ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ, ಹಿಂದೂಗಳ (Hindu) ಪವಿತ್ರ ಯಾತ್ರಾ ಸ್ಥಳ ಅಮರನಾಥದಲ್ಲಿ (Amarnath) ಭಾರೀ ಮೇಘಸ್ಫೋಟ (Cloudburst) ಸಂಭವಿಸಿದೆ. ನಿನ್ನೆ ಸಂಜೆ 5.30ರ ವೇಳೆಗೆ ಮೇಘ ಸ್ಫೋಟ ಸಂಭವಿಸಿದೆ. ಪರಿಣಾಮ 15ಕ್ಕೂ ಹೆಚ್ಚು ಯಾತ್ರಾರ್ಥಿಗಳು (Tourist) ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾಗಿ ವರದಿಯಾಗಿದೆ. ಈ ಪೈಕಿ ನೂರಕ್ಕೂ ಹೆಚ್ಚು ಮಂದಿ ಕನ್ನಡಿಗರು (Kannadigas) ಅಮರನಾಥ ಯಾತ್ರೆಗೆ ತೆರಳಿದ್ದರು. ಇದೀಗ ಅವರನ್ನು ಸುರಕ್ಷಿತವಾಗಿ (Safe) ರಾಜ್ಯಕ್ಕೆ ಕರೆತರಲು ಕರ್ನಾಟಕ ರಾಜ್ಯ ಸರ್ಕಾರ (Karnataka State Government) ಸನ್ನದ್ಧವಾಗಿದೆ. ಅಮರನಾಥ ಮೇಘಸ್ಫೋಟದಲ್ಲಿ ಸಿಲುಕಿ ಪರದಾಡುತ್ತಿರುವ ಕನ್ನಡಿಗರ ರಕ್ಷಣೆಗಾಗಿ ಹೆಲ್ಪ್ ಲೈನ್ (Help Line) ಸ್ಥಾಪಿಸಲಾಗಿದೆ.
ಅಮರನಾಥದಲ್ಲಿ 100ಕ್ಕೂ ಹೆಚ್ಚು ಕನ್ನಡಿಗರು
ಅಮರನಾಥ ಯಾತ್ರೆಗೆ ತೆರಳಿದ್ದ 100ಕ್ಕೂ ಹೆಚ್ಚು ಕನ್ನಡಿಗರು ಮೇಘಸ್ಫೋಟದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೇ ಖುದ್ದು ಮಾಹಿತಿ ನೀಡಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ರಾಜ್ಯದ ನೂರಕ್ಕೂ ಹೆಚ್ಚು ಜನ ಯಾತ್ರೆಯಲ್ಲಿ ಇದ್ದಾರೆ. ಬಹುತೇಕ ಎಲ್ಲರೂ ಸುರಕ್ಷಿತವಾಗಿ ಇದ್ದಾರೆ. ಬೇರೆ ಯಾವುದೇ ಅಹಿತಕರ ಘಟನೆಗಳ ಸುದ್ದಿ ಇಲ್ಲ ಅಂತ ಹೇಳಿದ್ದಾರೆ.
ಅಮರನಾಥ ಯಾತ್ರೆಯಲ್ಲಿ ಸಿಲುಕಿದವರಿಗಾಗಿ ಸರ್ಕಾರದ ಸಹಾಯವಾಣಿ. pic.twitter.com/oIYvfzhq1n
— R. Ashoka (ಆರ್. ಅಶೋಕ) (@RAshokaBJP) July 8, 2022
ನಾವು ಅಲ್ಲಿನ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜತೆ ಸಂಪರ್ಕದಲ್ಲಿ ಇದ್ದೇವೆ ಅಂತ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಕನ್ನಡಿಗರ ಸಹಾಯಕ್ಕಾಗಿ ನಾವು ತುರ್ತು ಹೆಲ್ಪ್ಲೈನ್ ತೆರೆದಿದ್ದೇವೆ. ಹೆಲ್ಪ್ಲೈನ್ ಗೆ ಹದಿನೈದು, ಇಪ್ಪತ್ತು ಜನ ಈಗಾಗಲೇ ಕರೆ ಮಾಡಿದ್ದಾರೆ. ಅವರನ್ನೆಲ್ಲ ರಕ್ಷಣಾ ಕಾರ್ಯಾಚರಣೆ ಮಾಡ್ತಿದ್ದೇವೆ. ಕೇಂದ್ರ ಸರ್ಕಾರದ ಬಿಎಸ್ಎಫ್ ನವ್ರೂ ಸ್ಥಳದಲ್ಲಿ ಇದ್ದಾರೆ. ನಮ್ಮ ಮುಖ್ಯ ಕಾರ್ಯದರ್ಶಿ ಕೇಂದ್ರ ಸರ್ಕಾರದ ಸಂಪರ್ಕದಲ್ಲಿ ಇದ್ದಾರೆ ಅಂತ ಹೇಳಿದ್ದಾರೆ. ಏನೇ ಮಾಹಿತಿ, ಸುದ್ದಿ ಇದ್ರೂ ನಮ್ಮ ಹೆಲ್ಪ್ಲೈನ್ ಗೆ ಕರೆ ಮಾಡಲಿ, ಕೂಡಲೇ ರಕ್ಷಣಾ ಕಾರ್ಯ ಮಾಡ್ತೇವೆ ಅಂತ ಸಿಎಂ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Cloudburst: ಅಮರನಾಥ ಗುಹೆ ಬಳಿ ಮರಣಮೃದಂಗ! ಭಾರೀ ಮೇಘಸ್ಫೋಟಕ್ಕೆ 15 ಮಂದಿ ಸಾವು
ಸಹಾಯವಾಣಿ ಸಂಖ್ಯೆ: 080-1070, 22340676
ಕರ್ನಾಟಕ ಸರ್ಕಾರ ಅಮರನಾಥ ಯಾತ್ರೆಗೆ ತೆರಳಿರುವ ಕನ್ನಡಿಗರ ರಕ್ಷಣೆಗಾಗಿ ಹೆಲ್ಪ್ ಲೈನ್ ಸ್ಥಾಪಸಲಾಗಿದೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಕಂದಾಯ ಸಚಿವ ಆರ್ ಅಶೋಕ್, ಕರ್ನಾಟಕದ ಯಾವುದೇ ವ್ಯಕ್ತಿಗಳು ಸಿಲುಕಿದರೆ ರಾಜ್ಯ ತುರ್ತು ನಿಯಂತ್ರಣ ಕೊಠಡಿಯ ಈ ಕೆಳಗಿನ ಸಂಖ್ಯೆಗಳಲ್ಲಿ ಸಂಪರ್ಕಿಸಬೇಕಾಗಿ ವಿನಂತಿ ಮಾಡಿದ್ದಾರೆ. ಅಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಅವರ ಸಂಬಂಧಿಗಳು ಸಹಾಯವಾಣಿ ಸಂಖ್ಯೆ: 080-1070, 22340676ಕ್ಕೆ ಕರೆಮಾಡಿ ಮಾಹಿತಿ ನೀಡಬಹುದು. ಜೊತೆಗೆ incomedmkar@gmail.com ಎಂಬ ವಿಳಾಸಕ್ಕೆ ಇಮೇಲ್ ಕೂಡ ಮಾಡಬಹುದು.
15ಕ್ಕೂ ಹೆಚ್ಚು ಮಂದಿ ಸಾವು, 40 ಮಂದಿ ನಾಪತ್ತೆ
ದಕ್ಷಿಣ ಕಾಶ್ಮೀರದ ಹಿಮಾಲಯದ ತಪ್ಪಲಿನ ಪ್ರಸಿದ್ಧ ಯಾತ್ರಾಸ್ಥಳ ಅಮರನಾಥದಲ್ಲಿ ಮೇಘ ಸ್ಫೋಟವಾಗಿದ್ದು, ಕನಿಷ್ಠ 22 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಈ ಘಟನೆಯಲ್ಲಿ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸುಮಾರು 15 ಸಾವಿರ ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ (ಎನ್ಡಿಆರ್ಎಫ್) ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Flood: ಬದುಕನ್ನೇ ಮುಳುಗಿಸುವ ಪ್ರವಾಹದಿಂದ ಪಾರಾಗಿ ಬದುಕುವುದು ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ
ಮೇಘಸ್ಫೋಟದ ಬಳಿಕ ಭಾರೀ ಮಳೆ
ಮೇಘಸ್ಫೋಟದ ಬಳಿಕ ಭಾರಿ ಮಳೆ ಸುರಿದಿದೆ. ಮಳೆಯಿಂದಾಗಿ ಪ್ರವಾಹದಂತಹ ಸ್ಥಿತಿ ನಿರ್ಮಾಣವಾಗಿದೆ. ವೇಗವಾಗಿ ನುಗ್ಗಿದ ನೀರಿನಿಂದಾಗಿ ಡೇರೆಗಳು ಕೊಚ್ಚಿ ಹೋಗಿವೆ. ಸುಮಾರು 35ಕ್ಕೂ ಹೆಚ್ಚು ಡೇರೆಗಳು ನಾಶವಾಗಿವೆ. ಸುಮಾರು 17 ಸಾವಿರಕ್ಕೂ ಹೆಚ್ಚು ಯಾತ್ರಿಕರು ಆಗಮಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ