Bababudangiri Datta Peeta: ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ ಪೂಜೆಗೆ ಮುಜಾವರ್ ನೇಮಿಸಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಹಿಂದೂಗಳ ಪೂಜಾ ಸ್ಥಳದ ಧಾರ್ಮಿಕ ಆಚರಣೆಗಳನ್ನು ಮುಜಾವರ್‌ಗಳು ನಡೆಸಿಕೊಡಬೇಕು ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ನಿರ್ಧಾರ ಹಿಂದೂಗಳ ಭಾವನೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ಅರ್ಜಿದಾರರ ಪರವಾಗಿ ವಕೀಲ ಜಗದೀಶ್‌ ಬಾಳಿಗಾ ವಾದಿಸಿದ್ದರು.

ಕರ್ನಾಟಕ ಹೈಕೋರ್ಟ್

ಕರ್ನಾಟಕ ಹೈಕೋರ್ಟ್

 • Share this:
  ಬೆಂಗಳೂರು: ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ ದತ್ತಾತ್ರೇಯ ಪೀಠದ (bababudangiri datta peeta) ಪೂಜಾ ಕೈಂಕರ್ಯ ನೆರವೇರಿಸಲು ಮುಜಾವರ್ ನೇಮಕ ಮಾಡಿ 2018ರ ಮಾರ್ಚ್‌ 19ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಕರ್ನಾಟಕ ಹೈಕೋರ್ಟ್‌ (Karnataka High Court) ರದ್ದುಪಡಿಸಿದೆ. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್‌ ನೇತೃತ್ವದ ಏಕಸದಸ್ಯ ಪೀಠವು, ಪ್ರಕರಣವನ್ನು ಹೊಸದಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ. ಉನ್ನತಮಟ್ಟದ ಸಮಿತಿಯ ವರದಿಯ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ ಎಂದು ತೀರ್ಪಿನಲ್ಲಿ ಹೇಳಲಾಗಿದೆ.

  ದತ್ತ ಪೀಠದಲ್ಲಿ ಪೂಜೆ ನೆರವೇರಿಸಲು ಮುಜಾವರ್ ಅವರನ್ನು ನೇಮಕ ಮಾಡಿ 2018ರ ಮಾರ್ಚ್‌ 19ರಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಶ್ರೀಗುರು ದತ್ತಾತ್ರೇಯ ಪೀಠ ದೇವಸ್ಥಾನ ಸಂವರ್ಧನಾ ಸಮಿತಿ 2018ರ ಏಪ್ರಿಲ್‌ನಲ್ಲಿ ಹೈಕೋರ್ಟ್‌ಗೆ ತಕರಾರು ಮನವಿ ಸಲ್ಲಿಸಿತ್ತು. ಅರ್ಜಿ ಕುರಿತು ಸುದೀರ್ಘ ವಾದ- ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ್ದ ಹೈಕೋರ್ಟ್ ಕಳೆದ ಆಗಸ್ಸ್​ ತೀರ್ಪು ಕಾಯ್ದಿರಿಸಿತ್ತು.

  ಅರ್ಜಿ ವಿಚಾರಣಾ ಹಂತದಲ್ಲಿದ್ದಾಗಲೇ ಮಾರ್ಚ್‌ 19ರ ಆದೇಶ ಸಂಬಂಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ರಾಜ್ಯ ಸರ್ಕಾರ ನೀಡಿದ್ದ ಮುಚ್ಚಳಿಕೆ ಆಧರಿಸಿ, ದತ್ತ ಪೀಠದ ಪೂಜಾ ವಿಧಿ ವಿಧಾನದ ಬಗ್ಗೆ ಯಾವುದೇ ಆತುರದ ಕ್ರಮಕ್ಕೆ ಮುಂದಾಗದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಹೈಕೋರ್ಟ್‌ ಮಧ್ಯಂತರ ಆದೇಶ ಮಾಡಿತ್ತು. ಈ ಆದೇಶವನ್ನು ಕಾಲ ಕಾಲಕ್ಕೆ ವಿಸ್ತರಿಸಿಕೊಂಡು ಬಂದಿತ್ತು.

  ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ ದಾಸ್ ನೇತೃತ್ವದ ಉನ್ನತಮಟ್ಟದ ಸಮಿತಿ ನೀಡಿರುವ ವರದಿ ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಆ ವರದಿ ಆಧರಿಸಿ ರಾಜ್ಯ ಸರ್ಕಾರ ಮುಜಾವರ್ ನೇಮಕ ಮಾಡಿದೆ. ಹಿಂದೂಗಳ ಪೂಜಾ ಸ್ಥಳದ ಧಾರ್ಮಿಕ ಆಚರಣೆಗಳನ್ನು ಮುಜಾವರ್‌ಗಳು ನಡೆಸಿಕೊಡಬೇಕು ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ರಾಜ್ಯ ಸರ್ಕಾರದ ನಿರ್ಧಾರ ಹಿಂದೂಗಳ ಭಾವನೆಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು. ಅರ್ಜಿದಾರರ ಪರವಾಗಿ ವಕೀಲ ಜಗದೀಶ್‌ ಬಾಳಿಗಾ ವಾದಿಸಿದ್ದರು.

  ಇದನ್ನು ಓದಿ: DK Shivakumar: ನನ್ನನ್ನು, ಸಿದ್ದರಾಮಯ್ಯರನ್ನು ಬಿಡ್ತಾರೋ ಇಲ್ವೋ‌ ಗೊತ್ತಿಲ್ಲ; ಆಪರೇಷನ್ ಬಗ್ಗೆ ಬಿಜೆಪಿ, ಜೆಡಿಎಸ್ ಕಾಲೆಳೆದ ಡಿಕೆಶಿ!

  ತೀರ್ಪು ಸ್ವಾಗತಿಸಿದ ಸಿಟಿ ರವಿ

  ಚಿಕ್ಕಮಗಳೂರು ದತ್ತಪೀಠ ಪ್ರಕರಣದ ಹೈಕೋರ್ಟ್​ ತೀರ್ಪನ್ನು ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಸ್ವಾಗತಿಸಿದ್ದಾರೆ. ಹಿಂದೂ ಅರ್ಚಕರ ನೇಮಕ ಆಗಬೇಕೆ ಎನ್ನುವುದು 3ನೇ ತಲೆಮಾರಿನ ಹೋರಾಟ. ಎಲ್ಲಾ ದಾಖಲೆಗಳು ದತ್ತಾತ್ರೇಯನ ಹೆಸರಲ್ಲೇ ಇದೆ. ಆದರೆ, ಅರ್ಚಕರಿಲ್ಲ. ಸಿದ್ದರಾಮಯ್ಯ ಸರ್ಕಾರ ನ್ಯಾಯಕ್ಕೆ ವಿರುದ್ಧವಾಗಿ ಅನ್ಯಾಯ ಮಾಡಿತ್ತು. ಸತ್ಯಕ್ಕೆ ಸುಳ್ಳಿನ ಸರಪಳಿ ಎಣೆದು ಹಿಂದೂಗಳಿಗೆ ಅನ್ಯಾಯ ಮಾಡಿತ್ತು. ಕೋರ್ಟ್ ಮತ್ತೆ ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಆದೇಶ ಮಾಡಿದೆ. ದತ್ತಪೀಠದಲ್ಲಿ ಹಿಂದೂ ಅರ್ಚಕರ ನೇಮಕವಾಗುತ್ತದೆ. ಕೋರ್ಟ್ ತೀರ್ಪು ಭಕ್ತರಿಗೆ ಸಮಾಧಾನ ತಂದಿದೆ ಎಂದು ಹೇಳಿದರು.

  ಐತಿಹಾಸಿಕ ತೀರ್ಪು: ಎನ್ ರವಿಕುಮಾರ್

  ತೀರ್ಪಿನ ಬಗ್ಗೆ ಮಾತನಾಡಿದ ಬಿಜೆಪಿಯ ರವಿ ಕುಮಾರ್, ಇವತ್ತು ಕರ್ನಾಟಕ ಹೈಕೋರ್ಟ್ ಚಿಕ್ಕಮಗಳೂರಿಗೆ ಸಂಬಂಧಿಸಿದಂತೆ ಐತಿಹಾಸಿಕ ತೀರ್ಪುನ್ನು ನೀಡಿದೆ. ದತ್ತಾತ್ರೇಯ ಪೀಠಕ್ಕೆ ಸಂಬಂಧಿಸಿದ ಹೋರಾಟ ಬಹಳ ವರ್ಷದಿಂದ ನಡೆಯುತ್ತಿದೆ. ಅಲ್ಲಿ ಮೌಲ್ವಿಗಳಿಗೆ ಪೂಜೆ ಮಾಡುವುದಕ್ಕೆ ಸರ್ಕಾರ ಅವಕಾಶ ನೀಡಿತ್ತು. ಇದು ಐತಿಹಾಸಿಕ ಹಾಗೂ ಹಿಂದು ಭಕ್ತರಿಗೆ ಸೇರಿದ್ದು ಎಂದ ದತ್ತಾತ್ರೇಯ ಪೀಠ ಕೋರ್ಟ್ ಗೆ ಹೋಗಿತ್ತು. ಕಾಂಗ್ರೆಸ್ ಸರ್ಕಾರ,  ಹಿಂದು ಕಾರ್ಯಕರ್ತರು, ಹೋರಾಟಗಾರರ ಮೇಲೆ ಕೇಸ್ ಹಾಕಿತ್ತು. ಹೈ ಕೋರ್ಟ್ ಇಂದು ಮಹತ್ವ ಪೂರ್ಣವಾದ ತೀರ್ಪು ನೀಡಿದೆ. ಹೈ ಕೋರ್ಟ್ ನ್ಯಾಯಮೂರ್ತಿಗಳಿಗೆ ಹಾಗೂ ಹೋರಾಟ ಮಾಡಿದವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
  Published by:HR Ramesh
  First published: