ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರ ದೆಹಲಿ (Delhi) ಪ್ರವಾಸ ರದ್ದಾಗಿದೆ. ಅನಾರೋಗ್ಯದ (Unhealthfulness) ಕಾರಣ ಡಿಕೆ ಶಿವಕುಮಾರ್ ತಮ್ಮ ಪ್ರವಾಸ ರದ್ದು ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ನಡುವೆ ಹೈಕಮಾಂಡ್ ವಿರುದ್ಧ ಕೆಪಿಸಿಸಿ (KPCC) ಅಧ್ಯಕ್ಷರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಡಿಕೆ ಶಿವಕುಮಾರ್ ಅವರು, ನನ್ನನ್ನು ಬಂಡೆ ಅಂತಾ ನೀವು ಕರೆದಿದ್ದೀರಿ. ಬಂಡೆ ಕೆತ್ತಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನನ್ನ ನೇಣುಗಂಬ ಆದರೂ ಮಾಡಿಕೊಳ್ಳಿ. ಜಲ್ಲಿಕಲ್ಲು, ಚಪ್ಪಡಿ ಆದರೂ ಮಾಡಿಕೊಳ್ಳಿ ಎಂದು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ
ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಹರಿತವಾದ ಮಾತುಗಳಿಂದ ಸಂದೇಶ ಸಾರಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ನಾಯಕರಿಗೆ ಬಿಡುವ ಒಂದು ಸಾಲಿನ ನಿರ್ಣಯಕ್ಕೆ ಎಲ್ಲಾ ಶಾಸಕರು ಸರ್ವಾನುಮತದಿಂದ ಒಪ್ಪಿಗೆ ನೀಡಿದ್ದಾರೆ.
ಕಾಂಗ್ರೆಸ್ ಸಂಪ್ರದಾಯದಂತೆ ಎಲ್ಲಾ ಶಾಸಕರ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ನಾನು ದೆಹಲಿಗೆ ಹೋಗಬೇಕು ಎಂಬ ವಿಚಾರ ಇದೆ. ನಮ್ಮ ಮನೆಯಲ್ಲಿ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಂಡಿದ್ದು, ಹೀಗಾಗಿ ದೆಹಲಿಗೆ ಹೋಗುವ ಬಗ್ಗೆ ನಾನು ಇನ್ನೂ ತೀರ್ಮಾನ ಮಾಡಿಲ್ಲ ಎಂದಿದ್ದರು.
ಅಲ್ಲದೆ, ನಿಮ್ಮ ಹುಟ್ಟುಹಬ್ಬದ ದಿನ ಹೈಕಮಾಂಡ್ ನಿಮಗೆ ಉಡುಗೊರೆ ನೀಡುವುದೇ ಎಂದು ಕೇಳಿದ ಪ್ರಶ್ನೆಗೆ, ‘ಹೈಕಮಾಂಡ್ ಉಡುಗೊರೆ ನೀಡುತ್ತದೆಯೋ ಇಲ್ಲವೋ, ಆದರೆ ರಾಜ್ಯದ ಜನ ನನ್ನ ಮೇಲೆ ವಿಶ್ವಾಸ ಇಟ್ಟು ನನ್ನ ಅಧ್ಯಕ್ಷತೆಯಲ್ಲಿ ಪಕ್ಷವನ್ನು 135 ಸ್ಥಾನಗಳ ಬಹುದೊಡ್ಡ ಬಹುಮತದಿಂದ ಗೆಲ್ಲಿಸಿದ್ದಾರೆ.
ಇದಕ್ಕಿಂತ ದೊಡ್ಡ ಉಡುಗೊರೆ ನಿರೀಕ್ಷಿಸಲು ಸಾಧ್ಯವೇ? ಅಧಿಕಾರ ಇಲ್ಲದಿದ್ದರೂ, ಎಲ್ಲಾ ಕಿರುಕುಳ, ಸವಾಲುಗಳನ್ನು ಎದುರಿಸಿ, ಈ ಡಬಲ್ ಇಂಜಿನ್ ಸರ್ಕಾರಗಳನ್ನು ಎದುರಿಸಿ ಪಕ್ಷವನ್ನು ಸಂಘಟನೆ ಮಾಡಿದ್ದೇನೆ’ ಎಂದು ತಿಳಿಸಿದ್ದರು.
ನಾನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತು ಕೊಟ್ಟಿದ್ದೆ. ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ಮಾತುಕೊಟ್ಟಿದ್ದೆ, ಯಾರ ಕ್ಲೇಮ್ ಬಗ್ಗೆಯೂ ಮಾತಾಡಲ್ಲ, ನಾನು ಸಿಂಗಲ್ ಮ್ಯಾನ್. ನಾನು ಧೈರ್ಯದಲ್ಲಿ ವಿಶ್ವಾಸದಲ್ಲಿ ನಂಬಿಕೆಯಿಟ್ಟವನ್ನು. ಹಿಂದಿನ ಐದು ವರ್ಷಗಳಲ್ಲಿ ಏನಾಗಿದೆ ಎಂದು ಬಾಯಿ ಬಿಡಲ್ಲ.
ಮುಂದಿನ ದಿನಗಳಲ್ಲಿ ಇದರ ಬಗ್ಗೆ ಹೇಳುತ್ತೇನೆ, ನಾನು ಸಿಂಗಲ್ ಮ್ಯಾನ್ ಗಾಂಧಿ ಒಂದು ಮಾತು ಹೇಳಿದ್ದರು. ಸೋತಾಗ ಧೈರ್ಯದಿಂದ ಇರಬೇಕು, ಗೆದ್ದಾಗ ಉದಾರ ಮನಸ್ಸಿನಿಂದ ಇರಬೇಕು. 15 ಜನ ಶಾಸಕರು ಪಕ್ಷ ಬಿಟ್ಟು ಹೋದಾದ ಬೇಸರ ಆಗಿಲ್ಲ, ಧೈರ್ಯದಿಂದ ಆ ಸಂದರ್ಭದಲ್ಲಿ ಹೆದಿರಿಸುತ್ತಿದ್ದೆ. ಖರ್ಗೆ ಅವರಿಗೆ ರಾಜ್ಯ ರಾಜಕಾರಣದ ಬಗ್ಗೆ ಅಧಿಕಾರ ಇದೆ. ಸೋನಿಯಾ ಗಾಂಧಿ ,ರಾಗಾ ಅವರಿಗೆ ವಿಶ್ವಾಸ ಇದೆ. ಈ ವಿಚಾರವನ್ನು ಅವರಿಗೆ ಬಿಡುತ್ತೇವೆ ಎಂದಿದ್ದರು.
ಡಿ.ಕೆ ಶಿವಕುಮಾರ್ ಮೊದಲ ಸಲ ಎಂಎಲ್ಎ ಆದಾಗಲೇ ಮಂತ್ರಿ ಆದವರು. 34 ವರ್ಷದ ರಾಜಕೀಯ ಅನ್ನೋ ಚದುರಂಗದಲ್ಲಿ ತನ್ನಿಷ್ಟ ಬಂದಂಗೆ ನಡೆದುಕೊಂಡು ಬಂದಿದ್ದಾರೆ. ಯರು ಏನಾದರೂ ಹೇಳಲಿ, ನೆಲಕಚ್ಚಿದ್ದ ಕಾಂಗ್ರೆಸ್ ಪಕ್ಷವನ್ನು ಮಣ್ಣಲ್ಲಿ ಮುಚ್ಚಿಬಿಡ್ತೀವಿ ಅಂತ ಅಬ್ಬರಿಸುವವರ ಮಧ್ಯೆ ಬೊಬ್ಬಿರಿದು ಒಗ್ಗಟ್ಟಾಗಿ ಪಕ್ಷಕ್ಕೆ ಲೈಫ್ಲೈನ್ ಕೊಟ್ಟವರು ಡಿಕೆ ಶಿವಕುಮಾರ್, ಇದರಲ್ಲಿ ಎರಡು ಮಾತಿಲ್ಲ.
ಬಟ್ ನಿನ್ನೆ ಬೆಳಗ್ಗೆವರೆಗೂ ಇದ್ದ ಒಗ್ಗಟ್ಟು ಈಗಿಲ್ಲ. ಸಿಎಂ ಕುರ್ಚಿ ಏರುವ ಏಣಿಯನ್ನ ನಂಬಿದವರೇ ಒದ್ದು ಬಿಟ್ಟರು ಅನ್ನೋದು ಡಿಕೆ ಶಿವಕುಮಾರ್ ಅವರ ನೋವಾಗಿದೆ. ಇದಕ್ಕೆ ಇವತ್ತು ಡಿಕೆ ಶಿವಕುಮಾರ್ ಅವರು ಆಡಿದ ಮಾತುಗಳು ಸಾಕ್ಷಿಯಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ