ಬೆಂಗಳೂರು (ಫೆ. 9): ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪ್ಚಂದ್ರ ಶೆಟ್ಟಿ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈಗಾಗಲೇ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹಮದ್ ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನ ಪರಿಷತ್ ಸದನದಲ್ಲಿ ಗಲಾಟೆ ನಡೆದ ಬಳಿಕ ಕೆಲವು ದಿನಗಳ ಹಿಂದೆ ಕೆ. ಪ್ರತಾಪ್ಚಂದ್ರ ಶೆಟ್ಟಿ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾಗಿರುವ ಸಭಾಪತಿ ಹುದ್ದೆಗೆ ಇಂದು ಚುನಾವಣೆ ನಡೆಯಲಿದೆ. ಉಪಸಭಾಪತಿ ಆಯ್ಕೆ ವೇಳೆಯಲ್ಲೇ ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿಯಾಗಿದೆ. ಇದೀಗ ಸಭಾಪತಿ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಅರಳಿ ನಿಂತ ಕಾಫಿ ಹೂವು; ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ ಕಾಫಿ ತೋಟಗಳು
ನಿನ್ನೆ ಬಸವರಾಜ ಹೊರಟ್ಟಿ ಮತ್ತು ನಜೀರ್ ಅಹಮದ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನ ಪರಿಷತ್ನಲ್ಲಿ 75 ಸದಸ್ಯ ಬಲವಿದೆ. ವಿಧಾನ ಪರಿಷತ್ 31 ಬಿಜೆಪಿ, 13 ಜೆಡಿಎಸ್, 28 ಕಾಂಗ್ರೆಸ್ ಸದಸ್ಯರನ್ನು ಹೊಂದಿದೆ. ಈಗಾಗಲೇ ಉಪ ಸಭಾಪತಿ ಸ್ಥಾನವನ್ನು ಬಿಜೆಪಿಗೆ ಬಿಟ್ಟು ಕೊಟ್ಟಿರುವ ಜೆಡಿಎಸ್ಗೆ ನಿರಾಯಾಸವಾಗಿ ಸಭಾಪತಿ ಪಟ್ಟ ಒಲಿಯಲಿದೆ ಎಂದೇ ಹೇಳಲಾಗುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ಗೆ ಸೋಲು ಖಚಿತ ಎಂದು ಗೊತ್ತಿದ್ದರೂ ಸಭಾಪತಿ ಸ್ಥಾನಕ್ಕೆ ನಜೀರ್ ಅಹಮದ್ ಅವರನ್ನು ಕಣಕ್ಕೆ ಇಳಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ