಕವನ್ನು ನಿಗದಿಪಡಿಸಲಾಗಿತ್ತು. ಇದುವರೆಗೆ ಪರಿಷ್ಕರಣೆ ಆಗಿರಲಿಲ್ಲ. ಆಡಳಿತಾತ್ಮಕ ಮತ್ತು ನಿರ್ವಹಣಾ ವೆಚ್ಚ ಅಧಿಕವಾಗಿರುವ ಹಿನ್ನೆಲೆಯಲ್ಲಿ ಶುಲ್ಕ ಏರಿಸಲಾಗಿದೆ ಎಂದು ಆದೇಶದಲ್ಲಿ ಸರ್ಕಾರ ಉಲ್ಲೇಖಿಸಿತ್ತು.

    ಇದನ್ನೂ ಓದಿ: ಎಲ್ಲವೂ ಶಾಂತವಾಗಿದೆ, ದಯವಿಟ್ಟು ನನ್ನನ್ನ ಕೇಳಬೇಡಿ ಅಂದ್ರು ಸಚಿವ ಕೆ.ಎಸ್.ಈಶ್ವರಪ್ಪ

    ಎಷ್ಟೇಷ್ಟು ಶುಲ್ಕ ಏರಿಕೆ ಮಾಡಲಾಗಿತ್ತು..?

    11– ಇ ನಕ್ಷೆ, ಭೂ ಪರಿವರ್ತನೆ ಪೂರ್ವ ನಕ್ಷೆ ಮತ್ತು ತತ್ಕಾಲ್‌ ಪೋಡಿ ಭೂಮಾಪನ ಶುಲ್ಕವನ್ನು 2014ರಲ್ಲಿ ಪರಿಷ್ಕರಿಸಲಾಗಿತ್ತು. ಗ್ರಾಮೀಣ ಪ್ರದೇಶದಲ್ಲಿ ಎರಡು ಎಕರೆಗೆ ₹ 1,200 ಮತ್ತು ನಂತರದ ಪ್ರತಿ ಎಕರೆಗೆ ತಲಾ ₹ 100ರಂತೆ ಗರಿಷ್ಠ ₹ 2,500 ನಿಗದಿಪಡಿಸಲಾಗಿತ್ತು. ನಗರ ಪ್ರದೇಶದಲ್ಲಿ ಒಂದು ಸರ್ವೆ ನಂಬರ್‌ಗೆ ₹ 1,200 ನಂತರದ ಪ್ರತಿ ಹೆಚ್ಚುವರಿ ಸರ್ವೆ ನಂಬರ್‌ಗೆ ತಲಾ ₹ 200 ಶುಲ್ಕ ನಿಗದಿಪಡಿಸಲಾಗಿತ್ತು. ಈ ಶುಲ್ಕವನ್ನು ಪರಿಷ್ಕರಣೆ ಮಾಡಿರುವ ಕಂದಾಯ ಇಲಾಖೆ, ಎರಡು ಎಕರೆಗೆ ₹ 2,000 ಹಾಗೂ ನಂತರದ ಪ್ರತಿ ಎಕರೆಗೆ ₹ 400ರಂತೆ ಗರಿಷ್ಠ 4,000ದವರೆಗೂ ಶುಲ್ಕ ವಿಧಿಸಲು ಅವಕಾಶ ಕಲ್ಪಿಸಿದೆ. ನಗರ ಪ್ರದೇಶದಲ್ಲಿ ಎರಡು ಎಕರೆ ವರೆಗೂ ₹ 2,500 ಮತ್ತು ನಂತರದ ಪ್ರತಿ ಎಕರೆಗೆ ₹ 1,000ದಂತೆ ಗರಿಷ್ಠ ₹ 5,000ದವರೆಗೂ ಶುಲ್ಕ ವಿಧಿಸಲು ಅನುಮತಿ ನೀಡಲಾಗಿತ್ತು.
    Published by:ranjumbkgowda1 ranjumbkgowda1
    First published: