HOME » NEWS » State » KARNATAKA HOME MINISTER BASAVARAJ BOMMAI TESTS POSITIVE FOR COVID 19 HK

Basavaraj Bommai : ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೋನಾ ಸೋಂಕು ದೃಢ

ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದಾರೆ

news18-kannada
Updated:September 16, 2020, 3:10 PM IST
Basavaraj Bommai : ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಕೊರೋನಾ ಸೋಂಕು ದೃಢ
ಗೃಹ ಸಚಿವ ಬಸವರಾಜ​​ ಬೊಮ್ಮಾಯಿ
  • Share this:
ಬೆಂಗಳೂರು(ಸೆಪ್ಟೆಂಬರ್​.16): ಕೊರೋನಾ ಮಹಾಮಾರಿ ಅಟ್ಟಹಾಸ ಇಡೀ ಪ್ರಪಂಚ ದೇಶ ರಾಜ್ಯ ಸೇರಿದಂತೆ ಎಲ್ಲಾ ಕಡೆ ಹರಡುತ್ತಿದೆ. ಜನ ಸಾಮಾನ್ಯರ ಜೊತೆಗೆ ರಾಜಕಾರಣಿಗಳನ್ನು ಕೊರೋನಾ ಬಿಡುತ್ತಿಲ್ಲ. ಅದೇ ರೀತಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಧೃಡವಾಗಿದೆ. ಈ ವಿಷಯವನ್ನು ಸ್ವತಃ ಗೃಹ ಸಚಿವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಹೈಕಮಾಂಡ್ ಭೇಟಿಯಾಗಲು ಬಸವರಾಜ ಬೊಮ್ಮಾಯಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆ ನಾಳೆ ದೆಹಲಿಗೆ ತೆರಳಬೇಕಿತ್ತು. ಆದರೆ ಇದೀಗ ಬಸವರಾಜ ಬೊಮ್ಮಾಯಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನು ರದ್ದು ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಮ್ಮ ಮನೆಯಲ್ಲಿ ಕಾರ್ಯ ನಿರ್ವಹಿಸುವ ಹುಡುಗನಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಈ ಹಿನ್ನೆಲೆ ನಾನು ಸಹ ಪರೀಕ್ಷೆ ಒಳಪಟ್ಟಿದ್ದು, ನನಗೂ ಕೊರೋನಾ ಸೋಂಕು ಇರುವುದು ಧೃಡವಾಗಿದ್ದು ಯಾವುದೇ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದು, ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ. ಇತ್ತಿಚೆಗೆ ನನ್ನ ನೇರ ಸಂಪರ್ಕದಲ್ಲಿ ಬಂದವರು ಕೂಡಲೇ ಪರೀಕ್ಷೆ ಒಳಪಡುವಂತೆ ಹಾಗೂ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಕೋರುತ್ತೇನೆ.
ಇದನ್ನೂ ಓದಿ : ಕಲಬುರ್ಗಿ ಪೊಲೀಸರ ಮುಂದುವರಿದ ಕಾರ್ಯಾಚರಣೆ ; ಲಕ್ಷಾಂತರ ರೂಪಾಯಿ ಮೌಲ್ಯದ ಗುಟ್ಕಾ, ತಂಬಾಕು, ಗಾಂಜಾ ವಶಕ್ಕೆನಿನ್ನೆಯಷ್ಟೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಮತ್ತು ಹಾಸನ ಉಸ್ತುವಾರಿ ಸಚಿವರಾದ ಗೋಪಾಲಯ್ಯ ಅವರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.

ರೋಗ ಲಕ್ಷಣಗಳಿಲ್ಲದಿದ್ದರೂ ಸಚಿವ ಗೋಪಾಲಯ್ಯ ಅವರು ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Published by: G Hareeshkumar
First published: September 16, 2020, 3:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories