School Fees: 2020-21ನೇ ಸಾಲಿನ ಖಾಸಗಿ ಶಾಲೆಗಳಿಗೆ ಹೆಚ್ಚುವರಿ ಶುಲ್ಕ ವಾಪಸ್ ನೀಡಲು ಸರ್ಕಾರದ ಆದೇಶ

ಈ ಹಿಂದೆ ಶೇ.30 ರಷ್ಟು ಶುಲ್ಕ ಕಡಿತ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ  ಪ್ರಶ್ನಿಸಿ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು. 

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು: 2020-21ನೇ ಶೈಕ್ಷಣಿಕ ವರ್ಷದಲ್ಲಿ ಪಡೆದಿರುವ ಹೆಚ್ಚುವರಿ ಶುಲ್ಕವನ್ನು ವಾಪಸ್ ನೀಡಬೇಕೆಂದು ಖಾಸಗಿ ಶಾಲೆಗಳಿಗೆ (Private Schools) ಆದೇಶ ನೀಡಲಾಗಿದೆ.  2020-21 ನೇ ಸಾಲಿನ ಪೂರ್ಣ ಶುಲ್ಕ ಪಡೆದಿದ್ದರೆ ವಾಪಸ್ ಮಾಡುವಂತೆ ಶಾಲೆಗಳಿಗೆ ಆದೇಶ ಪ್ರಕಟವಾಗಿದೆ. 2020-21 ನೇ ಸಾಲಿನ ಶೇ‌15. ರಷ್ಟು ಶುಲ್ಕ ಕಡಿತ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಈ ಹಿಂದೆ ಶೇ.30 ರಷ್ಟು ಶುಲ್ಕ ಕಡಿತ ಮಾಡಿ ಸರ್ಕಾರ (Karnataka Government) ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ  ಪ್ರಶ್ನಿಸಿ ಕೆಲ ಖಾಸಗಿ ಶಾಲೆಗಳ ಒಕ್ಕೂಟ ಕೋರ್ಟ್ ಮೊರೆ ಹೋಗಿತ್ತು.  ಕೊರೊನಾ ಮತ್ತು ಲಾಕ್ ಡೌನ್ ಹಿನ್ನೆಲೆ ಶುಲ್ಕ ಕಡಿತಗೊಳಿಸಬೇಕೆಂದು ಪೋಷಕರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಭೋಧನಾ ಶುಲ್ಕದಲ್ಲಿ ಶೇ.70ರಷ್ಟು ಮಾತ್ರ ಪಡೆಯಿರಿ

ರಾಜ್ಯದಲ್ಲಿರುವ ಯಾವುದೇ ಮಾದರಿಯ ಪಠ್ಯಕ್ರಮವನ್ನು ಬೋಧಿಸುವ ಖಾಸಗಿ ಶಾಲೆಗಳು ಕಳೆದ ಸಾಲಿನ ಅಂದರೆ 2019-20ನೇ ಸಾಲಿನ ಬೋಧನಾ ಶುಲ್ಕದ ಶೇ. 70 ಭಾಗವನ್ನು ಮಾತ್ರ ಪೋಷಕರಿಂದ ಈ ಸಾಲಿನ ಒಟ್ಟು ಶುಲ್ಕವಾಗಿ ಪಡೆಯಬೇಕು. ಈ ಬಾರಿ ಅವಧಿ ಶುಲ್ಕವನ್ನು ಹೊರತುಪಡಿಸಿ ಯಾವುದೇ ಅಭಿವೃದ್ಧಿ ಶುಲ್ಕಗಳನ್ನು ಶಾಲೆಗಳು ಪಡೆಯುವಂತಿಲ್ಲ. ವಿವಿಧ ಟ್ರಸ್ಟ್‍ಗಳಿಗೆ ಯಾವುದೇ ವಂತಿಕೆಯನ್ನು ಪಡೆಯುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿತ್ತು.

ಕೊರೊನಾ ಸಂಕಷ್ಟದಲ್ಲಿ ಸಿಲುಕಿದ್ದ ಪೋಷಕರು ಮತ್ತು ಖಾಸಗಿ ಶಾಲೆಗಳು

2020-21ನೇ ಶೈಕ್ಷಣಿಕ ವರ್ಷ ಆರಂಭದ ವೇಳೆಯೇ ಕೊರೊನಾ ವ್ಯಾಪಿಸಿತ್ತು. ಹೀಗಾಗಿ ಬಹುತೇಕ ಖಾಸಗಿ ಶಾಲೆಗಳು ಆನ್ ಲೈನ್ ತರಗತಿಗಳನ್ನು ಆರಂಭಿಸಿದ್ದವು. ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಹಾಗಾಗಿ ಶಾಲಾ ಶುಲ್ಕ ಕಡಿತಗೊಳಿಸಬೇಕೆಂದು ಪೋಷಕರು ಆಗ್ರಹಿಸಿದ್ದರು. ಇತ್ತ ಖಾಸಗಿ ಶಾಲೆಗಳು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಶುಲ್ಕದ ವಿಷಯ ಹಗ್ಗ-ಜಗ್ಗಾಟವಾಗಿ ಬದಲಾಗಿತ್ತು.

ಇದನ್ನೂ ಓದಿ:  Primary School Repoen; 20 ತಿಂಗಳ ಬಳಿಕ ಪ್ರಾಥಮಿಕ ಶಾಲೆ ಆರಂಭ; ಮಧ್ಯಾಹ್ನದವರೆಗೆ ಮಾತ್ರ ಕ್ಲಾಸ್

2020-21ನೇ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಮೇಲೆ ತಿಳಿಸಿರುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆದಿದ್ದಲ್ಲಿ 2021-22ನೇ ಸಾಲಿನಲ್ಲಿ ಪಾವತಿಸಬೇಕಾದ ಶುಲ್ಕಕ್ಕೆ ಹೊಂದಾಣಿಕೆಯನ್ನು ಮಾಡಿಕೊಳ್ಳಬಹುದು. ಯಾವುದೇ ಶಿಕ್ಷಣ ಸಂಸ್ಥೆ ಮೇಲೆ ತಿಳಿಸಿರುವ ಶುಲ್ಕಕ್ಕಿಂತ ಕಡಿಮೆ ಶುಲ್ಕವನ್ನು ವಿಧಿಸಲು ಇಚ್ಛಿಸಿದಲ್ಲಿ, ಅದಕ್ಕೆ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿತ್ತು.

ಕಂತುಗಳಲ್ಲಿ ಪಾವತಿಸುವ ಅವಕಾಶ

ಶುಲ್ಕವನ್ನು ಕಂತುಗಳಲ್ಲಿ ಪಾವತಿಸಲು ಸಹ ಪೋಷಕರಿಗೆ ಅವಕಾಶವನ್ನು ಕಲ್ಪಿಸಬೇಕು. ಶುಲ್ಕ ರಿಯಾಯಿತಿ ಕುರಿತಂತೆ ಪೋಷಕರು/ಶಾಲೆಗಳು ಯಾವುದೇ ತಕರಾರು ಹೊಂದಿದ್ದಲ್ಲಿ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಯುಕ್ತ ಸಮಿತಿ ರಚಿಸಿ ಅದರ ಮೂಲಕ ಇಂತಹ ದೂರು ಪ್ರಕರಣಗಳನ್ನು ನಿರ್ವಹಿಸಲು ಅವಕಾಶ ಕಲ್ಪಿಸಲಾಗಿತ್ತು.

ಇದನ್ನೂ ಓದಿ:  Primary School Reopen: ಶಾಲೆ ಪ್ರಾರಂಭವಾಗುತ್ತಿದ್ದಂತೆ ಸರ್ಕಾರಕ್ಕೆ ಶುರುವಾಯ್ತು ತಲೆನೋವು

ಸದ್ಯ ರಾಜ್ಯದಲ್ಲಿ ಕೊರೊನಾ ಪಸರಿಸುವಿಕೆ ಪ್ರಮಾಣ ಇಳಿಕೆಯಾದ ಹಿನ್ನೆಲೆ ಎಲ್ಲ ಶಾಲೆಗಳು ಪುನಾರಂಭಗೊಂಡಿವೆ. ನವೆಂಬರ್ 8ರಿಂದ ಅಂಗನವಾಡಿಗಳು, LKG ಮತ್ತು UKG  ಭೌತಿಕ ತರಗತಿಗಳು ಆರಂಭಗೊಂಡಿವೆ. ಕೊರೊನಾ ಹಿನ್ನೆಲೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಪುಟಾಣಿಗಳು ಶಾಲೆಗೆ ಬಂದಿರಲಿಲ್ಲ. ಸದ್ಯ ಕೊರೊನಾ (COVID Pandemic) ತೀವ್ರತೆ ಕಡಿಮೆಯಾದ ಹಿನ್ನೆಲೆ ಸರ್ಕಾರ LKG, UKG ಆರಂಭಕ್ಕೆ ಅನುಮತಿ ನೀಡಿದೆ.

ಶಾಲೆ ಆರಂಭಕ್ಕೆ ಮಾರ್ಗಸೂಚಿ ಪ್ರಕಟ

ಮೊದಲ ಬಾರಿಗೆ ಮಕ್ಕಳು ಶಾಲೆಗೆ ಹೋಗುತ್ತಿರುವ ಕಾರಣ ಪೋಷಕರಲ್ಲಿ (Parents) ಸಂಭ್ರಮ ಮನೆ ಮಾಡಿತ್ತು,. ಜೂನ್ ತಿಂಗಳು ಈ ವಿಶೇಷ ಕ್ಷಣಕ್ಕೆ ಸಾಕ್ಷಿಯಾಗಬೇಕಿತ್ತು. ಆದ್ರೆ ಮಹಾಮಾರಿಯಿಂದ ಈ ಅದ್ಭುತ ಕ್ಷಣ ಮುಂದೂಡಿಕೆಯಾಗುತ್ತಾ ಬಂದಿತ್ತು,. ಸದ್ಯ ಸರ್ಕಾರ ಶಾಲೆ ಆರಂಭಕ್ಕೆ ಮಾರ್ಗಸೂಚಿ ಸಹ ಪ್ರಕಟಿಸಿದೆ.

ಅಕ್ಟೋಬರ್ 25ರಂದು  1 ರಿಂದ 5ನೇ ತರಗತಿವರೆಗಿನ ಶಾಲೆಗಳು ಆರಂಭಗೊಂಡಿವೆ. ಈ ವರ್ಷ ಸರ್ಕಾರ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸಿದೆ.
Published by:Mahmadrafik K
First published: