Grama Panchayat Elections: ಕರ್ನಾಟಕ ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಡಿ. 22 ಮತ್ತು 27ಕ್ಕೆ ಮತದಾನ

Karnataka Grama Panchayat Elections 2020 Dates: ಡಿಸೆಂಬರ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರ ಮತದಾನಕ್ಕೆ ಇವಿಎಂ ಯಂತ್ರಗಳ ಬಳಕೆ ಮಾಡಲಾಗುತ್ತದೆ.  ರಾಜ್ಯದಲ್ಲಿ ತಕ್ಷಣದಿಂದಲೇ ನೀತಿ ಸಂಹಿತಿ ಜಾರಿಯಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಬೆಂಗಳೂರು(ನ.30): ಕೋವಿಡ್​ ಕಾರಣದಿಂದ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯತಿ ಚುನಾವಣೆಗೆ ಇಂದು ದಿನಾಂಕ ಘೋಷಣೆಯಾಗಿದೆ. ರಾಜ್ಯ ಚುನಾವಣಾ ಆಯೋಗವು ಇಂದು ಸುದ್ದಿಗೋಷ್ಠಿ ನಡೆಸಿ ಗ್ರಾ.ಪಂ.ಚುನಾವಣೆ ನಡೆಯುವ ದಿನಾಂಕವನ್ನು ಘೋಷಿಸಿದೆ. ಮೊದಲ ಹಂತದ ಮತದಾನ ಡಿಸೆಂಬರ್ 22ರಂದು ನಡೆಯಲಿದೆ. ಎರಡನೇ ಹಂತದ ಮತದಾನ ಡಿ.27ರಂದು ನಡೆಯಲಿದೆ.  ರಾಜ್ಯದ 30 ಜಿಲ್ಲೆಗಳ ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ.  5762 ಗ್ರಾಮ ಪಂಚಾಯತಿಗೆ ಚುನಾವಣೆ ನಡೆಯಲಿದೆ.  92,121 ಸದಸ್ಯರಿಗೆ ಚುನಾವಣೆ ನಡೆಯಲಿದೆ.

  ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಆಯಾ ತಾಲೂಕು ಕೇಂದ್ರಗಳಲ್ಲಿ ಮತಎಣಿಕೆ ನಡೆಯಲಿದೆ.  ಎರಡು ಹಂತದ ಮತ ಎಣಿಕೆ ಒಂದೇ ದಿನ ನಡೆಯಲಿದೆ.  ಕೋವಿಡ್ ಪಾಸಿಟಿವ್ ಇರುವ ರೋಗಿಗಳಿಗೆ ಮತ ಹಾಕಲು ಕೊನೆಯ ಒಂದು ಗಂಟೆಗೆ ಅವಕಾಶ ಕೊಡುತ್ತೇವೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

  ಪ್ರವಾಸಿಗರ ಬದಲು ಹಸುಗಳ ಎಂಟ್ರಿ; ಗಬ್ಬೆದ್ದು ನಾರುತ್ತಿದೆ ಯಾದಗಿರಿಯ ಲುಂಬಿನಿ ಪಾರ್ಕ್

  ಮೊದಲ ಹಂತದಲ್ಲಿ ಜಿಲ್ಲೆಯ ಅರ್ಧ ತಾಲೂಕುಗಳಲ್ಲಿ ಮಾತ್ರ ಚುನಾವಣೆ ನಡೆಯಲಿದೆ.  ಉಳಿದ ತಾಲೂಕುಗಳಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.  ಪ್ರತಿ ಜಿಲ್ಲೆಗಳಲ್ಲೂ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿದರು.

  ಡಿಸೆಂಬರ್ 7ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಡಿಸೆಂಬರ್ 11 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಬೀದರ್ ಜಿಲ್ಲೆಯಲ್ಲಿ ಮಾತ್ರ ಮತದಾನಕ್ಕೆ ಇವಿಎಂ ಯಂತ್ರಗಳ ಬಳಕೆ ಮಾಡಲಾಗುತ್ತದೆ.  ರಾಜ್ಯದಲ್ಲಿ ತಕ್ಷಣದಿಂದಲೇ ನೀತಿ ಸಂಹಿತಿ ಜಾರಿಯಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತರು ತಿಳಿಸಿದ್ದಾರೆ.

  ಮೊದಲ ಹಂತದಲ್ಲಿ 113 ತಾಲೂಕುಗಳ 2930 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ 113 ತಾಲೂಕುಗಳ 2832 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ಒಟ್ಟು 5762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

  ರಾಜ್ಯದಲ್ಲಿ ಒಟ್ಟು 2 ಕೋಟಿ, 97 ಲಕ್ಷ, 15 ಸಾವಿರದ 48 ಮತದಾರರಿದ್ದಾರೆ.  1,49,71,676 ಪುರುಷ ಮತದಾರರಿದ್ದರೆ, ಮಹಿಳಾ ಮತದಾರರು - 1,47,41,964 ಇದ್ದಾರೆ.  ಪ್ರತಿ ಮತಗಟ್ಟೆಯನ್ನ 1000 ಮತದಾರರಿಗೆ ಮಿತಿಗೊಳಿಸಲಾಗಿದೆ. 5847 ಚುನಾವಣಾಧಿಕಾರಿಗಳು,  6085 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

  45,128 ಮತಗಟ್ಟೆಗಳಿಗೆ 2,70,768 ಮತಗಟ್ಟೆ ಅಧಿಕಾರಿಗಳನ್ನು ನೇಮಿಸಲಾಗಿದೆ. ಕೋವಿಡ್‌-19 ಹಿನ್ನೆಲೆಯಲ್ಲಿ 45,000 ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ‌ಇಲಾಖೆ ಸಿಬ್ಬಂದಿಯನ್ನು ಚುನಾವಣೆಗಾಗಿ ಬಳಕೆ ಮಾಡಿಕೊಳ್ಳಲಾಗುತ್ತದೆ.

  ಡಿಸೆಂಬರ್ 7ರಂದು ಮೊದಲನೇ ಹಂತದ ಮತದಾನಕ್ಕೆ, ಡಿ.11ರಂದು ಎರಡನೇ ಹಂತದ ಮತದಾನಕ್ಕೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದಾರೆ. ಮೊದಲನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಡಿ.11 ಕೊನೆಯ ದಿನಾಂಕವಾದರೆ, ಎರಡನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಡಿ.16 ಕೊನೆಯ ದಿನಾಂಕವಾಗಿದೆ.

  ಮೊದಲನೇ ಹಂತದ ಚುನಾವಣೆಗೆ ಡಿ.12 ನಾಮಪತ್ರ ಪರಿಶೀಲನೆಗೆ ಕೊನೆಯ ದಿನಾಂಕವಾಗಿದೆ. ಎರಡನೇ ಹಂತದ ಚುನಾವಣೆಗೆ ಡಿ.17ರಂದು ನಾಮಪತ್ರ ಪರಿಶೀಲನೆ ಮಾಡಲಾಗುತ್ತದೆ. ಮೊದಲನೇ ಹಂತದ ಚುನಾವಣೆಗೆ ಡಿ.14 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾದರೆ, ಎರಡನೇ ಹಂತದ ಚುನಾವಣೆಗೆ ಡಿ.19 ಕಡೆಯ ದಿನಾಂಕವಾಗಿದೆ.
  Published by:Latha CG
  First published: