ಬೆಂಗಳೂರು: ವಿಧನಸಭಾ ಚುನಾವಣೆ (Assembly Election 2023) ಸಂದರ್ಭದಲ್ಲಿಯೇ ರಾಜ್ಯ ಸರ್ಕಾರದ (Karnataka Government) ವಿರುದ್ಧ ಸರ್ಕಾರಿ ನೌಕರರು (Government Employees) ಬಂಡಾಯ ಬಾವುಟ ಹಾರಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ನೌಕರರು ಇದೇ ಮಾರ್ಚ್ 1ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ (Protest) ಕರೆ ನೀಡಿದ್ದಾರೆ. ಮಾರ್ಚ್ 1 ರಿಂದ ಸರ್ಕಾರಿ ಸೇವೆಯಲ್ಲಿ (Government Service) ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಕಳೆದ ಕೆಲವು ತಿಂಗಳಿನಿಂದ ಏಳನೇ ವೇತನ ಆಯೋಗ ಜಾರಿ (Seventh Pay Commission) ಹಾಗೂ ಎನ್ಪಿಎಸ್ (NPS) ರದ್ದಿಗೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ. ಬುಧವಾರದಿಂದ ಕರ್ತವ್ಯಕ್ಕೆ ಹಾಜರಾಗದೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಸರ್ಕಾರಿ ನೌಕರರು ಮುಂದಾಗಿದ್ದಾರೆ.
ಪಂಜಾಬ್, ರಾಜಸ್ಥಾನ, ಛತ್ತಿಸ್ಗಢ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ NPS ರದ್ದುಗೊಳಿಸಿ OPS ಜಾರಿಗೆ ನೌಕರರು ಆಗ್ರಹಿಸುತ್ತಿದ್ದಾರೆ. ಮಾರ್ಚ್ 1 ರಿಂದ ವಿಧಾನಸೌಧ ,ವಿಕಾಸ ಸೌಧ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳು ಬಂದ್ ಮಾಡಲು ನೌಕರರು ನಿರ್ಧರಿಸಿದ್ದಾರೆ. ಸರ್ಕಾರಿ ನೌಕರರ ಸಂಘದ ಕರೆಗೆ ರಾಜ್ಯಾದ್ಯಂತ ಎಲ್ಲಾ ಇಲಾಖೆ ನೌಕರರು ಬೆಂಬಲ ಸೂಚಿಸಿದ್ದಾರೆ.
ಸರ್ಕಾರ ಕಣ್ಮುಚ್ಚಿ ಕುಳಿತಿದೆ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾತನಾಡಿ, ನಮ್ಮ ಬೇಡಿಕೆಗಳು ಈಡೇರದಿದ್ರೆ ರಾಜ್ಯಾದ್ಯಂತ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡುತ್ತೇವೆ. ನೌಕರರು ಸಹ ಕರ್ತವ್ಯಕ್ಕೆ ಹಾಜರಾಗಲ್ಲ. ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಕಣ್ಮುಚ್ಚಿ ಕುಳಿತಿದ್ದು, ಬೇಡಿಕೆ ಈಡೇರಿಸುವತ್ತ ಗಮನ ನೀಡುತ್ತಿಲ್ಲ ಎಂದು ಬೇಸರ ಹೊರ ಹಾಕಿದರು.
ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ
ಶಾಲಾ-ಕಾಲೇಜು, ಆಸ್ಪತ್ರೆಯೂ ಸೇರಿದಂತೆ ಇತರೆ ಸಂಸ್ಥೆಗಳಲ್ಲಿಯ ನೌಕರರು ಗೈರು ಆಗಲಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಏಳನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಲು ಸರ್ಕಾರ ಮಧ್ಯಂತರ ಆದೇಶಗಳನ್ನು ಜಾರಿಗೊಳಿಸಿದ್ರೆ ಮಾತ್ರ ಪ್ರತಿಭಟನೆ ಹಿಂಪಡೆದುಕೊಳ್ಳಲಾಗುತ್ತದೆ ಎಂದು ಸಿ.ಎಸ್.ಷಡಕ್ಷರಿ ಹೇಳಿದ್ದಾರೆ.
ಪ್ರತಿಭಟನೆ ಬೇಡ ಎಂದ ಸಿಎಂ ಬೊಮ್ಮಾಯಿ
ರಾಜ್ಯ ಸರ್ಕಾರಿ ನೌಕರರು ಪ್ರತಿಭಟನೆಗೆ ಮುಂದಾಗಬಾರದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ (CM Basavaraj Bommai) ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯ ಸರ್ಕಾರ ಶೀಘ್ರವೇ ಗುಡ್ ನ್ಯೂಸ್ ನೀಡಲಿದೆ. ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಲಾಗುತ್ತದೆ ಎಂದು ಸಿಎಂ ಭರವಸೆ ನೀಡಿದ್ದಾರೆ.
ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾವುದೇ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಬಾರದು. ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮುಷ್ಕರದ ನಿರ್ಧಾರವನ್ನ ಹಿಂತೆಗೆದುಕೊಳ್ಳಿ. ಏಳನೇ ವೇತನ ಆಯೋಗ ಶಿಫಾರಸ್ಸು ಜಾರಿಗೆ ಅಗತ್ಯವಿರುವ ಹಣವನ್ನು ಬಿಡುಗಡೆಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: PM Narendra Modi: ಇಂದು ಬೆಳಗಾವಿಯಲ್ಲಿ ದೇಶದ ರೈತರಿಗೆ ಗುಡ್ ನ್ಯೂಸ್ ಕೊಡಲಿದ್ದಾರೆ ಪ್ರಧಾನಿ ಮೋದಿ
ಬಿಜೆಪಿ ಶಾಸಕನ ಜತೆ ರೌಡಿಗಳು!
ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ (BJP MLA SR Vishwanath) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರೌಡಿಗಳು ಭಾಗಿಯಾಗಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ಹುಸ್ಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆತ್ತನಗೆರೆ ಮಂಜ ಹಾಗೂ ಹುಸ್ಕೂರು ಶಿವ ವಿಶ್ವನಾಥ್ ಬೆನ್ನಿಗೆ ನಿಂತಿದ್ರು.
ಬೆಮೆಲ್ ಕೃಷ್ಣಪ್ಪ ಕೊಲೆ ಪ್ರಕರಣದಲ್ಲಿ ಬೆತ್ತನಗೆರೆ ಮಂಜ ಆರೋಪಿಯಾಗಿದ್ದಾನೆ. ಹುಸ್ಕೂರ್ ಶಿವ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದಾನೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ