ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ರಾಹುಲ್ , ರವಿಶಂಕರ್, ಲೂಮ್ ಪೆಪ್ಪರ್ ಸೇರಿ ಆರು ಜನರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿದ್ದರು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರನ್ನು ಒಳಗೊಂಡಿರುವ ಏಕಸದಸ್ಯ ಪೀಠ, ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ರಾಗಿಣಿ, ಸಂಜನಾ ಹಾಗೂ ಇನ್ನಿತರೆ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಈ ಹಿಂದೆ ಎನ್ಡಿಪಿಎಸ್ ವಿಚಾರಣಾ ನ್ಯಾಯಾಲಯ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ನಟಿಯರಿಬ್ಬರು ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ಈ ಮಧ್ಯೆ ಸಿಸಿಬಿ ನಟಿಮಣಿಯರಿಗೆ ಜಾಮೀನು ನೀಡದಂತೆ ಜಾಮೀನು ನೀಡದಂತೆ ಮನವಿ ಮಾಡಿತ್ತು.
ಈಗ ಹೈಕೋರ್ಟ್ನಲ್ಲೂ ಜಾಮೀನು ಅರ್ಜಿ ವಜಾಗೊಂಡಿದ್ದು, ಮುಂದೆ ರಾಗಿಣಿ, ಸಂಜನಾ ಸೇರಿದಂತೆ ಇತರೆ ಆರೋಪಿಗಳು ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ. ಹೈಕೋರ್ಟ್ ನೀಡಿರುವ ವಜಾ ಆದೇಶ ಪಡೆದ ಬಳಿಕ, ಸುಪ್ರಿಂ ಕೋರ್ಟ್ಗೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಲ್ಲವಾದಲ್ಲಿ, ಸಿಸಿಬಿ ಚಾರ್ಜ್ಶೀಟ್ ಆಗೋವರೆಗೂ ಕಾಯಬೇಕು. ಒಂದು ವೇಳೆ ಸುಪ್ರೀಂಕೋರ್ಟ್ನಲ್ಲೂ ಇವರಿಗೆ ಜಾಮೀನು ಸಿಗದಿದ್ದರೆ, ಪರಿಸ್ಥಿತಿ ಮತ್ತಷ್ಟು ಕಷ್ಟವಾಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ