ನನ್ನನ್ನೇ ಟಾರ್ಗೆಟ್ ಮಾಡ್ತಿದ್ದಾರೆ! 4ನೇ ಸಲ ರಾಜೀನಾಮೆ ನೀಡಿದ ಹಿರಿಯ ಐಪಿಎಸ್ ಅಧಿಕಾರಿ

ಸರ್ಕಾರ ನನ್ನ ಮನವಿಯನ್ನ ಪರಿಗಣಿಸಿಲ್ಲ. ಬದಲಾಗಿ ಕಿರುಕುಳ ನೀಡಲೆಂದೇ ವರ್ಗಾವಣೆ ಮಾಡಿದ್ದಾರೆ. ಬೇಸತ್ತು ನನ್ನ ಹುದ್ದೆಗೆ ರಾಜಿನಾಮೆ ಸಲ್ಲಿಸುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಡಿಜಿಪಿ ರವೀಂದ್ರನಾಥ್

ಡಿಜಿಪಿ ರವೀಂದ್ರನಾಥ್

 • Share this:
  ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿಯೋರ್ವರು (Senior IPS Officer Resign)  ರಾಜೀನಾಮೆ ಸಲ್ಲಿಸಿದ್ದಾರೆ. ಅವಧಿಪೂರ್ವ ವರ್ಗಾವಣೆ ಹಿನ್ನೆಲೆಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿದ್ದ  ರವೀಂದ್ರನಾಥ್ (Dr. P Ravindranath Resign) ರಾಜೀನಾಮೆ ಸಲ್ಲಿಸಿದ್ದಾರೆ. ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಸಿ ಐಪಿಎಸ್ ಹುದ್ದೆಗೇರಿದ್ದ ಪ್ರಕರಣದಲ್ಲಿ (Fake Caste Certificate) ತನಿಖೆ ಆರಂಭಿಸಿದ್ದ ರವೀಂದ್ರನಾಥ್ ಅವರು ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ನೊಟೀಸ್ ನೀಡಿದ್ದ ಬಳಿಕ ರವೀಂದ್ರನಾಥ್​ರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿತ್ತು. ಅವರನ್ನು ಕರ್ನಾಟಕ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಗೊಳಿಸಲಾಗಿತ್ತು. ಸದ್ಯ ಅವರು ಈ ಹುದ್ದೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

  1989 ಬ್ಯಾಚ್ ಅಧಿಕಾರಿಯಾಗಿರುವ ರವೀಂದ್ರನಾಥ್  ಅವರು ರಾಜೀನಾಮೆ ನೀಡುವುದು ಮತ್ತು ನಂತರ ತಮ್ಮ ರಾಜೀನಾಮೆ ಪತ್ರಗಳನ್ನು ಹಿಂತೆಗೆದುಕೊಳ್ಳುವ ಮೂಲಕ ಪ್ರಸಿದ್ಧರಾಗಿದ್ದರು.

  ಈ ಮುನ್ನ ಮೂರು ಬಾರಿ ರಾಜೀನಾಮೆ ಸಲ್ಲಿಸಿದ್ದರು
  ಅವರು ಈಮುನ್ನ ಒಟ್ಟು ಮೂರು ಬಾರಿ ರಾಜೀನಾಮೆ ಸಲ್ಲಿಸಿದ್ದಾರೆ. 2008, 2014 ಮತ್ತು 2020 ರಲ್ಲಿ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. ರಾಜೀನಾಮೆ ಸಲ್ಲಿಸಿದ ನಂತರ ಮಾತನಾಡಿದ ಅವರು, ನಾನು ಅತ್ಯಂತ ನೋವಿನಿಂದ ಈ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  ಇದನ್ನೂ ಓದಿ:  B.C Nagesh: ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ ಇಲ್ಲ; ಟಫ್​ ರೂಲ್ಸ್​ ಜಾರಿ

  ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದೆ. ಎಸ್ಎಸ್ಟಿ ಕಾಯ್ದೆಯಡಿ ಪೊಲೀಸ್ ಸಿಬ್ಬಂದಿಗೆ ಭದ್ರತಾ ಸಮಿತಿ ರಚಿಸಲು ಕೋರಿದ್ದೆ. ಆದರೆ ಸರ್ಕಾರ ನನ್ನ ಮನವಿಯನ್ನ ಪರಿಗಣಿಸಿಲ್ಲ. ಬದಲಾಗಿ ಕಿರುಕುಳ ನೀಡಲೆಂದೇ ವರ್ಗಾವಣೆ ಮಾಡಿದ್ದಾರೆ. ಬೇಸತ್ತು ನನ್ನ ಹುದ್ದೆಗೆ ರಾಜಿನಾಮೆ ಸಲ್ಲಿಸುತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  ಪಿತೂರಿಯಿಂದ ನನ್ನ ವರ್ಗಾವಣೆ
  ಡಿಜಿಪಿ ರವೀಂದ್ರನಾಥ್ ರಾಜೀನಾಮೆ ಹಿನ್ನೆಲೆಯಲ್ಲಿ ಸೇವಾ ನಿಯಮಗಳ ಪ್ರಕಾರ ಎರಡು ವರ್ಷ ವರ್ಗಾವಣೆ ಮಾಡುವಂತಿಲ್ಲ. ಕೆಲ ಅಧಿಕಾರಿಗಳ ಪಿತೂರಿಯಿಂದ ನನ್ನ ವರ್ಗಾವಣೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.  ನಕಲಿ ಜಾತಿ ಪ್ರಮಾಣ ಪತ್ರ ಸಂಬಂಧ ಕಾನೂನು ಹೋರಾಟ ನಡೆಸುತ್ತಿದ್ದ ಅಧಿಕಾರಿ ರವೀಂದ್ರನಾಥ್  ಅವರು  ಈ ಬಗ್ಗೆ ಲೀಗಲ್ ನೋಟಿಸ್ ಸಹ ಕೊಡಿಸಿದ್ದರು ಎಂದು ಇಲ್ಲಿ ಉಲ್ಲೇಖಿಸಬಹುದು.

  ತಪ್ಪು ಸಂದೇಶ ಹೋಗಬಾರದು
  ನನ್ನ ವರ್ಗಾವಣೆ ವಿರುದ್ಧ ಜನರಿಗೆ ತಪ್ಪು ಸಂದೇಶಗಳು ಹೋಗಬಾರದು. ಜವಾಬ್ದಾರಿಯುತ ಅಧಿಕಾರಿಯಾಗಿ ಮಾತನಾಡುತ್ತಿದ್ದೇನೆ. ಮುಖ್ಯವಾಗಿ ನಾನು ಐಪಿಎಸ್ ಅಧಿಕಾರಿಯಾಗಿ ಸಂವಿಧಾನ ಎತ್ತಿ ಹಿಡಿಯುವ ಶಪಥ ಮಾಡಿರುತ್ತೇವೆ.

  ಇದನ್ನೂ ಓದಿ: BBMP ಎಲೆಕ್ಷನ್ ನಡೆಸುವಂತೆ ಸುಪ್ರೀಂಕೋರ್ಟ್​ ಮಹತ್ವದ ಆದೇಶ; ಶೀಘ್ರವೇ ನೋಟಿಫಿಕೇಷನ್ ಹೊರಡಿಸಲು ಸೂಚನೆ

  1995ರಲ್ಲೇ ಎಸ್.ಎಸ್ಟಿ ಕಾಯ್ದೆ ಜಾರಿಯಲ್ಲಿದೆ. ಪೊಲೀಸ್ ಇಲಾಖೆಯಲ್ಲಿ ಕಾಯ್ದೆ ಜಾರಿಯಾಗಬೇಕು ಎಂದು ಮನವಿ ಮಾಡಿದ್ದೇನೆ. ಪದೇ ಪದೇ ಕೇಳಿದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದ್ದು ಬೇಸರ ತಂದಿದೆ. ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ನಾನು ಸಮರ ಸಾರಿದ್ದೆ. ಈ ಹಂತದಲ್ಲೇ ನನ್ನ ವರ್ಗಾವಣೆ ನನಗೆ ಬೇಸರ ತಂದಿದೆ. ನನ್ನ ವರ್ಗಾವಣೆ ವಿರುದ್ಧ ಜನರಿಗೆ ತಪ್ಪು ಸಂದೇಶಗಳು ಹೋಗಬಾರದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

  ಜವಾಬ್ದಾರಿಯುತವಾಗೇ ನಡೆದುಕೊಳ್ತಿದ್ದೇನೆ
  ಜವಾಬ್ದಾರಿಯುತ ಅಧಿಕಾರಿಯಾಗಿ ಮಾತನಾಡುತ್ತಿದ್ದೇನೆ. ನಾನು ಮಾಜಿ ಅಧಿಕಾರಿಯೊಬ್ಬರಿಗೆ ನೊಟೀಸ್ ನೀಡಿದ್ದೆ. ಅವರು ವಕೀಲರ ಮೂಲಕ 10 ದಿನಗಳ ಕಾಲಾವಕಾಶವನ್ನ ಕೇಳಿದ್ದಾರೆ. ಆದರೆ ಅದರ ನಡುವೆಯೇ ನನ್ನನ್ನ ವರ್ಗಾವಣೆ ಮಾಡಲಾಗಿದೆ. ನನ್ನ ವರ್ಗಾವಣೆಯಲ್ಲಿ ಈ ಪ್ರಕರಣದ ಪಾತ್ರ ಇದೆ ಎಂದು ಡಿಜಿಪಿ ರವೀಂದ್ರನಾಥ್ ಆರೋಪಿಸಿದ್ದಾರೆ.
  Published by:guruganesh bhat
  First published: