• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • High Court: ಅಧಿಕಾರಿಯನ್ನು ಜೈಲಿಗೆ ಕಳಿಸಿದ್ರೆ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹೇಗೆ ಬರಲ್ಲ ನೋಡ್ತೀವಿ: ಹೈಕೋರ್ಟ್‌ ಕಿಡಿ

High Court: ಅಧಿಕಾರಿಯನ್ನು ಜೈಲಿಗೆ ಕಳಿಸಿದ್ರೆ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹೇಗೆ ಬರಲ್ಲ ನೋಡ್ತೀವಿ: ಹೈಕೋರ್ಟ್‌ ಕಿಡಿ

ಹೈಕೋರ್ಟ್‌

ಹೈಕೋರ್ಟ್‌

ಸರಕಾರದ ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ನಮ್ಮನ್ನು ಕಾಪಾಡಲು ನ್ಯಾಯಾಲಯವಿದೆ ಎಂದು ಜನರಿಗೆ ಗೊತ್ತಾಗುತ್ತದೆ. ಮಾನ ಮಾರ್ಯದೆ ಇಲ್ಲದಿದ್ದರೆ ಅಧಿಕಾರಿಗಳಿಗೆ ಆರು ತಿಂಗಳು ಜೈಲಿಗೆ ಹೋಗಿ ಬರುತ್ತಾರೆ. ಆಗ ಏನೂ ಮಾಡೋಕೆ ಆಗಲ್ಲ. ಕೋರ್ಟ್‌ಗೂ ಎಲ್ಲೋ ಒಂದು ಕಡೆ ಸರಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ಕಿಡಿಕಾರಿದೆ.

ಮುಂದೆ ಓದಿ ...
  • Share this:

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ (Govt School Students) ಸಮರ್ಪಕ ರೀತಿಯಲ್ಲಿ ಸಮವಸ್ತ್ರ, (Uniform) ಶೂ ಮತ್ತು ಸಾಕ್ಸ್‌ ವಿತರಣೆ ಮಾಡಿರುವ ಬಗ್ಗೆ ದಾಖಲೆ ಸಹಿತ ಮಾಹಿತಿ ನೀಡದ ರಾಜ್ಯ ಸರ್ಕಾರದ (State Government) ವಿರುದ್ಧ ಹೈಕೋರ್ಟ್‌ ಪುನಃ ಕೆಂಡಕಾರಿದ್ದು, ಮಕ್ಕಳಿಗೆ ಸಮವಸ್ತ್ರ ಹೇಗೆ ಬರುವುದಿಲ್ಲವೋ ನಾವೂ ನೋಡುತ್ತೇವೆ. ಹಿರಿಯ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ಎಲ್ಲವೂ ಸರಿಹೋಗುತ್ತದೆ ಎಂದು ನ್ಯಾಯಾಲಯ ಕಿಡಿಕಾರಿದೆ.


ಕೊಪ್ಪಳ ಜಿಲ್ಲೆಯ ಮಾಸ್ಟರ್‌ ಮಂಜುನಾಥ್‌ ಎಂಬುವರು ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದ ವಿಭಾಗೀಯ ಪೀಠ, ಸರಕಾರ ಮತ್ತು ಅಧಿಕಾರಿಗಳ ಕಾರ್ಯವೈಖರಿಗೆ ಅತೃಪ್ತಿ ವ್ಯಕ್ತಪಡಿಸಿದೆ.


ಇದನ್ನೂ ಓದಿ: Delhi High Court: ಕನ್ಯತ್ವ ಪರೀಕ್ಷೆಯಿಂದ ಮಹಿಳೆಯ ಘನತೆಯ ಹಕ್ಕಿನ ಉಲ್ಲಂಘನೆಯಾಗುತ್ತದೆ: ದೆಹಲಿ ಹೈಕೋರ್ಟ್‌


ಕೋರ್ಟ್‌ಗೂ ಸರ್ಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ


ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್‌ ನೀಡದೇ ಇದ್ದರೆ ಅಧಿಕಾರಿಯನ್ನೇ ಜೈಲಿಗೆ ಕಳುಹಿಸುತ್ತೇವೆ. ಆಗ ಮಕ್ಕಳಿಗೆ ಸಮವಸ್ತ್ರ ಹೇಗೆ ಬರುವುದಿಲ್ಲವೋ ನಾವು ನೋಡುತ್ತೇವೆ. ಸರಕಾರದ ಉನ್ನತ ಅಧಿಕಾರಿಯೊಬ್ಬರನ್ನು ಜೈಲಿಗೆ ಕಳುಹಿಸಿದರೆ ನಮ್ಮನ್ನು ಕಾಪಾಡಲು ನ್ಯಾಯಾಲಯವಿದೆ ಎಂದು ಜನರಿಗೆ ಗೊತ್ತಾಗುತ್ತದೆ. ಆದರೆ, ಮಾನ ಮಾರ್ಯದೆ ಇಲ್ಲದಿದ್ದರೆ ಅಧಿಕಾರಿಗಳಿಗೆ ಆರು ತಿಂಗಳು ಜೈಲಿಗೆ ಹೋಗಿ ಬರುತ್ತಾರೆ. ಆಗ ಏನೂ ಮಾಡೋಕೆ ಆಗಲ್ಲ. ಕೋರ್ಟ್‌ಗೂ ಎಲ್ಲೋ ಒಂದು ಕಡೆ ಸರಕಾರದ ಮೇಲೆ ನಂಬಿಕೆ ಹೊರಟು ಹೋಗಿದೆ ಕಟುವಾಗಿ ಸರ್ಕಾರದ ನಡೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದರು.


ಮುನ್ನ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ನಿರ್ದೇಶಕರು ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ, ಸಮವಸ್ತ್ರ ಖರೀದಿಸಲು ಸರಕಾರದಿಂದ ಅನುದಾನ ಬಿಡುಗಡೆ ಮಾಡಲಾಗಿದೆ. 2019-20, 2020-21, 2021-22, 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಲ್ಲಾ ಜಿಲ್ಲೆಗಳ ಸರಕಾರಿ ಶಾಲೆಗಳ ಮಕ್ಕಳಿಗೆ ಶೂ ಮತ್ತು ಸಾಕ್ಸ್‌ ನೀಡಲಾಗಿದೆ ಎಂದು ಸರ್ಕಾರ ತಿಳಿಸಿತ್ತು.


ಎಷ್ಟು ಹಣ ಸದ್ಬಳಕೆಯಾಗಿದೆ?


ರಾಜ್ಯದ ಎಲ್ಲಾ ಜಿಲ್ಲೆಗಳ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರು (ಡಿಡಿಪಿಐ), ಸಮವಸ್ತ್ರ ಖರೀದಿಗೆ ಸರಕಾರ ಎಷ್ಟು ಹಣ ಬಿಡುಗಡೆ ಮಾಡಿದೆ? ಎಷ್ಟು ಹಣ ಸದ್ಭಳಕೆಯಾಗಿದೆ ಎಂಬ ಬಗ್ಗೆ ವೈಯಕ್ತಿಕ ಪರಿಶೀಲನೆ ನಡೆಸಬೇಕು. 2019-20ನೇ ಶೈಕ್ಷಣಿಕ ಸಾಲಿನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ ಮತ್ತು ಶೂ, ಸಾಕ್ಸ್‌ ವಿತರಣೆ ಮಾಡುವ ಮೂಲಕ ಸರಕಾರ ಹೈಕೋರ್ಟ್‌ ತೀರ್ಪು ಪಾಲಿಸಿದೆಯೇ ಅಥವಾ ಇಲ್ಲವೇ ಎಂಬುದನ್ನು ಖಾತರಿಪಡಿಸಿ ಎರಡು ವಾರಗಳಲ್ಲಿ ವರದಿ ಸಲ್ಲಿಸಬೇಕೆಂದು ಸೂಚನೆ ನೀಡಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.


'ಸರ್ಕಾರ ಕೋರ್ಟ್ ಆದೇಶ ಪಾಲಿಸಿಲ್ಲ'


ಸಾಕ್ಸ್‌, ಶೂ ನೀಡಿದ ಮಾಹಿತಿ ಪರಿಶೀಲಿಸಿದ ನ್ಯಾಯಪೀಠ, ಇದಕ್ಕೆ ಪುಷ್ಠೀಕರಿಸುವ ದಾಖಲೆ ಒದಗಿಸಿಲ್ಲ. ವಿದ್ಯಾರ್ಥಿಗಳಿಗೆ ಸಮವಸ್ತ್ರ ತಲುಪಿರುವುದು ದೇವರಿಗೆ ಮಾತ್ರ ಗೊತ್ತಾಗಬೇಕು. ಸರಕಾರವು ಕೋರ್ಟ್‌ ಆದೇಶ ಪಾಲಿಸಿಲ್ಲ. ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಒದಗಿಸಬೇಕೆಂಬ ಮನೋಭಾವ ಸರಕಾರಕ್ಕಿದ್ದರೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು. ನ್ಯಾಯಾಂಗ ನಿಂದನೆ ಆರೋಪದಿಂದ ತಪ್ಪಿಕೊಳ್ಳಬೇಕೆಂದು ಕೋರ್ಟ್‌ಗೆ ಸುಮ್ಮನೆ ಪ್ರಮಾಣಪತ್ರ ಸಲ್ಲಿಸಿದರೆ ಸಾಲದು ಎಂದು ಅಸಮಾಧಾನ ವ್ಯಕ್ತಪಡಿಸಿತು.


ಇದನ್ನೂ ಓದಿ: High Court: ಉತ್ಸವಗಳಿಗೆ ಕೋಟಿಗಟ್ಟಲೆ ಖರ್ಚು ಮಾಡ್ತೀರಿ, ಮಕ್ಕಳ ಯೂನಿಫಾರ್ಮ್‌ಗೆ ಹಣ ಇಲ್ವೇ? ಸರ್ಕಾರಕ್ಕೆ ಹೈಕೋರ್ಟ್ ಕ್ಲಾಸ್‌


ಅಲ್ಲದೇ ಸರ್ಕಾರದ ಪ್ರಮಾಣಪತ್ರವು ನ್ಯಾಯಾಲಯಕ್ಕೆ ತೃಪ್ತಿ ತಂದಿಲ್ಲ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಮವಸ್ತ್ರ ವಿತರಣೆಗೆ ಸರ್ಕಾರ ಹಣ ಬಿಡುಗಡೆ ಮಾಡಿದೆಯೇ? ಅದರಲ್ಲಿ ಎಷ್ಟು ಬಳಕೆಯಾಗಿದೆ ಎಂಬ ಬಗ್ಗೆ ಡಿಡಿಪಿಐಗಳು ದಾಖಲೆಗಳನ್ನು ಪಡೆದು ಪರಿಶೀಲಿಸಿ ಪ್ರಮಾಣಪತ್ರ ಸಲ್ಲಿಸಬೇಕೆಂದು ಸೂಚಿಸಿದ ಹೈಕೋರ್ಟ್, ಅದನ್ನು ಕಾನೂನು ಸೇವಾ ಪ್ರಾಧಿಕಾರದ ಮೂಲಕ ನ್ಯಾಯಾಲಯ ಮರು ಪರಿಶೀಲನೆ ನಡೆಸಲಿದೆ ಎಂದು ಹೇಳಿದೆ.


ಸರಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಜೊತೆ ಸಮವಸ್ತ್ರ, ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್‌ ನೀಡಬೇಕೆಂದು 2019ರ ಆ.28ರಂದು ನೀಡಿದ್ದ ಆದೇಶ ಪಾಲನೆಯಾಗಿಲ್ಲ ಎಂದು ಮಾಸ್ಟರ್‌ ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು

Published by:Avinash K
First published: