ಬೆಂಗಳೂರು (ಆ. 08) : ಟೋಕಿಯೋ ಒಲಂಪಿಕ್ಸ್ನಲ್ಲಿ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ನೀರಜ್ ಚೋಪ್ರಾ ಭಾರತೀಯರ ಬಂಗಾರ ಪದಕದ ಕನಸು ಮಾಡಿದ್ದಾರೆ. ಅಥ್ಲೆಟಿಕ್ ವಿಭಾಗದಲ್ಲಿನ ಅವರ ಈ ಸಾಧನೆಗೆ ಈಗಾಗಲೇ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದ್ದು, ಅನೇಕ ರಾಜ್ಯಗಳು ಅವರಿಗೆ ಬಹುಮಾನಗಳನ್ನು ಘೋಷಿಸಿ, ಅವರ ಪ್ರತಿಭೆಗೆ ಪ್ರೋತ್ಸಾಹಿಸಿದೆ. ರಾಜ್ಯದಲ್ಲಿ ಕೂಡ ಮುಖ್ಯಮಂತ್ರಿಗಳು, ಮತ್ತುಕ್ರೀಡಾ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಇನ್ನು ಈ ನೀರಜ್ ಚೋಪ್ರಾ ಜೊತೆ ರಾಜ್ಯದಲ್ಲಿ ಕೇಳಿ ಬರುತ್ತಿರುವ ಮತ್ತೊಂದು ಹೆಸರು ಶಿರಸಿಯ ಕಾಶಿನಾಥ್ ನಾಯ್ಕ್ ಅವರದ್ದು. ನೀರಜ್ ಚೋಪ್ರಾಗೆ ತರಬೇತಿ ನೀಡಿದ್ದು ನಮ್ಮ ಕನ್ನಡಿಗ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಇದೇ ಹಿನ್ನೆಲೆ ನೀರಜ್ ಚೋಪ್ರಾ ಈ ಸಾಧನೆಗೆ ತರಬೇತಿ ನೀಡಿದ್ದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ನಗದು ಬಹುಮಾನ ಘೋಷಿಸಿ ಕ್ರೀಡಾ ಸಚಿವರು ಆದೇಶಿಸಿದ್ದಾರೆ.
ನೀರಜ್ ಚೋಪ್ರಾ ಚಿನ್ನದ ಪದಕಕ್ಕೆ ಮುತ್ತಿಕ್ಕುವಲ್ಲಿ ಕನ್ನಡಿಗನ ಪಾತ್ರವೂ ಇದೆ. ಛೋಪ್ರಾಗೆ ತರಬೇತಿ ನೀಡಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾಶಿನಾಥ್ ನಾಯ್ಕ್. 2010 ರ ಕಾಮನ್ವೇಲ್ತ್ ಕಾಶಿನಾಥ್ ಈಟಿ ಎಸೆತದಲ್ಲಿ ಕಂಚಿನ ಪದಕಗಳಿಸಿದ್ದರು. ಅತ್ಯುತ್ತಮ ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ ನೀರಜ್ ಚೋಪ್ರಾ ಸ್ವರ್ಣ ಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಇಂತಹ ಸಾಧನೆಗೆ ಬೆನ್ನೆಲು ಬಾದ ಕನ್ನಡಿಗ ಕಾಶಿನಾಥ್ ನಾಯ್ಕ್ ಅವರ ಪಾತ್ರ ಕೂಡ ಹಿರಿದು. ಇದೆ ಉದ್ದೇಶದಿಂದ ಅವರಿಗೆ ಗೌರವಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟೋಕಿಯೊ ಒಲಿಂಪಿಕ್ ನಲ್ಲಿ ಈಟಿ ಎಸೆತದಲ್ಲಿ ಚಿನ್ನಕ್ಕೆ ಕೊರಳೊಡ್ಡಿದ ನೀರಜ್ ಛೋಪ್ರಾ ಅವರ ಸಾಧನೆ ಹಿಂದಿನ ಶಕ್ತಿಯಾಗಿರುವ ತರಬೇತುದಾರರಾದ ಶಿರಸಿಯ ಕಾಶಿನಾಥ್ ನಾಯ್ಕ್ ಅವರಿಗೆ ಇಲಾಖೆಯಿಂದ ರೂ. 10 ಲಕ್ಷ ನಗದು ಬಹುಮಾನ ಘೋಷಿಸಿದ್ದೇನೆ.@CMofKarnataka#Olympics
1/2 pic.twitter.com/HhUjopZNOH
— Dr.Narayana Gowda / ಡಾ.ನಾರಾಯಣ ಗೌಡ (@narayanagowdakc) August 8, 2021
ಇದನ್ನು ಓದಿ: ಬಂಗಾರದ ಹುಡುಗ ನೀರಜ್ಗೆ ತರಬೇತಿ ನೀಡಿದ್ದ ಶಿರಸಿಯ ಕೋಚ್
ದೇಶದ ಕೀರ್ತಿ ಪತಾಕೆ ಹಾರಿಸಿದ ಕ್ರೀಡಾ ಸಾಧಕರಿಗೆ ಸನ್ಮಾನ
ಟೋಕಿಯೋ ಓಲಂಪಿಕ್ ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಈಗಾಗಲೇ ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸಿದ್ದು ಎಲ್ಲ ಕ್ರೀಡಾಪಟುಗಳನ್ನು ಆಹ್ವಾನಿಸಿ ಗೌರವಿಸಲು ತೀರ್ಮಾನಿಸಲಾಗಿದೆ ಇದೇ ಸಂದರ್ಭದಲ್ಲಿ ತರಬೇತುದಾರ ಕಾಶಿನಾಥ್ ಅವರನ್ನು ಸನ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಓಲಂಪಿಕ್ಸ್ ನಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳಿಗೂ ಗೌರವ
ಓಲಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯುವುದೂ ಒಂದು ದೊಡ್ಡ ಸಾಧನೆಯೇ ಆಗಿದೆ. ಟೋಕಿಯೋ ಓಲಂಪಿಕ್ಸ್ ನಲ್ಲಿ ಮೂವರು ಕನ್ನಡಿಗರು ಪಾಲ್ಗೊಂಡು ಉತ್ತಮ ಸಾಧನೆ ತೋರಿದ್ದಾರೆ. ಪದಕ ಗಳಿಸಿದ ಕ್ರೀಡಾ ಸಾಧಕರನ್ನು ಗೌರವಿಸಿದಂತೆಯೆ ರಾಜ್ಯದ ಹೆಮ್ಮೆಯ ಕ್ರೀಡಾಪಟುಗಳಾದ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾ ಅವರನ್ನೂ ಸನ್ಮಾನಿಸಲಾಗುವುದು ಎಂದು ನೂತನ ಕ್ರೀಡಾ ಸಚಿವರು ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ