Idgah Maidan: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್​ ಗ್ರೀನ್​ ಸಿಗ್ನಲ್!

 ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ನ ಏಕಸದಸ್ಯ ಪೀಠ ಅಂಜುಮನ್​ ಸಂಸ್ಥೆಯ ಅರ್ಜಿ ವಜಾಗೊಳಿಸಿದೆ. ಪಾಲಿಕೆ ಆಯುಕ್ತರ ನಿರ್ಧಾರಕ್ಕೆ ಮನ್ನಣೆ ನೀಡಿದೆ. 

ಕರ್ನಾಟಕ ಹೈಕೋರ್ಟ್

ಕರ್ನಾಟಕ ಹೈಕೋರ್ಟ್

  • Share this:
    ಬೆಂಗಳೂರು(ಆ.30): ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ (Idgah Maidan in Hubballi) ಗಣೇಶೋತ್ಸವಕ್ಕೆ (Ganesh Chaturthi) ತಡೆಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್​ನ ಏಕಸದಸ್ಯ ಪೀಠ ಅಂಜುಮನ್​ ಸಂಸ್ಥೆಯ ಅರ್ಜಿ ವಜಾಗೊಳಿಸಿದೆ. ಪಾಲಿಕೆ ಆಯುಕ್ತರ ನಿರ್ಧಾರಕ್ಕೆ ಮನ್ನಣೆ ನೀಡಿದೆ.  ಹೌದು ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ಬ್ರೇಕ್ ಹಾಕಿ, ಎರಡು ದಿನಗಳ ಕಾಲ ಯಥಾಸ್ಥಿತಿ ಕಾಪಾಡುವಂತೆ ನೀಡಿದ್ದ ಆದೇಶವನ್ನಾಧರಿಸಿ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲೂ ಗಣೇಶೋತ್ಸವ ಆಚರಣೆಗೆ ಬ್ರೇಕ್​ ಹಾಕಬೇಕೆಂದು ಕೋರಿ ವಿಚಾರಣೆಗೆ ಅರ್ಜಿದಾರರು ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಈ ಸಂಬಂಧ ಮೂವರು ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾ. ಅಶೋಕ್ ಎಸ್ ಕಿಣಗಿಯವರ ಅರ್ಜಿ ವಜಾಗೊಳಿಸಿದೆ.

    ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಬ್ರೇಕ್, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ!

    ಏಕಾಏಕಿ ವಿಚಾರಣೆ ಏಕೆ?

    ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ಈ ಮೊದ್ಲೇ ಮಧ್ಯಂತರ ಆದೇಶ ನೀಡಿದೆ. ಇದರ ಪರಿಣಾಮ, ಮೂರು ದಿ‌ನ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆ ಅನುಮತಿ‌ ನೀಡಿತ್ತು. ಆದರೆ ಇದನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡ ಸಾಧಿಕ್ ಗುಡವಾಲಾ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಕುರಿತು ವಿಚಾರಣೆ ನಡೆಸಿ ಗಣೇಶೋತ್ಸವ ಪ್ರತಿಷ್ಠಾಪನೆಗೆ ಅರ್ಜಿ ನಿರ್ಧರಿಸುವ ಅಧಿಕಾರವನ್ನು ಹೈಕೋರ್ಟ್​ ಹುಬ್ಬಳ್ಳಿ-ಧಾರವಾಡ ಕಮಿಷನರ್​ಗೆ ನೀಡಿತ್ತು.

    Ganeshotsava Celebration in idgah maidana R Ashok reacts zameer ahmed Statement mrq
    ಹುಬ್ಬಳ್ಳಿ ಈದ್ಗಾ ಮೈದಾನ


    ಈ ಮಧ್ಯೆ ಚಾಮರಾಜಪೇಟೆ ಈದ್ಗಾ ಮೈದಾನದ ಸುಪ್ರೀಂಕೋರ್ಟ್​ ಆದೇಶ ಬಂದಿದೆ. ವಿಭಿನ್ನ ತೀರ್ಪಿನ ನೆಪವೊಡ್ಡಿ ಅರ್ಜಿದಾರರು ಮತ್ತೆ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆಯನ್ನು ನ್ಯಾ. ಅಶೋಕ್ ಎಸ್ ಕಿಣಗಿಯವರಿರುವ ಏಕಸದಸ್ಯ ಪೀಠ ಅವರ ಕಚೇರಿಯಲ್ಲೇ ನಡೆಸುತ್ತಿತ್ತು. ಆದರೀಗ ಮೂವರು ವಕೀಲರ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ಅರ್ಜಿ ವಜಾಗೊಳಿಸಿದ್ದಾರೆ. ಈ ಮೂಲಕ ಈಗಾಗಲೇ ಆಯೋಜಿಸಲಾಗಿರುವ ಗಣೇಶೋತ್ಸವ ಈದ್ಗಾ ಮೈದಾನದಲ್ಲಿ ನಡೆಯಲಿದೆ. ಇನ್ನು ಇದೇ ಮೊದಲ ಬಾರಿ ಈ ಮೈದಾನದಲ್ಲಿ ಗಣೇಶೋತ್ಸವ ನಡೆಯಲಿದೆ ಎಂಬುವುದು ಉಲ್ಲೇಖನೀಯ.

    ಇದನ್ನೂ ಓದಿ: BBMPಗೆ ಹಿಂದೂಪರ ಸಂಘಟನೆಗಳಿಂದ ಡೆಡ್ ಲೈನ್! ಯೋಗ ದಿನಕ್ಕೆ ಅವಕಾಶ ಕೊಡದಿದ್ರೆ ಕೋರ್ಟ್ ಮೊರೆ?

    ಹೈಕೋರ್ಟ್​ ಹೇಳಿದ್ದೇನು?

    ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಏರ್ಪಡಿಸಲಾದ ಗಣೇಶೋತ್ಸವಕ್ಕೆ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್​ ಸುಪ್ರೀಂ ಕೋರ್ಟ್‌ನಲ್ಲಿ ವಿವಾದದಲ್ಲಿರುವ ಚಾಮರಾಜಪೇಟೆ ಈದ್ಗಾ ಮೈದಾನದಂತೆ, ಹುಬ್ಬಳ್ಳಿಯಲ್ಲಿ ಯಾವುದೇ ವಿವಾದವಿಲ್ಲ ಎಂದು ಸ್ಪಷ್ಟಪಡಿಸಿದೆ.

    ಅಲ್ಲದೇ ಇದನ್ನು ಪೂಜಾಸ್ಥಳ ಎಂದು ಘೋಷಿಸಿಲ್ಲ. ಈದ್ಗಾ ಮೈದಾನವು ನಿಗಮದ ಆಸ್ತಿಯಾಗಿದ್ದು. ಜಾಗದ ಮೇಲೆ ಸರ್ಕಾರಕ್ಕೆ ಎಲ್ಲಾ ಹಕ್ಕುಗಳು ಇದೆ. ನಿಯಮಿತ ಚಟುವಟಿಕೆಗಳನ್ನು ಕೈಗೊಳ್ಳಲು ಈ ಆಸ್ತಿಯನ್ನು ಬಳಸಲಾಗುತ್ತಿದೆ. ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯ ಕೈಗೊಳ್ಳಬಹುದು. ಪ್ರತಿವಾದಿಯು 1991ರ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸಿದ್ದರೆ, ಅರ್ಜಿದಾರರಿಗೆ ಪರಿಹಾರವಿರುತ್ತದೆ ಎಂಬುವುದನ್ನು ಸ್ಪಷ್ಟಪಡಿಸಿದೆ.

    ಇದನ್ನೂ ಓದಿ: Idgah Maidan: ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಹೈಕೋರ್ಟ್ ಗ್ರೀನ್​ ಸಿಗ್ನಲ್!

    ಹಿಂದೂ ಕಾರ್ಯಕರ್ತರಿಂದ ವಿಜಯೋತ್ಸವ

    ಇನ್ನು ಹೈಕೋರ್ಟ್​ನ ಈ ತೀರ್ಪು ಹೊರ ಬಿದ್ದ ಬೆನ್ನಲ್ಲೇ ಹುಬ್ಬಳ್ಳಿಯ ಈದ್ಗಾ ಮೈದಾನದ ಬಳಿ ಹಿಂದೂಪರ ಸಂಘಟನೆಗಳ ಮುಖಂಡರು ವಿಜಯೋತ್ಸವ ಆಚರಿಸಿದ್ದಾರೆ. ಹುಬ್ಬಳ್ಳಿಯ ವಿವಿಧೆಡೆಯಿಂದ ಆಗಮಿಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗಣೇಶನ ಪರ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದ್ದಾರೆ.
    Published by:Precilla Olivia Dias
    First published: