• Home
  • »
  • News
  • »
  • state
  • »
  • ಚಾಮುಲ್ ಅಕ್ರಮ ನೇಮಕಾತಿ; ಶಾಸನಬದ್ಧ ವಿಚಾರಣೆಗೆ ಸರ್ಕಾರ ಆದೇಶ

ಚಾಮುಲ್ ಅಕ್ರಮ ನೇಮಕಾತಿ; ಶಾಸನಬದ್ಧ ವಿಚಾರಣೆಗೆ ಸರ್ಕಾರ ಆದೇಶ

ಚಾಮುಲ್

ಚಾಮುಲ್

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ  ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಖಾಲಿ ಇದ್ದ 72 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಆದರೆ ಈ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ  ಸ್ವಜನಪಕ್ಷಪಾತ ನಡೆದಿರುವ ಬಗ್ಗೆ , ಒಕ್ಕೂಟದ ಅಂದಿನ ಅಧ್ಯಕ್ಷರು ಹಾಗೂ ನಿರ್ದೇಶಕರ ಸಂಬಂಧಿಗಳಿಗೆ ಹುದ್ದೆಗಳನ್ನು ನೀಡಿರುವ ಬಗ್ಗೆ , ಪ್ರಭಾವಿ ರಾಜಕಾರಣಿಗಳ ಮಕ್ಕಳನ್ನು ಅಕ್ರಮವಾಗಿ ನೇಮಕಾತಿ ಮಾಡಿಕೊಂಡು, ಅರ್ಹ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮುಂದೆ ಓದಿ ...
  • Share this:

ಚಾಮರಾಜನಗರ( ಫೆ.12): ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟ (ಚಾಮುಲ್)ದಲ್ಲಿ ನಡೆದಿರುವ ಅಕ್ರಮ ನೇಮಕಾತಿ ಸಂಬಂಧ  ಸರ್ಕಾರ ಕಡೆಗೂ ಎಚ್ಚೆತ್ತುಕೊಂಡಿದೆ.  ಅಕ್ರಮ ನೇಮಕಾತಿ ಕುರಿತು ಶಾಸನಬದ್ಧ ವಿಚಾರಣೆ ನಡೆಸಿ ವರದಿ ನೀಡಲು ಸಹಕಾರ ಸಂಘಗಳ ಜಂಟಿ ನಿಬಂಧಕರನ್ನು ನೇಮಿಸಿ  ಸಹಕಾರ ಸಂಘಗಳ ನಿಬಂಧಕರು ಆದೇಶ ಹೊರಡಿಸಿದ್ದಾರೆ.


ಇತ್ತೀಚೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸಿದ್ದ   ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟ ಮಾಡಿದ್ದ ಚಾಮರಾಜನಗರ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ,  ಚಾಮುಲ್ ಅಕ್ರಮ ನೇಮಕಾತಿ ಕುರಿತು ದೂರು ಸಲ್ಲಿಸಿತ್ತು. ಅಲ್ಲದೆ  ಹಿಂದಿನ ಜಿಲ್ಲಾಧಿಕಾರಿಗಳು ನೇಮಿಸಿದ್ದ ಜಂಟೀ ತನಿಖಾ ಸಮಿತಿ ನೀಡಿರುವ ವರದಿ ಬಗ್ಗೆ ಸರ್ಕಾರ ಒಂದು ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಳ್ಳದೆ ಇರುವ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದಿತ್ತು.


ಈ ಹಿನ್ನಲೆಯಲ್ಲಿ ಈ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಸಹಕಾರ ಇಲಾಖೆಗೆ ಸೂಚನೆ ನೀಡಿದ್ದರು. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ  ಕ್ರಮ ಕೈಗೊಂಡಿರುವ ಸಹಕಾರ ಸಂಘಗಳ ನಿಬಂಧಕರು, ಸಹಕಾರ ಸಂಘಗಳ ಕಾಯ್ದೆ 1959 ಕಲಂ 64 ರ ಅವಕಾಶಗಳ ಅನ್ವಯ ಶಾಸನ ಬದ್ಧ ವಿಚಾರಣೆ   ಕೈಗೊಂಡು ವರದಿ ನೀಡಲು ಸಹಕಾರ ಸಂಘಗಳ ಜಂಟಿ  ನಿಬಂಧಕ (ಕಾನೂರು ಕೋಶ)  ಎಂ.ಡಿ.ನರಸಿಂಹಮೂರ್ತಿ ಅವರನ್ನು ನೇಮಿಸಿ  ಆದೇಶ ಹೊರಡಿಸಿದ್ದಾರೆ. ಈ ಹಾಲು ಒಕ್ಕೂಟದ ನೇಮಕಾತಿ  ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಶಾಸನಾತ್ಮಕ ವಿಚಾರಣೆ ನಡೆಸಿ ಅನುಸರಣಾ ಕ್ರಮ ಕೈಗೊಂಡು ವರದಿ ಸಲ್ಲಿಸಲು ಎಂ.ಡಿ.ನರಸಿಂಹಮೂರ್ತಿ ಅವರಿಗೆ ಸೂಚನೆ ನೀಡಲಾಗಿದೆ.


ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿರುವ  ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಖಾಲಿ ಇದ್ದ 72 ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಆದರೆ ಈ ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ  ಸ್ವಜನಪಕ್ಷಪಾತ ನಡೆದಿರುವ ಬಗ್ಗೆ , ಒಕ್ಕೂಟದ ಅಂದಿನ ಅಧ್ಯಕ್ಷರು ಹಾಗೂ ನಿರ್ದೇಶಕರ ಸಂಬಂಧಿಗಳಿಗೆ ಹುದ್ದೆಗಳನ್ನು ನೀಡಿರುವ ಬಗ್ಗೆ , ಪ್ರಭಾವಿ ರಾಜಕಾರಣಿಗಳ ಮಕ್ಕಳನ್ನು ಅಕ್ರಮವಾಗಿ ನೇಮಕಾತಿ ಮಾಡಿಕೊಂಡು, ಅರ್ಹ ಪ್ರತಿಭಾನ್ವಿತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಬಗ್ಗೆ ನ್ಯೂಸ್ 18 ಎಳೆಎಳೆಯಾಗಿ ವರದಿ ಮಾಡಿತ್ತು. ಜೊತೆಗೆ ವಿವಿಧ ಸಂಘಸಂಸ್ಥೆಗಳು ಭಾರೀ ಹೋರಾಟ ನಡೆಸಿದ್ದವು.


ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಸುರೇಶ್ ಕುಮಾರ್


ಈ ಹಿನ್ನಲೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ತನಿಖೆ ನಡೆಸಲು ಜಿಲ್ಲಾ ಮಟ್ಟದ ನಾಲ್ವರು ಅಧಿಕಾರಿಗಳ ಜಂಟೀ ಸಮಿತಿ ರಚಿಸಿದ್ದರು. ಈ ಸಮಿತಿ ಸುಮಾರು ಎರಡು ತಿಂಗಳ ಕಾಲ  ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಈ ವರದಿಯನ್ನು ಚಾಮರಾಜನಗರ ಜಿಲ್ಲಾಧಿಕಾರಿ  ಸರ್ಕಾರಕ್ಕೆ ಸಲ್ಲಿಸಿದ್ದರು. ಆದರೆ ಸರ್ಕಾರ ಇದುವರೆಗೆ ಯಾವುದೇ ರೀತಿಯ ಕ್ರಮ ವಹಿಸಿರಲಿಲ್ಲ.


ಇನ್ನೊಂದೆಡೆ ರೋಸ್ಟರ್ ಪದ್ದತಿ ಪ್ರಕಾರ ನೇಮಕಾತಿ ನಡೆಸದೇ ಇರುವ ಬಗ್ಗೆ ಎಸ್ಸಿಎಸ್ಟಿ ಆಯೋಗಕ್ಕು ದೂರು ಸಲ್ಲಿಸಲಾಗಿದ್ದು ಆಯೋಗವು ಸೂಕ್ತ ದಾಖಲಾತಿ ಸಲ್ಲಿಸುವಂತೆ ಸೂಚಿಸಿದೆ ಎಂದು ಚಾಮರಾಜನಗರ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ ಗೌರವಾಧ್ಯಕ್ಷ  ವೆಂಕಟರಮಣಸ್ವಾಮಿ ಪಾಪು ತಿಳಿಸಿದ್ದಾರೆ. ಇದಲ್ಲದೆ ವಿಚಾರಣೆಗೆ ನೇಮಕಗೊಂಡಿರುವ ಸಹಕಾರ ಸಂಘಗಳ ಉಪನಿಬಂಧಕರು, ತ್ವರಿತವಾಗಿ ವಿಚಾರಣೆ ನಡೆಸಿ ಶಿಸ್ತು ಕ್ರಮ ಜರುಗಿಸಬೇಕು ಅಕ್ರಮ ನೇಮಕಾತಿ ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಅವ್ಯವಹಾರ, ಅಕ್ರಮ  ನಡೆಸಿರುವ ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಸಮಿತಿಯನ್ನು ಸೂಪರ ಸೀಡ್ ಮಾಡಬೇಕು. ಹೊಸದಾಗಿ ಸಮಿತಿ ರಚಿಸಿ ಪಾರದರ್ಶಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸಬೇಕು ಎಂದು  ಚಾಮರಾಜನಗರ ಜಿಲ್ಲಾಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಕೆ.ವೀರಭದ್ರಸ್ವಾಮಿ ಒತ್ತಾಯಿಸಿದ್ದಾರೆ.

Published by:Latha CG
First published: