ಬೆಂಗಳೂರು: ಅಕ್ರಮ ಗೋಸಾಗಣೆ ಆರೋಪದಲ್ಲಿ ಹಲ್ಲೆ ನಡೆಸಿ ವ್ಯಕ್ತಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಪುನೀತ್ ಕೆರೆಹಳ್ಳಿಗೆ ಜಾಮೀನು (Bail) ಸಿಕ್ಕಿದೆ. ಹೈಕೋರ್ಟ್ ಏಕಸದಸ್ಯ ಪೀಠ ಪುನೀತ್ ಕೆರೆಹಳ್ಳಿ (Puneeth Kerehalli) ಸೇರಿದಂತೆ ಐವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ರಾಮನಗರದ ಸಾತನೂರಿನಲ್ಲಿ ಇದ್ರೀಶ್ ಪಾಷಾ ಎಂಬಾತನ ಮೇಲೆ ಹಲ್ಲೆ ಮತ್ತು ಕೊಲೆ ಆರೋಪದಡಿ ಕನಕಪುರ ಪೊಲೀಸರು (Kanakapur Police) ಐವರನ್ನು ಬಂಧಿಸಿದ್ದರು. ಇದೀಗ ಐವರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ.
ಆರೋಪಿಗಳು ಜಾಮೀನಿಗಾಗಿ ಪ್ರತ್ಯೇಕ ಅರ್ಜಿ ಸಲ್ಲಿಕೆ ಮಾಡಿದ್ದರು. ಮೂರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿ ಉಮಾ ನೇತೃತ್ವದ ರಜಾ ಕಾಲದ ಪೀಠ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ.
ಅರ್ಜಿದಾರರ ವಾದ ಮಂಡಿಸಿದ ವಕೀಲ ಅರುಣ್ ಶ್ಯಾಮ್, ಮರಣೋತ್ತರ ಶವ ಪರೀಕ್ಷೆ ವೇಳೆ ಇದ್ರಿಷ್ ಪಾಷಾ ದೇಹದ ಮೇಲೆ ಕೇವಲ ತರಚಿದ ಗಾಯಳಾಗಿವೆ. ಗಂಭೀರವಾದ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನೂರು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮೊದಲೇ ಮಾಹಿತಿ ಸಿಗಬೇಕಿತ್ತು ಎಂದು ವಾದ ಮಂಡಿಸಿದ್ದಾರೆ.
ಈಗಾಗಲೇ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹಾಗಾಗಿ ಆರೋಪಿಗಳಿಗೆ ಜಾಮೀನು ನೀಡಬೇಕು ಎಂದು ಅರುಣ್ ಶ್ಯಾಮ್ ಮನವಿ ಮಾಡಿಕೊಂಡಿದ್ದರು.
ಇದನ್ನೂ ಓದಿ: Explained: ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಇದೇ ಕಾರಣನಾ? ಡೇಟಾದಿಂದ ಬಯಲಾಗಿದ್ದೇನು?
ಪುನೀತ್ ಕೆರೆಹಳ್ಳಿ, ಗೋಪಿ, ಎಎನ್ ಪವನ್ ಕುಮಾರ್, ಪಿ.ಲಿಂಗಪ್ಪ ಮತ್ತು ಸುರೇಶ್ ಎಂಬವರಿಗೆ ಜಾಮೀನು ಸಿಕ್ಕಿದೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ