Corona: ನಮ್ಮ ಮೆಟ್ರೋ, ಬಿಎಂಟಿಸಿಯಲ್ಲಿ ಇನ್ನು ಮುಂದೆ ನಿಂತು ಪ್ರಯಾಣ ಮಾಡುವಂತಿಲ್ಲ
BMTC & METRO: ಬಿಎಂಟಿಸಿ ಬಿಟ್ಟು ಹೆಚ್ಚು ಜನರು ಸಂಚಾರ ಮಾಡುವ ಮೆಟ್ರೋದಲ್ಲೂ ಕೂಡ ಜನರ ದಟ್ಟಣೆ ಕಡಿಮೆ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಬೆಂಗಳೂರಿನ ಮೆಟ್ರೋ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ.
ಕೊರೊನಾ (Corona) ದೇಶದಲ್ಲಿ(Country) ಅಧಿಕವಾಗಿದೆ. ಹೊಸ ರೂಪಾಂತರ ಪಡೆದುಕೊಂಡು ಒಮೈಕ್ರಾನ್ (Omicron) ಎಂದು ಆರ್ಭಟಿಸುತ್ತಿರುವ ಮಹಾಮಾರಿ ಯಾವ ಸ್ವರೂಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತದೆ.. ಈಗಾಗಲೇ ಸೋಂಕಿಗೆ ಬೆದರಿ ಹಲವಾರು ರಾಜ್ಯಗಳು ಲಾಕ್ಡೌನ್ (Lockdown) ಮೊರೆ ಹೋಗಿವೆ. ಹೀಗಾಗಿ ರಾಜ್ಯದಲ್ಲಿಯೂ (State) ಸಹ ಕಟ್ಟುನಿಟ್ಟಿನ ಕ್ರಮ ಅನುಸರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಹಲವಾರು ಮಾರ್ಗಸೂಚಿಗಳನ್ನು (Guidelines) ಜಾರಿಗೆ ತಂದು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚನೆ ನೀಡಿದೆ. ಎಲ್ಲೂ ಬೆಂಗಳೂರು ಜನರ ಜೀವನಾಡಿಯಾಗಿರುವ ಮೆಟ್ರೋ ಹಾಗೂ ಬಿಎಂಟಿಸಿಯಲ್ಲಿ ಜನಸಂದಣಿ ಕಡಿಮೆ ಮಾಡಲು ಮಾರ್ಗಸೂಚಿ ಹೊರಡಿಸಿರುವ ಸರ್ಕಾರ ಬಿಎಂಟಿಸಿ ಹಾಗೂ ಮೆಟ್ರೋದಲ್ಲಿ ಪ್ರಯಾಣಿಕರು ಹಾಸನ ಗಳನ್ನು ಮೀರಿ ಪ್ರಯಾಣಿಸುವುದಕ್ಕೆ ಯಾವುದೇ ಅನುಮತಿ ಇಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ (Revenue Minister R Ashok) ತಿಳಿಸಿದ್ದಾರೆ.
ಬಿಎಂಟಿಸಿ ಬಸ್ಸಿನಲ್ಲಿ ನಿಂತು ಪ್ರಯಾಣಿಸಲು ಅವಕಾಶ ಇಲ್ಲ
ನಿನ್ನೆ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆ ನಡೆಯಿತು. ಆ ಸಭೆಯಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಸಹಿತ ಹಲವು ಅಧಿಕಾರಿಗಳು ಭಾಗವಹಿಸಿದ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳನ್ನು ಕಂದಾಯ ಸಚಿವ ಆರ್ ಅಶೋಕ್ ಹಾಗೂ ಆರೋಗ್ಯ ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಕಂದಾಯ ಸಚಿವ ಅಶೋಕ್ ಅವರು ಕೊರೋನಾ ಹಿನ್ನೆಲೆ ಜನಸಂದಣಿ ಕಡಿಮೆ ಮಾಡಲು ಬಿಎಂಟಿಸಿ ಬಸ್ಗಳಲ್ಲಿ ನಿಂತು ಪ್ರಯಾಣ ಮಾಡುವುದಕ್ಕೆ ಇನ್ನು ಮುಂದೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಬಿಎಂಟಿಸಿ ಬಿಟ್ಟು ಹೆಚ್ಚು ಜನರು ಸಂಚಾರ ಮಾಡುವ ಮೆಟ್ರೋದಲ್ಲೂ ಕೂಡ ಜನರ ದಟ್ಟಣೆ ಕಡಿಮೆ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಬೆಂಗಳೂರಿನ ಮೆಟ್ರೋ ರೈಲುಗಳಲ್ಲಿ ಆಸನ ಸಾಮರ್ಥ್ಯದಷ್ಟೇ ಪ್ರಯಾಣಿಕರ ಸಂಚಾರಕ್ಕೆ ಅನುಮತಿ ನೀಡಲಾಗುತ್ತದೆ. ನಿಂತು ಪ್ರಯಾಣಿಸಲು ಅನುಮತಿ ಇರುವುದಿಲ್ಲ. ಈ ಕುರಿತು ಮೆಟ್ರೊ ನಿಗಮದಿಂದ ಅಧಿಕೃತ ಮಾಹಿತಿ ಪ್ರಕಟವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ .
ವೀಕೆಂಡ್ ಕರ್ಫ್ಯೂ ವೇಳೆ ಏನಿರುತ್ತದೆ..?
* ಪಬ್ಗಳು / ಕ್ಲಬ್ಗಳು / ರೆಸ್ಟೋರೆಂಟ್ಗಳು / ಬಾರ್ಗಳು / ಹೋಟೆಲ್ಗಳು/ ಹೋಟೆಲ್ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿ, ಆಸನ ಸಾಮರ್ಥ್ಯದ ಶೇ 50ರಷ್ಟು ಕೊವಿಡ್ ಸೂಕ್ತ ನಡವಳಿಕೆಗೆ ಕಟ್ಟುನಿಟ್ಟಾಗಿ ಬದ್ಧವಾಗಿರುತ್ತವೆ. ಅಂತಹ ಸ್ಥಳಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ನಿರ್ಬಂಧಿಸಲಾಗುತ್ತದೆ.
* ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮಾತ್ರ BMRCL ಕಾರ್ಯ ನಿರ್ವಹಣೆ.
ವಾರಾಂತ್ಯದ ನಿಷೇಧಾಜ್ಞೆ ವೇಳೆ ಏನಿರಲ್ಲ?
* ಬೆಂಗಳೂರು ನಗರ ಜಿಲ್ಲೆಯಲ್ಲಿ ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹೊರತುಪಡಿಸಿ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು 06-01-2022 ರಿಂದ ಜಾರಿಗೆ ಬರುವಂತೆ 10, 11 ಮತ್ತು 12 ನೇ ತರಗತಿಗಳನ್ನು ಹೊರತುಪಡಿಸಿ ಎಲ್ಲಾ ಶಾಲಾ-ಕಾಲೇಜುಗಳು ಮುಚ್ಚಲ್ಪಡುತ್ತವೆ.
* ಸಿನಿಮಾ ಹಾಲ್ಗಳು / ಮಲ್ಟಿಪ್ಲೆಕ್ಸ್ಗಳು / ಥಿಯೇಟರ್ಗಳು / ರಂಗಮಂದಿರಗಳು / ಆಡಿಟೋರಿಯಂ ಮತ್ತು ಅದರ ಆಸನ ಸಾಮರ್ಥ್ಯದ 50% ರಷ್ಟು ಕಾರ್ಯನಿರ್ವಹಿಸಲು ಕೋವಿಡ್ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು. ಅಂತಹ ಸ್ಥಳಗಳಲ್ಲಿ ಸಂಪೂರ್ಣ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಪ್ರವೇಶಕ್ಕೆ ಅನುಮತಿಸಲಾಗುತ್ತದೆ.
* ಮಾಲ್ಗಳು, ಶಾಪಿಂಗ್ ಕಾಂಪ್ಲೆಕ್ಸ್ಗಳು, ಎಲ್ಲಾ ಅದ್ವಿತೀಯ ಅಂಗಡಿಗಳು ಮತ್ತು ಸಂಸ್ಥೆಗಳು ವಾರದ ದಿನಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ವಾರಾಂತ್ಯದಲ್ಲಿ ಅನುಮತಿ ಇರುವುದಿಲ್ಲ.
* ಎಲ್ಲಾ ರ್ಯಾಲಿಗಳು, ಧರಣಿಗಳು, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ.