ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ; ದೇವರೇ ಕಾಪಾಡಬೇಕು ಹೇಳಿಕೆಗೆ ಸಚಿವ ಶ್ರೀರಾಮುಲು ಸ್ಪಷ್ಟನೆ

Karnataka Coronavirus: ಕೊರೋನಾ ನಿಯಂತ್ರಣದಲ್ಲಿ ನಾವಿನ್ನೂ ಎಡವಿದರೆ ದೇವರೇ ಕಾಪಾಡಬೇಕು ಎಂದು ಹೇಳಿದ ಎಚ್ಚರಿಕೆಯ ಮಾತುಗಳನ್ನಾಡಿದ್ದೆ. ಆದರೆ, ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

Sushma Chakre | news18-kannada
Updated:July 16, 2020, 4:09 PM IST
ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ; ದೇವರೇ ಕಾಪಾಡಬೇಕು ಹೇಳಿಕೆಗೆ ಸಚಿವ ಶ್ರೀರಾಮುಲು ಸ್ಪಷ್ಟನೆ
ಸಚಿವ ಬಿ. ಶ್ರೀರಾಮುಲು
  • Share this:
ಬೆಂಗಳೂರು (ಜು. 16): ಮಿತಿ ಮೀರುತ್ತಿರುವ ಕೊರೋನಾವನ್ನು ನಿಯಂತ್ರಿಸುವುದು ಸುಲಭವಲ್ಲ. ಕೊರೋನಾದಿಂದ ನಮ್ಮನ್ನು ಆ ದೇವರೇ ಕಾಪಾಡಬೇಕು ಎಂದು ಹೇಳಿಕೆ ನೀಡುವ ಮೂಲಕ ರಾಜ್ಯ ಸರ್ಕಾರವನ್ನು ಮುಜುಗರಕ್ಕೀಡುಮಾಡಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು ವಿರುದ್ಧ ವಿರೋಧ ಪಕ್ಷಗಳು ಹರಿಹಾಯ್ದಿದ್ದವು. ಸರ್ಕಾರದ ವೈಫಲ್ಯವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವ ಸಚಿವರ ಸಮೇತ ಇಡೀ ಸರ್ಕಾರದ ಸಚಿವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳ ನಾಯಕರು ಆಗ್ರಹಿಸಿದ್ದರು. ತಮ್ಮ ಹೇಳಿಕೆ ತೀವ್ರ ಚರ್ಚೆಗೀಡಾದ ಬೆನ್ನಲ್ಲೇ ಸಚಿವ ಬಿ. ಶ್ರೀರಾಮುಲು ಟ್ವಿಟ್ಟರ್​ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ಕೊರೋನಾ ಸೋಂಕಿನ ಪರಿಸ್ಥಿತಿಯನ್ನು ನಿರ್ವಹಿಸಲು ಸಾಧ್ಯವಿಲ್ಲ, ದೇವರೇ ನಮ್ಮನ್ನು ಕಾಪಾಡಬೇಕು ಎಂದು ಒಪ್ಪಿಕೊಳ್ಳುವವರು ಅಧಿಕಾರದಲ್ಲಿ ಯಾಕಿರಬೇಕು? ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಲಿ. ಅದು ಕೇವಲ ಸಚಿವ ಶ್ರೀರಾಮುಲು ಹೇಳಿಕೆ ಅಲ್ಲ, ಸರ್ಕಾರದ ಹೇಳಿಕೆ. ಈಗ ಮುಖ್ಯಮಂತ್ರಿಯರವರ ಟೀಂ ನಾವು ಏನೂ ಮಾಡಕ್ಕೆ ಆಗಲ್ಲ ದೇವರೇ ಕಾಪಾಡಬೇಕು ಎಂದರೆ ಹೇಗೆ? ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಿಭಾಯಿಸೋಕೆ ಆಗದಿದ್ದರೆ ಅವರೆಲ್ಲ ಅಧಿಕಾರದಲ್ಲಿ ಯಾಕಿರಬೇಕು? ಎಂದು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದರು.

ಇದನ್ನೂ ಓದಿ: ಕೊರೋನಾದಿಂದ ದೇವರೇ ಕಾಪಾಡಬೇಕು ಅನ್ನೋರು ತಕ್ಷಣ ರಾಜೀನಾಮೆ ಕೊಡಿ; ಡಿ.ಕೆ. ಶಿವಕುಮಾರ್ ಆಗ್ರಹ

ಪ್ರತಿಪಕ್ಷವಾಗಿ ಈಗ ನಾವು ಅನಿವಾರ್ಯವಾಗಿ ಮಾತನಾಡುವಂತ ಪರಿಸ್ಥಿತಿ ಸೃಷ್ಟಿಯಾಗಿದೆ. ಶ್ರೀರಾಮುಲು ಹೇಳಿಕೆ ಈಗ ಇಡೀ ರಾಜ್ಯವನ್ನೇ ತಲ್ಲಣಗೊಳಿಸುತ್ತಿದೆ. ಇದು ಕೇವಲ ಶ್ರೀರಾಮುಲು ಹೇಳಿಕೆಯಲ್ಲ ಇದು ಸರ್ಕಾರದ ಮಾತಾಗಿದೆ. ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ.  ಜನರನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಮಗೆ ನೀಡಲಾಗಿದೆ ಅದನ್ನು ನಿಭಾಯಿಸಲು ನಿಮಗೆ ಸಾಧ್ಯವಿಲ್ಲ ಎಂದಾದರೆ, ಇಡೀ ಸರ್ಕಾರ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಇನ್ನೆರಡು ತಿಂಗಳಲ್ಲಿ ಕೊರೋನಾ ಹೆಚ್ಚಳ, ಆ ದೇವರೆ ನಮ್ಮನ್ನು ಕಾಪಾಡಬೇಕು; ಸಚಿವ ಶ್ರೀರಾಮುಲು

ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರೇ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ ಆ ಆರೋಪಗಳು 'ಸತ್ಯಕ್ಕೆ ದೂರವಾದದ್ದು' ಎಂದು ನಾನು ಹೇಳಿದ್ದೆ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.'ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ' ಎಂದು ಹೇಳುವ ಸಂರ್ಭದಲ್ಲಿ, 'ಇನ್ನೂ ಎಡವಿದರೆ ದೇವರೇ ಕಾಪಾಡಬೇಕು' ಎಂದು ಹೇಳಿದ ಎಚ್ಚರಿಕೆಯ ಮಾತುಗಳನ್ನಾಡಿದ್ದೆ. ಆದರೆ, ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.ನಮ್ಮ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರು ಕೊರೋನಾ ನಿಯಂತ್ರಣಕ್ಕೆ ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಪ್ಪಾಗಿ ಅರ್ಥೈಸಲಾದ ಮಾತಿಗೆ ನನ್ನ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ಶ್ರೀರಾಮುಲು ಟ್ವಿಟ್ಟರ್​ನಲ್ಲಿ ತಿಳಿಸಿದ್ದಾರೆ.ನಿನ್ನೆ ಚಿತ್ರದುರ್ಗದಲ್ಲಿ ಮಾತನಾಡಿದ್ದ ಆರೋಗ್ಯ ಸಚಿವ ಬಿ. ಶ್ರೀರಾಮುಲು, ಕೊರೋನಾ ನಿಯಂತ್ರಣ ಯಾರ ಕೈಯಲ್ಲಿದೆ? ಆ ದೇವರೇ ನಮ್ಮನ್ನು ಕಾಪಾಡಬೇಕು. ಮುಂದಿನ ಎರಡು ತಿಂಗಳಲ್ಲಿ ಇಡೀ ವಿಶ್ವದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತದೆ. ಹಾಗಾಗಿ, ಎಲ್ಲರೂ ಜಾಗೃತರಾಗಿ ಇರಬೇಕಿದೆ. ಮುಂದಿನ 2 ತಿಂಗಳಲ್ಲಿ ಜಾಸ್ತಿ ಆಗುವ ಅವಕಾಶ ನೂರಕ್ಕೆ ನೂರು ಪರ್ಸೆಂಟ್ ಇದೆ. ನಾವೇನಾದರೂ ತಪ್ಪು ಮಾಡಿದ್ದರೆ ಪ್ರಾಯಶ್ಚಿತ್ತ ಅನುಭವಿಸಲು ಸಿದ್ದರಿದ್ದೇವೆ. ಇದು ಬಹಳ ಸಂದಿಗ್ದ ಸಂದರ್ಭ. ಇದರಲ್ಲಿ ಕಾಂಗ್ರೆಸ್​ನವರು ರಾಜಕೀಯ ಮಾಡಬಾರದು ಎಂದು ಹೇಳಿದ್ದರು. ಈ ಮೂಲಕ ರಾಜ್ಯ ಸರ್ಕಾರದ ವೈಫಲ್ಯವನ್ನು ಸಚಿವರೇ  ಬಹಿರಂಗವಾಗಿ ಒಪ್ಪಿಕೊಂಡಿದ್ದರಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು
Published by: Sushma Chakre
First published: July 16, 2020, 4:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading