• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka Anti Corruption Bureau: ಎಸಿಬಿ ರಚನೆ ರದ್ದುಗೊಳಿಸಿದ ಹೈಕೋರ್ಟ್; ಎಲ್ಲ ಭ್ರಷ್ಟಾಚಾರ ಪ್ರಕರಣಗಳೂ ಲೋಕಾಯುಕ್ತಕ್ಕೆ ಶಿಫ್ಟ್

Karnataka Anti Corruption Bureau: ಎಸಿಬಿ ರಚನೆ ರದ್ದುಗೊಳಿಸಿದ ಹೈಕೋರ್ಟ್; ಎಲ್ಲ ಭ್ರಷ್ಟಾಚಾರ ಪ್ರಕರಣಗಳೂ ಲೋಕಾಯುಕ್ತಕ್ಕೆ ಶಿಫ್ಟ್

ಕರ್ನಾಟಕ ಹೈಕೋರ್ಟ್

ಕರ್ನಾಟಕ ಹೈಕೋರ್ಟ್

ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು. ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು ಎಂದು ಸಹ ಹೈಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಿದೆ.

  • Share this:

ಬೆಂಗಳೂರು: ಎಸಿಬಿ ರಚನೆ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಆದೇಶದ ಮೂಲಕ ಹೈಕೋರ್ಟ್ ಎಸಿಬಿಗೆ (Karnataka Anti Corruption Bureau) ಪೊಲೀಸ್ ಠಾಣೆ ಸ್ಥಾನಮಾನ ನೀಡಿದ್ದನ್ನು ರದ್ದುಪಡಿಸಿದೆ.  ಎಸಿಬಿ ಲೋಕಾಯುಕ್ತ (Karnataka Lokayukta) ವ್ಯಾಪ್ತಿಗೆ ನೀಡಿ ಹೈಕೋರ್ಟ್ ಆದೇಶ ಪ್ರಕಟಿಸಿದೆ. ನ್ಯಾ.ಬಿ.ವೀರಪ್ಪ, ನ್ಯಾ.ಕೆ.ಎಸ್.ಹೇಮಲೇಖಾರವರಿದ್ದ ಹೈಕೋರ್ಟ್ ಪೀಠ ಈ ತೀರ್ಪು ಪ್ರಕಟಿಸಿದೆ.  ಹೈಕೋರ್ಟ್ ಈ ಆದೇಶ  ಲೋಕಾಯುಕ್ತ ಪೊಲೀಸರಿಗೆ ಮತ್ತೆ ಅಧಿಕಾರ ನೀಡಿದ್ದು ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ಮರುಸ್ಥಾಪಿಸಿದಂತಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂಬ ಕಾರಣಕ್ಕೆ ಎಲ್ಲಾ ಪ್ರಕರಣಗಳೂ ಲೋಕಾಯುಕ್ತ ಪೊಲೀಸರಿಗೆ ವರ್ಗಾವಣೆ ಮಾಡುವಂತೆ ಹೈಕೋರ್ಟ್ (Karnataka High Court)  ನಿರ್ದೇಶನ ನೀಡಿದೆ.


ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು. ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು ಎಂದು ಸಹ ಹೈಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಿದೆ.


bjp tweet on congress leader siddaramaiah and kpcc president dk shivakumar relationship
ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್​


ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಎಸಿಬಿ ರಚನೆಯಾಗಿತ್ತು. ಹೈಕೋರ್ಟ್​ನ ಈ ಆದೇಶದ ಮೂಲಕ ಅಂದಿನ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.


ಇದನ್ನೂ ಓದಿ:  Kalaburagi Karate King: ಕರಾಟೆ ಕಿಂಗ್ ಅಂಬ್ರೇಶ್! ಕಲಬುರಗಿಯಲ್ಲಿ ಈಗ ಇವರದ್ದೇ ಹೆಸರು!


ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು ಎಂದಿರುವ ಹೈಕೋರ್ಟ್ ಸರ್ಕಾರದ ಆದೇಶ ರದ್ದುಪಡಿಸಿದೆ.


ಎಸಿಬಿ ರಚನೆ ಆದೇಶ ರದ್ದುಪಡಿಸಿದ ಹೈಕೋರ್ಟ್​ 3 ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು ಎಂದು ಸೂಚನೆ ನೀಡಿದೆ.


ಪ್ರಕರಣದ ಹಿನ್ನೆಲೆಯೇನು? ಇಲ್ಲಿದೆ ಮಾಹಿತಿ
ಕರ್ನಾಟಕ ಸರ್ಕಾರ ಭ್ರಷ್ಟಾಚಾರ ಕೇಸ್ ಗಳ ತನಿಖೆಗೆ ಎಸಿಬಿ ಸ್ಥಾಪನೆ ಮಾಡಿತ್ತು. 2016 ರಲ್ಲಿ ಚಿದಾನಂದ ಅರಸ್ ಎಂಬುವವರು ಭ್ರಷ್ಟಾಚಾರ ನಿಗ್ರಹ ದಳದ ಸ್ಥಾಪನೆ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮೊದಲು ಇಂತಹ ಪ್ರಕರಣಗಳನ್ನ ಲೋಕಾಯುಕ್ತ ಪೊಲೀಸ್ ವಿಂಗ್ ತನಿಖೆ ನಡೆಸುತ್ತಿತ್ತು. ನಂತರ ಎಸಿಬಿ ಅಥವಾ ಭ್ರಷ್ಟಾಚಾರ ನಿಗ್ರಹ ದಳ ಸ್ಥಾಪನೆ ಆಗಿದೆ, ಇದನ್ನು ಪ್ರಶ್ನಿಸಿ ಸಾರ್ವಜನಿಕರ ಹಿತಾಸಕ್ತಿ ಅರ್ಜಿ  ಸಲ್ಲಿಕೆ ಮಾಡಲಾಗಿತ್ತು. ಈಗ ಹೈಕೋರ್ಟ್ ಸಾರ್ವಜನಿಕರ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಿದೆ.


ಇದನ್ನೂ ಓದಿ: BMTC Offer: ಬಿಎಂಟಿಸಿ ಬಸ್​ಗಳಲ್ಲಿ ಫ್ರೀ ಆಗಿ ಓಡಾಡಿ! ಟಿಕೆಟ್​ಗೆ ಹಣ ಕೊಡಬೇಕಂತಿಲ್ಲ!


ಬಾಕಿ ಉಳಿದಿರುವ ಎಲ್ಲ ಪ್ರಕರಣಗಳೂ ಲೋಕಾಯುಕ್ತಕ್ಕೆ ವರ್ಗಾವಣೆ
2016 ರಿಂದ ಈವರೆಗೆ ತನಿಖೆ ಆಗದೇ ಬಾಕಿ ಇರುವ ಎಲ್ಲ ಪ್ರಕರಣಗಳ ಕುರಿತೂ ಸಹ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ ಇದೆ. ಅವೆಲ್ಲವನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್ ಆದೇಶಿಸಿದೆ. ಜೊತೆಗೆ ಭ್ರಷ್ಟಾಚಾರ ನಿಗ್ರಹ ದಳದ ಎಲ್ಲಾ ಪೊಲೀಸ್ ಅಧಿಕಾರಿಗಳು ವರ್ಗಾವಣೆ ಮಾಡಲು ಆದೇಶಿಸಿದೆ.


ಈಗಿನ ಕರ್ನಾಟಕ ಲೋಕಾಯುಕ್ತರು ಯಾರು?
ಕರ್ನಾಟಕ ಲೋಕಾಯುಕ್ತ (Karnataka Lokayukta) ಹುದ್ದೆ ಭರ್ತಿಯಾಗಿದೆ. ರಾಜ್ಯ ಸರ್ಕಾರದಿಂದ ಲೋಕಾಯುಕ್ತ ನ್ಯಾಯಮೂರ್ತಿಯನ್ನಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ (Sanganagouda Patil) ಅವರನ್ನು ಜೂನ್ 15ರಂದು ನೇಮಕ ಮಾಡಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿರ್ದೇಶನದ ಮೇರೆಗೆ ಕರ್ನಾಟಕ ಲೋಕಾಯುಕ್ತದ ನ್ಯಾಯಮೂರ್ತಿಯಾಗಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿರೋದಾಗಿ ತಿಳಿಸಿದೆ.

top videos
    First published: