• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಸತ್ಯ ತಿಳಿಯದೆ ನಮ್ಮ ತೇಜೋವಧೆ ಮಾಡಬಾರದೆಂದು ಕಾನೂನಿನ ಮೊರೆ ಹೋಗಿದ್ದೇವೆ; ಸಚಿವ ಬಿ.ಸಿ. ಪಾಟೀಲ್

ಸತ್ಯ ತಿಳಿಯದೆ ನಮ್ಮ ತೇಜೋವಧೆ ಮಾಡಬಾರದೆಂದು ಕಾನೂನಿನ ಮೊರೆ ಹೋಗಿದ್ದೇವೆ; ಸಚಿವ ಬಿ.ಸಿ. ಪಾಟೀಲ್

ಬಿ.ಸಿ. ಪಾಟೀಲ್.

ಬಿ.ಸಿ. ಪಾಟೀಲ್.

ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ ಹೋದ ಸಚಿವರಾದ ಶಿವರಾಮ್ ಹೆಬ್ಬಾರ್, ಎಸ್​.ಟಿ ಸೋಮಶೇಖರ್​, ನಾರಾಯಣ ಗೌಡ, ಭೈರತಿ ಬಸವರಾಜ್​, ಬಿ.ಸಿ ಪಾಟೀಲ್​, ಡಾ. ಕೆ. ಸುಧಾಕರ್​​ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ ಮೊರೆ ಹೋಗಿದ್ದಾರೆ. ಈ ನಡೆಯನ್ನು ಸಚಿವ ಬಿ.ಸಿ. ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.

ಮುಂದೆ ಓದಿ ...
  • Share this:

ಬೆಂಗಳೂರು (ಮಾ. 6): ಮಾಧ್ಯಮಗಳಲ್ಲಿ ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ 6 ಸಚಿವರು ಕೋರ್ಟ್​ಗೆ ಮೊರೆ ಹೋದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಚಿವ ಬಿ.ಸಿ ಪಾಟೀಲ್, ಗಾಡ್​ಫಾದರ್ ಇಲ್ಲದೆ ಇಷ್ಟು ಎತ್ತರಕ್ಕೆ ಬೆಳೆದ ನಮ್ಮ ಹೆಸರನ್ನು ಯಾರೂ ಕೆಡಿಸಬಾರದು ಎಂಬ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ ಎಂದಿದ್ದಾರೆ.


ಒಬ್ಬ ರೈತನ ಮಗನಾಗಿ ಯಾವುದೇ ಗಾಡ್ ಫಾದರ್ ಇಲ್ಲದೇ ನಾನು ಇಷ್ಟರ ಮಟ್ಟಕ್ಕೆ ಬೆಳೆದುಬಂದಿದ್ದು ಬಹಳಷ್ಟು ಜನರಿಗೆ ಸಹಿಸಲು ಆಗುತ್ತಿಲ್ಲ. ಯಾವುದೋ ಕುತಂತ್ರಿಗಳ ರಾಜಕೀಯ ಷಡ್ಯಂತ್ರಕ್ಕೆ ನಮ್ಮ ಹೆಸರನ್ನು ಹಾಳು ಮಾಡಿಕೊಳ್ಳಲು ನಮಗೆ ಇಷ್ಟವಿಲ್ಲ. ವಿನಾಕಾರಣ ಸತ್ಯಾಸತ್ಯತೆ ಅರಿಯದೆ ನಮ್ಮ ತೇಜೋವಧೆ ಆಗಬಾರದು ಎಂಬ ದೃಷ್ಟಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾನೂನಿನ ಮೊರೆ ಹೋಗಿದ್ದೇವೆ ಎಂದು ಸಚಿವ ಬಿ.ಸಿ. ಪಾಟೀಲ್ ಟ್ವೀಟ್ ಮಾಡಿದ್ದಾರೆ.



ಟ್ವೀಟ್ ಮಾಡುವ ಮೂಲಕ ಕೋಟ್೯ ಮೊರೆ ಹೋಗಿದ್ದನ್ನು ಸಮರ್ಥಿಸಿಕೊಂಡ ಸಚಿವ ಬಿ.ಸಿ ಪಾಟೀಲ್, ಸತ್ಯಾಸತ್ಯತೆ ಅರಿಯದೆ ನಮ್ಮ ವಿರುದ್ಧ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದು ಎಂದು ಕೋರ್ಟಿಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: K Sudhakar: ಜೀವನವಿಡೀ ಗಳಿಸಿದ ಹೆಸರು ಉಳಿಸಿಕೊಳ್ಳಲು ಕೋರ್ಟ್​ ಮೊರೆ; ಸಚಿವ ಡಾ. ಸುಧಾಕರ್ ಸ್ಪಷ್ಟನೆ


ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ರಾಜ್ಯ ಸರ್ಕಾರದ ಆರು ಸಚಿವರು ಕೋರ್ಟ್ ಮೊರೆ ಹೋಗಿದ್ದಾರೆ. ಈ 6 ಸಚಿವರ ನಡೆ ತೀವ್ರ ಕುತೂಹಲ ಮೂಡಿಸಿದ್ದು, ಚರ್ಚೆಗೂ ಕಾರಣವಾಗಿತ್ತು. ವಕೀಲ ಚೆನ್ನಬಸಪ್ಪ ಅವರ ಮೂಲಕ ಸಿಟಿ ಸಿವಿಲ್ ಕೋರ್ಟ್​ನಲ್ಲಿ 6 ಸಚಿವರು ಅರ್ಜಿ ಹಾಕಿದ್ದಾರೆ. ಕಾಂಗ್ರೆಸ್​ನಿಂದ ಬಿಜೆಪಿಗೆ ವಲಸೆ ಹೋದ ಸಚಿವರಾದ ಶಿವರಾಮ್ ಹೆಬ್ಬಾರ್, ಎಸ್​.ಟಿ ಸೋಮಶೇಖರ್​, ನಾರಾಯಣ ಗೌಡ, ಭೈರತಿ ಬಸವರಾಜ್​, ಬಿ.ಸಿ ಪಾಟೀಲ್​, ಡಾ. ಕೆ. ಸುಧಾಕರ್​​ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ ಮೊರೆ ಹೋಗಿದ್ದಾರೆ. 67 ಸುದ್ದಿ ಸಂಸ್ಥೆಗಳನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ಸಾಮಾಜಿಕ ಕಾರ್ಯಕರ್ತ ರಾಜಶೇಖರ್ ಮುಲಾಲಿಯನ್ನು 68ನೇ ಪ್ರತಿವಾದಿಯನ್ನಾಗಿ ಮಾಡಲಾಗಿದೆ.


ಇನ್ನೂ ಕೆಲವು ರಾಜಕಾರಣಿಗಳ ಸಿಡಿ ಬಿಡುಗಡೆಯ ಸಾಧ್ಯತೆ ಬಗ್ಗೆ ಹೇಳಿಕೆ ನೀಡಿದ್ದ ರಾಜಶೇಖರ್ ಮುಲಾಲಿ ಅವರನ್ನು ಕೂಡ ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಜೊತೆಗೆ, ಫೇಸ್ ಬುಕ್, ಟ್ವಿಟರ್, ವಾಟ್ಸಾಪ್, ಯೂಟ್ಯೂಬ್ ಅನ್ನು ಸಹ ಸಚಿವರ ಪರ ವಕೀಲರು ಪ್ರತಿವಾದಿಯನ್ನಾಗಿ ಮಾಡಿದ್ದಾರೆ.


ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷವಾಗಿ ಕಂಡರೂ ಪ್ರಮಾಣಿಸಿ ನೋಡಬೇಕು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ. ಸತ್ಯ ಹೊಸಿಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದರು. ಅದರ ಬೆನ್ನಲ್ಲೇ ಸಚಿವ ಬಿ.ಸಿ. ಪಾಟೀಲ್ ಕೂಡ ತಮ್ಮ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

First published: