SSLC Result 2020: ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ: ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದ ಸುರೇಶ್​​ ಕುಮಾರ್​

S Sureh Kumar: ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ, ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ ಸುರೇಶ್​​ ಕುಮಾರ್​​.

news18-kannada
Updated:August 10, 2020, 8:52 AM IST
SSLC Result 2020: ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ: ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿದ ಸುರೇಶ್​​ ಕುಮಾರ್​
ಸಚಿವ ಸುರೇಶ್​ ಕುಮಾರ್
  • Share this:
ಬೆಂಗಳೂರು(ಆ.10): 2019-20ನೇ ಸಾಲಿನ ಎಸ್ಎಸ್ಎಲ್​​ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಹಾಗಾಗಿ ಎಸ್​ಎಸ್​ಎಲ್​​ಸಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಆತ್ಮಸ್ಥೈರ್ಯ ತುಂಬಿದ್ದಾರೆ. ವಿದ್ಯಾರ್ಥಿಗಳ ಪೋಷಕರಿಗೆ ತಮ್ಮ ಫೇಸ್​​ಬುಕ್​​​ ಖಾತೆ ಮೂಲಕ ಆತ್ಮಸ್ಥೈರ್ಯ ತುಂಬಿರುವ ಸಚಿವ ಸುರೇಶ್​​ ಕುಮಾರ್​​, ಇಂದು ದಿನಾಂಕ 10-08-2020 ಮಧ್ಯಾಹ್ನ 3.30ರ ಹೊತ್ತಿಗೆ ಎಸ್​ಎಸ್​ಎಲ್​​ಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ. ತಮ್ಮ ಮೊಬೈಲಿಗೆ ಫಲಿತಾಂಶ ಬರುವುದರಿಂದ ಕೊರೋನಾ ವಾತಾವರಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿರುವುದೇ ದೊಡ್ಡ ಸಾಧನೆ ಎಂಬುದು ತಮಗೆ ತಿಳಿದಿರಲಿ ಎಂದಿದ್ದಾರೆ.

ತಮ್ಮ ಮಕ್ಕಳ ಫಲಿತಾಂಶ ಎಷ್ಟೇ ಆಗಿರಲಿ, ಅವರಿಗೆ ಹೇಳುವಾಗ ನಿಧಾನವಾಗಿ ಪ್ರೀತಿಯಿಂದ ತಿಳಿಸಿ. ಗಳಿಸಿದ ಅಂಕಗಳಿಗೆ ತೃಪ್ತಿ ಪಡುವಂತೆ ಮನವೊಲಿಸಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬಿ ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ ಸುರೇಶ್​​ ಕುಮಾರ್​​.

ಫಲಿತಾಂಶ ಬಂದ ಬಳಿಕ ವಿದ್ಯಾರ್ಥಿಗಳನ್ನು ಬೇರೆಯವರೊಂದಿಗೆ ಹೋಲಿಕೆ ಮಾಡಿ ನೋವಾಗುವಂತೆ ಮಾಡಬೇಡಿ. ಅವರು ಯಾವ ಕೋರ್ಸನ್ನು ಆಯ್ಕೆ ಮಾಡಿದ್ದರೂ ಆ ಕೋರ್ಸಿಗೆ ಸೇರಿಸಿ ಮುಂದೆ ಚೆನ್ನಾಗಿ ಓದಲು ಹೇಳಿ. ಒಂದು ವೇಳೆ ಅವರ ನಿರೀಕ್ಷೆಗಿಂತ ಯಾವುದಾದರೂ ವಿಷಯದಲ್ಲಿ ಕಡಿಮೆ ಅಂಕ ಬಂದಲ್ಲಿ ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಮಗು ಮನೆಯ ಬೆಳಕು ಆ ಬೆಳಕು ಸದಾ ಪ್ರಜ್ವಲಿಸಲಿ ಎಂಬುದೇ ನಮ್ಮೆಲ್ಲರ ಆಶಯ ಎಂದು ಎಸ್​ ಸುರೇಶ್​ ಕುಮಾರ್​​​​ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ: Karnataka SSLC Result 2020: ಇಂದು ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ; ವಿದ್ಯಾರ್ಥಿಗಳ ಮೊಬೈಲ್​ಗೆ ಬರಲಿದೆ ರಿಸಲ್ಟ್

ಇಂದು ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್​​ಸಿ ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್​​ಎಂಎಸ್​​​​ ಮೂಲಕ ಫಲಿತಾಂಶ ಬರಲಿದೆ. ಜತೆಗೆ ವೆಬ್​ಸೈಟ್​ನಲ್ಲೂ ಫಲಿತಾಂಶ ಪ್ರಕಟವಾಗಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ.
Published by: Ganesh Nachikethu
First published: August 10, 2020, 8:36 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading