ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ ಸರ್ಕಾರ!; ಮೆಡಿಕಲ್ ಕೋರ್ಸ್​ಗಳ ಶುಲ್ಕ ಭಾರೀ ಹೆಚ್ಚಳ

ಖಾಸಗಿ ವೈದ್ಯಕೀಯ ಕಾಲೇಜು, ಖಾಸಗಿ‌ ವಿವಿ ಮತ್ತು ಡೀಮ್ಡ್ ವಿವಿಗಳಲ್ಲಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಖಾಸಗಿ ಕೋಟಾದಲ್ಲಿ ಶೇ. 30ರಷ್ಟು ಶುಲ್ಕ ಹೆಚ್ಚಳವಾಗಿದೆ. ಸರ್ಕಾರಿ ಕೋಟಾದಲ್ಲಿ ಶೇ.20ರಷ್ಟು ಶುಲ್ಕ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಮೇ 1): ಕೊರೋನಾ ರೋಗಿಗಳ ಆರೈಕೆ, ಚಿಕಿತ್ಸೆಗೆ ವೈದ್ಯರ ಜೊತೆ ಶ್ರಮಿಸುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ವೈದ್ಯಕೀಯ ಸೀಟುಗಳ ಶುಲ್ಕವನ್ನು ಮತ್ತಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕೊರೋನಾ ವೈರಸ್​ ಅಟ್ಟಹಾಸ ಹೆಚ್ಚಾಗಿದ್ದರಿಂದ ರಾಜ್ಯವನ್ನು ಲಾಕ್​ಡೌನ್​ ಮಾಡಲಾಗಿದೆ. ಹೀಗಾಗಿ, ಇಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಯಾವ ಕಾಲೇಜುಗಳು, ಶಾಲೆಗಳಲ್ಲೂ ತರಗತಿಗಳು ನಡೆಯುತ್ತಿಲ್ಲ. ಎಲ್ಲ ವಿದ್ಯಾರ್ಥಿಗಳಿಗೂ ರಜೆ ಘೋಷಿಸಲಾಗಿದೆ. ಆದರೆ, ಎಂಬಿಬಿಎಸ್​ ಮುಗಿಸಿರುವ ವೈದ್ಯಕೀಯ ವಿದ್ಯಾರ್ಥಿಗಳು ಕೊರೋನಾ ಪೀಡಿತರ ಆರೈಕೆಗೆ ನಿಂತಿದ್ದಾರೆ. ಎಂಡಿ, ಎಂಎಸ್​ನಂತರ ಉನ್ನತ ವ್ಯಾಸಂಗದ ಕನಸು ಕಂಡಿದ್ದ ಅವರಿಗೆ ರಾಜ್ಯ ಸರ್ಕಾರ ಶುಲ್ಕ ಹೆಚ್ಚಳ ಮಾಡಿದೆ.

ಇದನ್ನೂ ಓದಿ: ಲಾಕ್​ಡೌನ್​ನಿಂದ ಕಂಗೆಟ್ಟವರನ್ನು ಐಎಎಸ್, ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ಊರಿಗೆ ಕಳುಹಿಸಲು ಸರ್ಕಾರ ನಿರ್ಧಾರ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್​ಗಳ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಖಾಸಗಿ ವೈದ್ಯಕೀಯ ಕಾಲೇಜು, ಖಾಸಗಿ‌ ವಿವಿ ಮತ್ತು ಡೀಮ್ಡ್ ವಿವಿಗಳಲ್ಲಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಖಾಸಗಿ ಕೋಟಾದಲ್ಲಿ ಶೇ. 30ರಷ್ಟು ಶುಲ್ಕ ಹೆಚ್ಚಳವಾಗಿದೆ. ಸರ್ಕಾರಿ ಕೋಟಾದಲ್ಲಿ ಶೇ.20ರಷ್ಟು ಶುಲ್ಕ ಏರಿಕೆಯಾಗಿದೆ.

ಕೊರೋನಾ ಹಿನ್ನೆಲೆ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಿಸದಂತೆ ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಈಗ ಇದ್ದಕ್ಕಿದ್ದ ಹಾಗೆ ಎಂಡಿ, ಎಂಎಸ್ ಕೋರ್ಸ್​ಗಳ ಶುಲ್ಕ ಹೆಚ್ಚಳ ಮಾಡಲಾಗಿದೆ. 2020-21ನೇ ಸಾಲಿಗೆ ಅನ್ವಯವಾಗುವಂತೆ ಹೊಸ ಶುಲ್ಕ ಅನ್ವಯವಾಗಲಿದೆ. ಶುಲ್ಕ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
First published: