• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Karnataka HC: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದು ಮಾಡಿದ ಹೈಕೋರ್ಟ್‌!

Karnataka HC: ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರದ್ದು ಮಾಡಿದ ಹೈಕೋರ್ಟ್‌!

ಕರ್ನಾಟಕ ಹೈಕೋರ್ಟ್

ಕರ್ನಾಟಕ ಹೈಕೋರ್ಟ್

ರಾಜ್ಯದಲ್ಲಿ ಖಾಲಿ ಇರುವ ಒಟ್ಟು 15000 ಪಧವೀದರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಪೈಕಿ 13363 ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಬಿಡುಗಡೆ ಮಾಡಿದ್ದ 1:1 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದರು. ಇದೀಗ ಹೈಕೋರ್ಟ್‌ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೇ ರದ್ದು ಮಾಡಿ ಆದೇಶ ಹೊರಡಿಸಿದೆ

ಮುಂದೆ ಓದಿ ...
  • Share this:

ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ (Primary School Teachers) ನೇಮಕಾತಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (DDPI) ಬಿಡುಗಡೆ ಮಾಡಿದ್ದ ‘ತಾತ್ಕಾಲಿಕ ಆಯ್ಕೆ’ (Temporary Selection) ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ (Karnataka Highcourt) ರದ್ದು ಮಾಡಿ ಆದೇಶ ಹೊರಡಿಸಿದೆ. ಅಲ್ಲದೇ, ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯ ಆಯ್ಕೆ ಪ್ರಾಧಿಕಾರಕ್ಕೆ ಸಕ್ಷಮ ಅಧಿಕಾರಿಗಳು ನೀಡಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ವ್ಯಾಖ್ಯಾನಿಸಲು ಅಧಿಕಾರವಿಲ್ಲ ಎಂದು ಹೈಕೋರ್ಟ್ ಹೇಳಿದೆ.


15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು 1:1 ಅನುಪಾತದಲ್ಲಿ ಬಿಡುಗಡೆ ಮಾಡಿದ್ದ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಶ್ನಿಸಿ ಅಕ್ಷತಾ ಚೌಗಲಾ ಮತ್ತು ಇತರರು ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ ಹಿಡಿದ ನ್ಯಾಯಾಲಯವು ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೇ ರದ್ದು ಮಾಡಿ ಆದೇಶ ಹೊರಡಿಸಿದೆ. ಇದರಿಂದ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿ ಶಿಕ್ಷಕರಾಗಬೇಕೆಂಬ ಕನಸು ಹೊತ್ತಿದ್ದ ಅಭ್ಯರ್ಥಿಗಳಿಗೆ ಭಾರೀ ನಿರಾಸೆಯಾಗಿದೆ.


ಇದನ್ನೂ ಓದಿ: Karnataka Election: ಥಟ್ ಅಂತ ಹೇಳಿ! ಹಣದಾಸೆಗೆ ಅರ್ಹರಲ್ಲದವರನ್ನು ಶಿಕ್ಷಕರನ್ನಾಗಿ ನೇಮಿಸಿದ್ದು ಯಾರು? ಕಾಂಗ್ರೆಸ್​​ ವಸರ್ಸ್​ ಬಿಜೆಪಿ ಬಿಗ್​ಫೈಟ್​​


ಗೊಂದಲ ಸೃಷ್ಟಿಸಿದ್ದ ನಿಯಮ


2022ರ ನವೆಂಬರ್ ತಿಂಗಳ 18 ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು ತಾತ್ಕಾಲಿಕ ಆಯ್ಜೆ ಪಟ್ಟಿಯನ್ನು ಪ್ರಕಟ ಮಾಡಿತ್ತು. ಅದರಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರದ ವಿಚಾರದಲ್ಲಿ ಇಲಾಖೆಯ ನಿಯಮ ಗೊಂದಲವನ್ನು ಸೃಷ್ಟಿ ಮಾಡಿತ್ತು. ಅಂದರೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಆಧಾರವಾಗಿ ನೀಡುವಂತೆ ಸೂಚಿಸಲಾಗಿತ್ತು.


ಇದನ್ನು ಪ್ರಶ್ನಿಸಿ ನೂರಾರು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ತಾವು ಸಲ್ಲಿಸಿದ್ದ ಅರ್ಜಿಯಲ್ಲಿ ಅಭ್ಯರ್ಥಿಗಳ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನ್ವಯವಾಗಬೇಕೇ ವಿನಹ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನ್ವಯವಾಗುವುದಿಲ್ಲ. ತಂದೆಯ ಜಾತಿ ಮಕ್ಕಳು ಮುಂದುವರಿಸುವುದರಿಂದ ಅದನ್ನೇ ಆಧಾರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದ್ದರು.


ಇದನ್ನೂ ಓದಿ: ಜವಹರ್ ನವೋದಯ ವಿದ್ಯಾಲಯದಲ್ಲಿ ಶಿಕ್ಷಕ ಹುದ್ದೆಗಳ ನೇಮಕಾತಿ- ಜ. 16ಕ್ಕೆ ಯಾದಗಿರಿಯಲ್ಲಿ ಸಂದರ್ಶನ


ಹೊಸ ಆಯ್ಕೆ ಪಟ್ಟಿ ಪ್ರಕಟಿಸಬೇಕು


ಹೀಗಾಗಿ ಈ ಅರ್ಜಿಯ  ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಒಬಿಸಿ ಮಹಿಳಾ ವಿವಾಹಿತ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಪತಿಯ ಬದಲು ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪರಿಗಣಿಸುವಂತೆ ಆದೇಶ ನೀಡಿದೆ. ಮಹಿಳಾ ಅಭ್ಯರ್ಥಿಗಳ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು. ಹೀಗಾಗಿ ಹೈಕೋರ್ಟ್ ಸೂಚನೆಯಂತೆ ಶಿಕ್ಷಣ ಇಲಾಖೆ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಬೇಕಿದೆ.


13363 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು


ರಾಜ್ಯದಲ್ಲಿ ಖಾಲಿ ಇರುವ ಒಟ್ಟು 15000 ಪಧವೀದರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ಪೈಕಿ 13363 ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಬಿಡುಗಡೆ ಮಾಡಿದ್ದ 1:1 ಅನುಪಾತದ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದರು. ಅದರಲ್ಲಿ ಒಟ್ಟು 34 ಇಂಜಿನಿಯರಿಂಗ್ ಅಭ್ಯರ್ಥಿಗಳ ಪೈಕಿ 19 ಜನರು ಆಯ್ಕೆಯಾಗಿದ್ದರು. ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಹೀಗಾಗಿ ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದರು.


ಇದನ್ನೂ ಓದಿ: High Court: ಉತ್ಸವಗಳಿಗೆ ಕೋಟಿಗಟ್ಟಲೆ ಖರ್ಚು ಮಾಡ್ತೀರಿ, ಮಕ್ಕಳ ಯೂನಿಫಾರ್ಮ್‌ಗೆ ಹಣ ಇಲ್ವೇ? ಸರ್ಕಾರಕ್ಕೆ ಹೈಕೋರ್ಟ್ ಕ್ಲಾಸ್‌

Published by:Avinash K
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು