news18-kannada Updated:August 21, 2020, 7:37 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು (ಆಗಸ್ಟ್ 21): ಕೊರೋನಾ ಎಫೆಕ್ಟ್ ನಿಂದ ರಾಜ್ಯದ ಆರ್ಥಿಕತೆಗೆ ತುಂಬಾ ಹೊಡೆತ ಬಿದ್ದಿದೆ. ರಾಜ್ಯದ ಆದಾಯದಲ್ಲಿ ಹೆಚ್ಚಿನ ಪಾಲು ಅಬಕಾರಿ ಇಲಾಖೆಯಿಂದ ಬರುತ್ತಿತ್ತು. ಬಾರ್ಗಳಲ್ಲಿ ಮದ್ಯ ಮಾರಾಟ ನಿಲ್ಲಿಸಿರುವುದರಿಂದ ತುಂಬಾ ತೊಂದರೆಯಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಸೆಪ್ಟೆಂಬರ್ 1 ರಿಂದ ಬಾರ್ ಮತ್ತು ಕ್ಲಬ್ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಲು ರಾಜ್ಯ ಸರ್ಕಾರದಿಂದ ತಯಾರಿ ನಡೆದಿದೆ.
ಈ ಬಗ್ಗೆ ಸೋಮವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಮದ್ಯಮಾರಾಟ ಮಾಡಲು ಅವಕಾಶಕ್ಕಾಗಿ ಕಡತವನ್ನು ನೀಡಲು ಅಬಕಾರಿ ಇಲಾಖೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಗಳ ಅಂಕಿತ ಬಿದ್ದ ಬಳಿಕ ಸೆಪ್ಟೆಂಬರ್ 1 ರಿಂದ ಮದ್ಯ ಮಾರಾಟಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ. ಬಾರ್ ಮತ್ತು ಕ್ಲಬ್ ಗಳಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿ ಇಂದು ನಡೆದ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ನಿರ್ಧಾರಕ್ಕೆ ಬರಲಾಗಿದೆ.
ಕೋವಿಡ್ ಮಾರ್ಗಸೂಚಿ ಪಾಲಿಸಿ ಮದ್ಯದಂಗಡಿಗಳಲ್ಲಿ ಮಾತ್ರ ಸದ್ಯಕ್ಕೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಆದರೆ, ಕಳೆದ 5 ತಿಂಗಳಿನಿಂದ ಬಾರ್ ಮತ್ತು ಕ್ಲಬ್ ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನಿರಾಕರಿಸಲಾಗಿದೆ..
ಇದನ್ನೂ ಓದಿ :
Ganesha Festival 2020 : ವಿಜಯಪುರದಲ್ಲಿ ಸದ್ದಿಲ್ಲದೆ ನಡೆದಿದೆ ಪರಿಸರಕ್ಕೆ ಪೂರಕವಾದ ಗಣೇಶೋತ್ಸವ ಆಚರಣೆ
ರಾಷ್ಟ್ರಮಟ್ಟದಲ್ಲಿ ಅನ್ಲಾಕ್ 5.0ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಮಾರ್ಗಸೂಚಿಯನ್ನು ಹೊರಡಿಸಲಿದೆ. ಕೇಂದ್ರದ ಮಾರ್ಗಸೂಚಿಗಳಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ
ರಾಜ್ಯದ ಬಹುತೇಕ ಬಾರ್ ಆಂಡ್ ರೆಸ್ಟೋರೆಂಟ್ ಮಾಲೀಕರು ಆದಾಯವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಾರ್ಗಳಿಗೆ ಮದ್ಯ ಖರೀದಿಸಲು ಜನರು ಹೋಗುತ್ತಿಲ್ಲ. ರೆಸ್ಟೋರೆಂಟ್ಗಳಲ್ಲೂ ಎಂಆರ್ಪಿ ದರದಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರವು ಅನುಮತಿ ನೀಡಬೇಕು. ಕೆಲವು ರೆಸ್ಟೋರೆಂಟ್ಗಳ ತಿಂಗಳ ನಿರ್ವಹಣೆ ವೆಚ್ಚವೇ 2 ಲಕ್ಷವಾಗುತ್ತಿದೆ. ಇನ್ನು ಕೆಲವು ರೆಸ್ಟೋರೆಂಟ್ ಗಳ ನಿರ್ವಹಣೆಗೆ 2 ಲಕ್ಷಕ್ಕಿಂತ ಹೆಚ್ಚು ಹಣವನ್ನೇ ಖರ್ಚು ಮಾಡಲಾಗುತ್ತಿದೆ.
Published by:
G Hareeshkumar
First published:
August 21, 2020, 7:24 PM IST